UV Fusion: ನಾಗರಪಂಚಮಿ; ಸಹೋದರತೆಯ ಪ್ರತೀಕ


Team Udayavani, Aug 21, 2023, 3:31 PM IST

10-uv-fusion

ನಾಗರ ಪಂಚಮಿ ನಾ ಹೆಂಗ ಮರೆಯಲಿ ಅಣ್ಣಾ. ನಾಗರ ಪಂಚಮಿ ನಾಡಿಗೆ ದೊಡ್ಡ ಹಬ್ಬವಾಗಿದೆ ಅಣ್ಣಾ. ಗೆಳತಿಯರೊಡನೆ ಜೋಕಾಲಿ ಆಡುವ ಆಸೆಅಣ್ಣಾ. ನನ್ನನ್ನು ತವರಿಗೆ ಕರೆಯುವುದನ್ನು ಮರೆಯ ಬೇಡ ಅಣ್ಣಾ..ಇದು ತನ್ನ ಸಹೋದರಿಯ ಕೊರಗು. ಹಾಗೆಯೇ ಪಂಚಮಿ ಬಂದಿತು ಸನ್ಯಾಕ, ಅಣ್ಣ ಬರಲಿಲ್ಲ ಕರಿಯಾಕ ಎಂದು ಗಂಡನ ಮನೆಯಲ್ಲಿರುವ ಸಹೋದರಿ ತವರ ಮನೆಯನ್ನು ನೆನಸಿಕೊಂಡು ತನ್ನ ಆಸೆಯನ್ನು ವ್ಯಕ್ತಪಡಿಸುವ ಪರಿ ಇದು. ಎಷ್ಟೇ ವರ್ಷವಾಗಿದ್ದರೂ ಸಹ ಸಹೋದ‌ರಿಯರಿಗೆ ತವರ ಮನೆಯ ಮೇಲಿನ ವ್ಯಾಮೋಹ ಕಡಿಮೆಯಾಗಿರುವುದಿಲ್ಲ. ಏಕೆಂದರೆ ಈ ಹಬ್ಬವು ಅಣ್ಣ-ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ. ಅದರಲ್ಲಿಯೂ ನಾಗಪಂಚಮಿ ಶ್ರಾವಣ ಮಾಸದ ಮೊದಲ ಹಬ್ಬ.ಇಲ್ಲಿಂದ ವರ್ಷದ ಸಾಲು ಸಾಲು ಹಬ್ಬಗಳು ಆರಂಭವಾಗುತ್ತವೆ. ಈ ವರ್ಷ ಆಗಷ್ಟ್ 21ರಂದು ಆಚರಿಸಲಾಗುತ್ತಿದೆ.

ನಾಗರ ಪಂಚಮಿಯು ಉತ್ತರ ಕರ್ನಾಟಕದವರಿಗೆ ದೊಡ್ಡ ಹಬ್ಬವಾಗಿದೆ. ಈ ಪಂಚಮಿ ತಿಥಿಯ ಅಧಿಪತಿಯಾದ ನಾಗದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ.

ನಾಗರ ಪಂಚಮಿ ಪೌರಾಣಿಕ ಹಿನ್ನೆಲೆ

ಶ್ರಾವಣ ಮಾಸವೆಂದರೆ ಹಿಂದೂಗಳಿಗೆ ಪವಿತ್ರವಾದ ಹಬ್ಬವಾಗಿದೆ. ಈ ಮಾಸದ ಚತುರ್ಥಿ ಹಾಗೂ ಪಂಚಮಿಯಂದು ಬರುವ ನಾಗರ ಪಂಚಮಿಯ ಪೌರಾಣಿಕ ಹಿನ್ನೆಲೆಯೂ ವಿಶಿಷ್ಟವಾಗಿದೆ. ಜನಮೇಜಯದ ತಂದೆಯ ಪರೀಕ್ಷಿತರಾಜನ ಸಾವಿಗೆ ಸರ್ಪ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಭೂ ಲೋಕದಲ್ಲಿರುವ ಸರ್ಪಗಳನ್ನು ನಾಶ ಮಾಡಲು ಸರ್ಪಯಜ್ಞ ಆರಂಭಿಸುತ್ತಾನೆ. ಈ ಸಂದರ್ಭದಲ್ಲಿ ಸರ್ಪಗಳ ಸಂಬಂಧಿಯಾದ ಆಸ್ತಿಕ ಮುನಿಯು ರಾಜರನ್ನು ಸಮಾಧಾನಗೊಳಿಸಿ, ಪ್ರಾಣಿ ಹಿಂಸೆ ಮಹಾಪಾಪ ಎಂದು ಹೇಳಿ ಸರ್ಪಯಜ್ಞ ನಿಲ್ಲಿಸುತ್ತಾನೆ. ಈ ದಿನವನ್ನೇ ನಾಡಿನಲ್ಲಿ ನಾಗರ ಪಂಚಮಿಯಾಗಿ ಆಚರಿಸುತ್ತಾರೆ ಎಂದು ಪೌರಾಣಿಕ ಕಥೆ ಹೇಳುತ್ತಿದೆ.

ನಾಗರಪಂಚಮಿಯ ಪೂಜೆ

ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು.ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಕಾಕತಾಳೀಯಂಬತೆ ಈ ವರ್ಷ ವಿಶೇಷತೆ ಎಂದರೆ ಎರಡು ಪೂಜೆ ವ್ರತಗಳು ಒಟ್ಟಿಗೆ ಬಂದಿರುವುದು. ಮಹಿಳೆಯರು ತಮ್ಮ ಪತಿಗಾಗಿ ಮಂಗಳವಾರ ಉಪವಾಸವನ್ನು ಮಾಡುತ್ತಾರೆ. ಶ್ರಾವಣ ಸೋಮವಾರದಂತೆಯೇ ಮಂಗಳವಾರವೂ ಬಹಳ ಮುಖ್ಯ. ಈ ವರ್ಷ ನಾಗರಪಂಚಮಿ ದಿನವೇ ಮಂಗಳಗೌರಿ ವ್ರತ ಆಚರಿಸುವುದರಿಂದ ನಾಗಪಂಚಮಿಯಂದು ನಾಗದೇವತೆಯೊಂದಿಗೆ ಶಿವ ಮತ್ತು ತಾಯಿ ಪಾರ್ವತಿಯನ್ನೂ ಪೂಜಿಸಲಾಗುವುದು. ಹೀಗಾಗುವುದು ಅಪರೂಪ. ಆದ್ದರಿಂದ ನಾಗದೇವತೆ ಮತ್ತು ಶಿವ-ಪಾರ್ವತಿಯನ್ನು ಪೂಜಿಸುವುದರಿಂದ ಹೆಚ್ಚಿನ ಫ‌ಲಿತಾಂಶ ಸಿಗುತ್ತದೆ ಎನ್ನಲಾಗುತ್ತದೆ.

ಉತ್ತರ ಕರ್ನಾಟಕದಲ್ಲಿ ವಿಶೇಷ ಆಚರಣೆ

ಸಾಮಾನ್ಯವಾಗಿ ನಾಗರ ಪಂಚಮಿ ಆರಂಭವಾಗುವುದೇ  ಅಮವಾಸ್ಯೆಯಿಂದ ಅಮವಾಸ್ಯೆಯ ಅನಂತರ ಮೂರನೆಯ ದಿನ ರೊಟ್ಟಿ ಹಬ್ಬ, ನಾಲ್ಕನೆಯ ದಿನ ಚತುರ್ಥಿ, ಐದನೆಯ ದಿನ ಪಂಚಮಿ ಆಚರಿಸುತ್ತಾರೆ. ರೊಟ್ಟಿ ಹಬ್ಬದಂದು ಮನೆ ಮನೆಯಲ್ಲಿ ಬಗೆ ಬಗೆಯ ಪಲ್ಯ, ಚಟ್ನಿ ತಯಾರಿಸಿ ರೊಟ್ಟಿ, ಚಪಾತಿಯನ್ನು ತಯಾರಿಸಿ ಅಕ್ಕ ಪಕ್ಕದ ಮನೆಯವರೊಂದಿಗೆ ಪರಸ್ಪರ ಹಂಚಿಕೊಳ್ಳುತ್ತಾರೆ. ಇದಕ್ಕೆ ಕಾರಣ ನಾಗರ ಪಂಚಮಿ ಹಬ್ಬದ ನಾಲ್ಕೈದು  ದಿನ ಉಂಡಿ, ಹೋಳಿಗೆ ಮಾಡುವುದರಿಂದ ನಾಲ್ಕೈದು ದಿನಕ್ಕೆ ಬೇಕಾಗುವಷ್ಟು ಸಜ್ಜಿ, ಜೋಳದ ಹಿಟ್ಟಿನಲ್ಲಿ ಎಳ್ಳು ಹಾಕಿ ರೊಟ್ಟಿ ತಯಾರಿಸುತ್ತಾರೆ. ಅದನ್ನೇ ಬಾಂಧವ್ಯ ರೂಪದಲ್ಲಿ ಹಂಚಿಕೊಳ್ಳುತ್ತಾರೆ.

ರೊಟ್ಟಿ ಹಬ್ಬದ ಬಳಿಕ  ಶೇಂಗಾ ಉಂಡಿ, ಅಳ್ಳಿಟ್ಟು ಉಂಡಿ, ಎಳ್ಳುಂಡಿ, ಬುಂದಿ ಗಳಿಗೆ ಉಂಡಿ ಹಾಗೂ ಚಕ್ಕುಲಿ ಸೇರಿ ಬಗೆ ಬಗೆಯ ಉಂಡಿಗಳನ್ನು ತಯಾರಿಸುತ್ತಾರೆ. ಈ ಉಂಡಿಗಳನ್ನು ಶ್ರಾವಣ ಮಾಸ ಪೂರ್ತಿ ತಿನ್ನುವುದು ವಾಡಿಕೆ. ಇನ್ನೂ ಬೇರೆ ಬೇರೆ ಊರುಗಳಲ್ಲಿರುವ ತಮ್ಮ ಸಂಬಂಧಿಕರಿಗೆ ಉಂಡಿ ಕೊಟ್ಟು ತರುವ ಸಂಪ್ರದಾಯವಿದೆ. ಅದರಲ್ಲಿಯೂ ತವರ ಮನೆಯಿಂದ ಉಂಡಿ ಬರಲೇಬೇಕು. ಇದು ಸಹೋದರ ಸಹೋದರರ ಮಧ್ಯೆ ಬಾಂಧವ್ಯಕ್ಕೆ ಸಾಕ್ಷಿಯಾಗುತ್ತದೆ.

ಒಟ್ಟಾರೆಯಾಗಿ ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಒಲೆಯ ಮೇಲೆ ತವೆಯನ್ನು ಇಡಬಾರದು ಹಾಗೂ ಭೂಮಿಯನ್ನು ಅಗೆಯಬಾರದು ಮುಂತಾದ ನಿಷೇಧ ನಿಯಮಗಳನ್ನು ಹಿರಿಯರು ಈ ದಿನ ಪಾಲಿಸುತ್ತಾ ಬಂದಿರುವ ಪ್ರತೀತಿ ನಡುವೆಯೇ ರೊಟ್ಟಿ ಹಬ್ಬ ಮಾಡಿ, ಬಗೆ ಬಗೆಯ ಉಂಡಿ ಗಳನ್ನು ಮಾಡಿ, ನಾಗದೇವತೆಯನ್ನು ಪೂಜಿಸಿ, ಹುತ್ತಗಳಿಗೆ ಹಾಲೆರೆದು ಸಂಭ್ರಮದಿಂದ ಆಚರಿಸಿ, ಪ್ರೀತಿ, ವಿಶ್ವಾಸ ಬಂಧುತ್ವದೊಂದಿಗೆ ಸಹೋದರ ಮತ್ತು ಸಹೋದರಿಯರ ಸಂಬಂಧವನ್ನು ಗಟ್ಟಿಗೊಳಿಸುವ ಹಬ್ಬವಾಗಿ ಈ ನಾಗ ಪಂಚಮಿ ಬರುವ ವರ್ಷದವರೆಗೆ ಹರುಷದಿಂದ ಇರುವಂತೆ ಮಾಡುತ್ತದೆ.

-ಬಸವರಾಜ ಎಂ. ಯರಗುಪ್ಪಿ, ಶಿರಹಟ್ಟಿ, ಗದಗ

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.