![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 19, 2023, 7:07 PM IST
ಕುಮಟಾ : ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕಾಂದೂ ಅವರು ತಾಲೂಕಿನ ಬಾಡ ಗ್ರಾಮ ಪಂಚಾಯತ್ ಪಿಡಿಓ ಕಮಲಾ ಹರಿಕಂತ್ರ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ತಾಲೂಕಿನ ಬಾಡದ ನಿವಾಸಿ ನಂದಾ ಪರಮೇಶ್ವರ ನಾಯ್ಕ ಎನ್ನುವವರು ಕಳೆದ ಹಲವಾರು ವರ್ಷಗಳಿಂದ ಬಾಡದ ಗ್ರಾ.ಪಂ ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು 2018ರಲ್ಲಿ ಅಂದಿನ ಪಿಡಿಓ ಅವರು ಕೆಲಸದಿಂದ ವಜಾ ಮಾಡಿದ್ದರು. ನಂತರ ಪಂಚಾಯತ್‌ನಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಇನ್ನೊಬ್ಬ ಮಹಿಳೆಯನ್ನು ಕಂಪ್ಯೂಟರ್ ಆಪರೇಟರ್ ಆಗಿ ನೇಮಕ ಮಾಡಿಕೊಂಡಿದ್ದರು.
ಈ ಆದೇಶವನ್ನು ಪ್ರಶ್ನಿಸಿ ನಂದಾ ಅವರು ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ಕೈಗೊಂಡ ನ್ಯಾಯಾಧೀಶರು ಆದೇಶ ಮಾಡಿದ್ದು, ಆದೇಶದಲ್ಲಿ ಈಗಿರುವ ಕಂಪ್ಯೂಟರ್ ಆಪರೇಟರ್‌ಗೂ ಹಾಗೂ ನಂದಾ ಅವರಿಗೂ ಯಾವುದೇ ತೊಂದರೆಯಾಗದಂತೆ ಇವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ನ್ಯಾಯಾಲಯದ ತೀರ್ಪುನ್ನು ಪಿಡಿಒ ಕಮಲಾ ಹರಿಕಂತ್ರ ಅವರನ್ನು ಪಾಲಿಸಿರಲಿಲ್ಲ ಎನ್ನಲಾಗಿದ್ದು, ಅಲ್ಲದೇ ಈ ಸಂಬಂಧ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದೂ ಅವರು ನೀಡಿದ ನೋಟಿಸ್‌ಗೂ ಯಾವುದೇ ಸಮರ್ಪಕ ಉತ್ತರ ನೀಡಿರಲಿಲ್ಲ. ಹೀಗಾಗಿ ಈ ಬಗ್ಗೆ ಕ್ರಮ ಕೈಗೊಂಡ ಜಿಪಂ ಸಿಇಓ ಅವರು ಬಾಡ ಗ್ರಾಪಂ ಪಿಡಿಓ ಕಮಲಾ ಹರಿಕಂತ್ರ ಅವರನ್ನು ಅಮಾನತುಗೊಳಿಸಿ, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆಂದು ಎಂದು ತಾಲೂಕು ಪಂಚಾಯತ್ ಇಓ ನಾಗರತ್ನ ನಾಯಕ ಅವರು ತಿಳಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.