Mangaluru ಅಪಘಾತ ಪ್ರಕರಣ: ಟ್ಯಾಂಕರ್ ಚಾಲಕನಿಗೆ 6 ತಿಂಗಳು ಸಜೆ
Team Udayavani, Aug 18, 2023, 9:28 PM IST
ಮಂಗಳೂರು: ಬೈಕಂಪಾಡಿಯಲ್ಲಿ ಸ್ಕೂಟರ್‌ಗೆ ಟ್ಯಾಂಕರ್ ಡಿಕ್ಕಿಯಾದ ಪ್ರಕರಣದ ಆರೋಪ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಾಬೀತಾಗಿದ್ದು ಆಪರಾಧಿಗೆ 6 ತಿಂಗಳ ಸಜೆ ವಿಧಿಸಿ ತೀರ್ಪು ನೀಡಿದೆ.
ಪ್ರವೀಣ್ ವಸೂತಿ ಶಿಕ್ಷೆಗೊಳಗಾದ ಅಪರಾಧಿ. ಉಜಿರೆ ಕುಳೂರು ಅಬ್ದುಲ್ ರಹೀಂ ಎಂಬವರು 2021ರ ನ.11ರಂದು ಬೆಳಗ್ಗೆ 9.20ರ ವೇಳೆಗೆ ತನ್ನ ಸ್ಕೂಟರ್‌ನಲ್ಲಿ ಪಣಂಬೂರು ಜಂಕ್ಷನ್ ಕಡೆಯಿಂದ ಬೈಕಂಪಾಡಿ ಕಡೆಗೆ ತೆರಳುತ್ತಿದ್ದಾಗ ಜೋಕಟ್ಟೆಯ ಸಮೀಪ ತಲುಪುತ್ತಿದ್ದಂತೆ ಪಣಂಬೂರು ಜಂಕ್ಷನ್ ಕಡೆಯಿಂದ ಬೈಕಂಪಾಡಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಚಾಲಕ ಪ್ರವೀಣ್ ಮಸೂತಿ ದುಡುಕು ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿಪಡಿಸಿದ್ದ. ಪರಿಣಾಮವಾಗಿ ರಹೀಂ ಅವರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿ ಪರೀಕ್ಷಿಸಿದ ವೈದ್ಯರು ರಹೀಂ ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .
ನ್ಯಾಯಾಲಯವು ಸಾಕ್ಷಿ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಅಪರಾಧಿಗೆ 6 ತಿಂಗಳ ಕಾಲ ಸಾದಾ ಶಿಕ್ಷೆ ಹಾಗೂ 6000 ರೂ. ದಂಡವನ್ನು ವಿಧಿಸಿ ತೀರ್ಪು ನೀಡಿದೆ. ದಂಡ ತೆರಲು ತಪ್ಪಿದಲ್ಲಿ 3 ತಿಂಗಳು 10 ದಿನಗಳ ಕಾಲ ಸಾಧಾ ಶಿಕ್ಷೆ ವಿಧಿಸಿ ನ್ಯಾಯಾಧೀಶೆಯಾದ ಅಂಜಲಿ ಶರ್ಮಾ ಅವರು ತೀರ್ಪು ನೀಡಿದ್ದಾರೆ.
ಮೊಹಮ್ಮದ್ ಷರೀಫ್ ಪ್ರಕರಣವನ್ನು ದಾಖಲಿಸಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಸರಕಾದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಗೀತಾ ರೈ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.