Kundapura ಎಸ್ಐಗೆ ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಯತ್ನ: ಮಹಿಳೆ ಬಂಧನ
Team Udayavani, Aug 21, 2023, 7:10 PM IST
ಕುಂದಾಪುರ: ಸಾರ್ವಜನಿಕರಿಂದ ದೂರು ಬಂದುದನ್ನು ವಿಚಾರಿಸಲು ತೆರಳಿದ ಎಸ್ಐ ಮೇಲೆ ಮಹಿಳೆಯೊಬ್ಬರು ಸೀಮೆಎಣ್ಣೆ ಎರಚಿ ಬೆಂಕಿ ಹಚ್ಚಲು ಪ್ರಯತ್ನಿಸಿದ ಘಟನೆ ನಡೆದಿದೆ.
ಕುಂದಾಪುರ ಠಾಣೆ ಎಸ್ಐ ವಿನಯ್ ಎಮ್. ಕೊರ್ಲಹಳ್ಳಿ ಅವರು ಈ ಸಂಬಂಧ ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲಿಸಿದ್ದಾರೆ.
ಬೀಜಾಡಿ ಗ್ರಾಮದ ಕೋಟೇಶ್ವರ ಎಂಬಲ್ಲಿ ಫ್ಯಾಶನ್ ಡಿಸೈನ್ ಟೈಲರ್ ಮತ್ತು ಫ್ಯಾನ್ಸಿ ಸ್ಟೋರ್ಸ್ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವ ಮಹಿಳೆ ರಸ್ತೆ ಬದಿಯಲ್ಲಿ ಸಾಮಗ್ರಿಗಳನ್ನು ಇಟ್ಟು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿರುವುದಾಗಿ ದೂರು ಕರೆ ಬಂದಿತ್ತು.
ನೀವು ಯಾರು ನನ್ನನ್ನು ಕೇಳಲು ಎಂದು ಉದ್ಧಟತನದಿಂದ ಮಾತನಾಡಿ , ಹೊಡೆಯಲು ಬಂದಿದ್ದರೆಂಬ ವಿಚಾರಣೆಗೆ ಎಸ್ಐ ಅಂಗಡಿಯಲ್ಲಿದ್ದ ಮಹಿಳೆಯಲ್ಲಿ ಕೇಳಿದಾಗ, ಮಾಲಕಿ ಸರೋಜ ದಾಸ್ (43) ಏಕಾಏಕಿ ಸೀಮೆ ಎಣ್ಣೆಯ ಬಾಟಲಿಯಿಂದ ಸೀಮೆ ಎಣ್ಣೆಯನ್ನು ಸಮವಸ್ತ್ರದಲ್ಲಿದ್ದ ಎಸ್ಐ ಮೈಗೆ ಹಾಕಲು ಬಂದರು.
ತಪ್ಪಿಸಿಕೊಂಡಾಗ ಸೀಮೆಎಣ್ಣೆಯನ್ನು ಅಲ್ಲಿಯೇ ಕೆಳಗೆ ಹಾಕಿ ಬೆಂಕಿ ಹಾಕಿದರು.
ಎಸ್ಐ ಮತ್ತು ಸಿಬಂದಿ ಬೆಂಕಿ ನಂದಿಸಲು ಮುಂದಾದಾಗ ಆರೋಪಿ ಎಸ್ಐಯ ಸಮವಸ್ತ್ರಕ್ಕೆ ಕೈ ಹಾಕಿ ಎಳೆದು ದೂಡಿ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್ಗಳ ತೀರ್ಪು ಆನ್ಲೈನ್ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.