Chandrayaan-3: ಕೊನೆಯ ಹಂತದ ಡಿಬೂಸ್ಟಿಂಗ್ ಯಶಸ್ವಿ, ಎಲ್ಲರ ಚಿತ್ತ 23ರ ಲ್ಯಾಂಡಿಂಗ್ ನತ್ತ
Team Udayavani, Aug 20, 2023, 12:53 PM IST
ನವದೆಹಲಿ: ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ 3 ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಎರಡನೇ ಮತ್ತು ಅಂತಿಮ ಹಂತದ ಡೀಬೂಸ್ಟಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಇಸ್ರೋ ಹೇಳಿದೆ.
ವಿಕ್ರಮ್ ಲ್ಯಾಂಡರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.
ಆ.23ರ ಬುಧವಾರ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ ಬಾಹ್ಯಾಕಾಶ ನೌಕೆಯು ಲ್ಯಾಂಡಿಂಗ್ ಆಗಲಿದ್ದು ಎಲ್ಲರ ಚಿತ್ತ ಈಗ ಅದರ ಮೇಲಿದೆ ಎನ್ನಲಾಗಿದ್ದು, ಅದಕ್ಕೂ ಮುನ್ನವೇ ನಿರ್ಣಾಯಕ ಹಂತವಾದ ಎರಡನೇ ಡೀಬೂಸ್ಟಿಂಗ್ ಅನ್ನು ಇಸ್ರೋ ವಿಜ್ಞಾನಿಗಳು ನಿಕಟವಾಗಿ ಮೇಲ್ವಿಚಾರಣೆ ಮಾಡಿದ್ದಾರೆ.
ಎರಡನೇ ಮತ್ತು ಅಂತಿಮ ಡೀಬೂಸ್ಟಿಂಗ್ ಕಾರ್ಯಾಚರಣೆಯು ಯಶಸ್ವಿಯಾಗಿ ಲ್ಯಾಂಡರ್ ಮಾಡ್ಯೂಲ್ ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ಗೊತ್ತುಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಆ. 23 ರಂದು ಲ್ಯಾಂಡಿಂಗ್ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಇಸ್ರೋ ಟ್ವಿಟರ್ ‘ಎಕ್ಷ್’ ನಲ್ಲಿ ತಿಳಿಸಿದೆ.
Chandrayaan-3 Mission:
The second and final deboosting operation has successfully reduced the LM orbit to 25 km x 134 km.
The module would undergo internal checks and await the sun-rise at the designated landing site.
The powered descent is expected to commence on August… pic.twitter.com/7ygrlW8GQ5
— ISRO (@isro) August 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.