Deer Hunting: ಜಿಂಕೆ ಶಿಕಾರಿ; 6 ಮಂದಿ ಬಂಧನ
Team Udayavani, Aug 21, 2023, 9:22 AM IST
ಚಿಕ್ಕಮಗಳೂರು: ಜಿಂಕೆಯನ್ನು ಬೇಟೆಯಾಡಿ ಬಾಡೂಟಕ್ಕೆ ತಯಾರಿ ಮಾಡುತ್ತಿರುವಾಗ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಜಿಂಕೆ ಮಾಂಸ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಭದ್ರ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯ ಮುತ್ತೋಡಿ ಅರಣ್ಯ ಅಂಚಿನಡಿಯಲ್ಲಿ ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕು ಹುಲ್ಲುವತ್ತಿ ಗ್ರಾಮದ ಸಮೀಪದ ಕಾಫಿ ತೋಟದಲ್ಲಿ ಬೃಹತ್ ಗಾತ್ರದ ಜಿಂಕೆ ಬೇಟೆಯಾಡಿ ಪಾರ್ಟಿ ಮಾಡುತ್ತಿದ್ದಾಗ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಕಾಫಿ ತೋಟಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಜಿಂಕೆ ಶಿಕಾರಿ ಮಾಡಿ ದ್ದು, ಅಲ್ಲೇ ಬಾಡೂಟ ತಯಾರಿ ಮಾಡುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಖಚಿತ ಮಾಹಿತಿ ಆಧಾರದ ಮೇಲೆ ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು ದಾಳಿ ಮಾಡಿ ಮೊಹಮ್ಮದ್ ಶಕೀಲ್ ಸೇರಿದಂತೆ ಆರು ಮಂದಿಯನ್ನು ಬಂಧಿಸಿ, ಜೊತೆಗೆ 8 ಕೆ.ಜಿ. ಜಿಂಕೆ ಮಾಂಸ ಹಾಗೂ ನಾಡ ಬಂದೂಕನ್ನು ವಶಕ್ಕೆ ಪಡೆದಿದ್ದಾರೆ.
25 ಕೆ.ಜಿ. ತೂಕದ ಜಿಂಕೆಯನ್ನು ಶಿಕಾರಿ ಮಾಡಿರುವ ಆರೋಪವನ್ನು ಆರೋಪಿಗಳು ಎದುರಿಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಕಳ್ಳ ಬೇಟೆ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.