Shivaraj Tangadagi: ನಾವು ಮನಸ್ಸು ಮಾಡಿ ಕರೆದರೆ ಬಿಜೆಪಿ,ಜೆಡಿಎಸ್ ಎರಡೂ ಖಾಲಿ ಆಗುತ್ತದೆ
Team Udayavani, Aug 21, 2023, 2:52 PM IST
ದಾವಣಗೆರೆ: ಕಾಂಗ್ರೆಸ್ ನವರು ಮನಸ್ಸು ಮಾಡಿ ಕರೆದರೆ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಖಾಲಿಯೇ ಆಗಿ ಬಿಡುತ್ತವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್
ನಿಂದ ಅತಿ ಹೆಚ್ಚು ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ. ಆದರೆ, ಯಾರು ಸಹ ಬಿಜೆಪಿ ತರ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಗೆ ಬರುತ್ತಾ ಇಲ್ಲ. ರಾಜ್ಯದಲ್ಲಿ ಒಳ್ಳೆ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡುತ್ತಾ ಇದೆ ಎಂದು ಬರುತ್ತಿದ್ದಾರೆ ಎಂದು ಆಪರೇಷನ್ ಹಸ್ತ ವನ್ನ ಸಮರ್ಥಿಸಿಕೊಂಡರು.
ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಸಲುವಾಗಿ ಸಿದ್ದರಾಮಯ್ಯ ಒಳ್ಳೆಯಆಡಳಿತ ನೀಡುತ್ತಾ ಇದ್ದಾರೆ. ಹಾಗಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ: Mysore ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ; ನ.1 ರಿಂದ ವೈವಿಧ್ಯಮಯ ಕಾರ್ಯಕ್ರಮ
136 ಶಾಸಕರಿದ್ದೇವೆ ಕಾಂಗ್ರೆಸ್ ಸರ್ಕಾರ ಭದ್ರವಾಗಿದೆ. ಆದರೂ ನಮ್ಮ ಜೊತೆ ಬರ್ತಾ ಇದ್ದರೆ ಅಂದ್ರೆ ಕಾಂಗ್ರೆಸ್ ಗೆ ಶಕ್ತಿ ತುಂಬಲು ಬರುತ್ತಾ ಇದ್ದಾರೆ. ಬಿಜೆಪಿಗೆ ಹೋದವರು ಮಾತ್ರವಲ್ಲ ಬಿಜೆಪಿಯಲ್ಲಿ ಇದ್ದವರು ಬರುತ್ತಾರೆ ಎನ್ನುವ ಮೂಲಕ ಕುತೂಹಲ ಮೂಡಿಸಿದರು.
ಬಿಜೆಪಿಯವರು ಆಪರೇಷನ್ ಮಾಡುವ ಸ್ಥಿತಿಯಲ್ಲೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಗಲ್ಲಿ ಗಲ್ಲಿ ತಿರುಗಿ ಪ್ರಚಾರ ನಡೆಸಿದರೂ ಬಿಜೆಪಿಯವರು 65 ಸೀಟು ಗೆದ್ದಿದ್ದಾರೆ. ನಾವು ಮನಸ್ಸು ಮಾಡಿ ಕರೆದರೆ ಬಿಜೆಪಿ ಜೊತೆಗೆ ಜೆಡಿಎಸ್ ಸಹ ಖಾಲಿ ಆಗುತ್ತದೆ ಎಂದು ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.