Article 370 ರದ್ದತಿಯ ನಂತರ ಜಮ್ಮು ಪ್ರಾಂತ್ಯದಲ್ಲಿ ಉಗ್ರ ಚಟುವಟಿಕೆಗಳ ಹೆಚ್ಚಳ!
Team Udayavani, Aug 21, 2023, 4:08 PM IST
ಜಮ್ಮು: 2019 ರ ಆಗಸ್ಟ್‌ನಲ್ಲಿ ಆರ್ಟಿಕಲ್ 370 ರದ್ದತಿಯ ನಂತರ, ಜಮ್ಮು ಪ್ರದೇಶದಲ್ಲಿ ಉಗ್ರರ ನೇಮಕಾತಿ ಸೇರಿದಂತೆ ಕೆಲವು ಭದ್ರತಾ ಸೂಚಕಗಳೊಂದಿಗೆ ಚಟುವಟಿಕೆಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಕಳೆದ ಸುಮಾರು ನಾಲ್ಕು ವರ್ಷಗಳಿಂದ ಮೇಲ್ಮುಖ ಪ್ರವೃತ್ತಿ ತೋರಿ ಬಂದಿದೆ ಎಂದು ಅಧಿಕೃತ ಮಾಹಿತಿ ಬಹಿರಂಗಪಡಿಸಿದೆ.
ಡೇಟಾ ಪ್ರಕಾರ, ಆಗಸ್ಟ್ 5, 2019 ಮತ್ತು ಜೂನ್ 16, 2023 ರ ನಡುವೆ ಜಮ್ಮು ವಿಭಾಗದಲ್ಲಿ 231 ಉಗ್ರರು ಮತ್ತು ಅವರ ಭೂಗತ ಕೆಲಸಗಾರರ (OGWs) ಬಂಧನವಾಗಿದೆ. ಅಕ್ಟೋಬರ್ 27, 2015-ಆಗಸ್ಟ್ 4, 2019 ನಡುವೆ ದಾಖಲಾದ ಬಂಧನಗಳಿಗಿಂತ ಶೇಕಡಾ 71 ರಷ್ಟು ಹೆಚ್ಚಾಗಿದೆ.
ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ರದ್ದುಗೊಳಿಸಿತ್ತು. ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ್ , ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.
ಅಧಿಕೃತ ಮಾಹಿತಿಯ ಪ್ರಕಾರ, ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಪ್ರದೇಶದಲ್ಲಿ ಎಂಟು ಗ್ರೆನೇಡ್ ಮತ್ತು 13 ಸುಧಾರಿತ ಸ್ಫೋಟಕ ಸಾಧನ (ಐಇಡಿ) ದಾಳಿಗಳನ್ನು ಮಾಡಲಾಗಿದೆ. ನಾಲ್ಕು ಗ್ರೆನೇಡ್ ಮತ್ತು ಏಳು ಐಇಡಿ ದಾಳಿಗಳನ್ನು ಅಕ್ಟೋಬರ್ 27, 2015 ರಿಂದ ಆಗಸ್ಟ್ 4, 2019 ರವರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.