MCC Bank ಅನಿಲ್ ಲೋಬೊ ತಂಡ ಅವಿರೋಧ ಪುನರಾಯ್ಕೆ
Team Udayavani, Aug 21, 2023, 7:51 PM IST
ಮಂಗಳೂರು: ಮಂಗಳೂರು ಕಥೋಲಿಕ್ ಕೋ- ಅಪರೇಟಿವ್ ಬ್ಯಾಂಕ್ ನಿಯಮಿತ ಇದರ ಆಡಳಿತ ಮಂಡಳಿಯ ಎಲ್ಲಾ 14 ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ, ಆಗಸ್ಟ್ 27 ರಂದು ನಡೆಯಬೇಕಿದ್ದ ಚುನಾವಣೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ತಿಳಿಸಿದ್ದಾರೆ.
ಅಗಸ್ಟ್ 13 ರಂದು ನಾಮಪತ್ರ ಸಲ್ಲಿಕೆಯೊಂದಿಗೆ ಆರಂಭಗೊಂಡ ಚುನಾವಣಾ ಪ್ರಕ್ರಿಯೆಗೆ , ಆಕಾಂಕ್ಷೆವುಳ್ಳ 14 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅಗಸ್ಟ್ 20 ರಂದು ಪರಿಶೀಲನೆಯಲ್ಲಿ ಸಲ್ಲಿಸಿದ ಎಲ್ಲಾ 14 ಅರ್ಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿರುವುದರಿಂದ, ರಿಟರ್ನಿಂಗ್ ಅಧಿಕಾರಿ ಸುಧೀರ್ ಕುಮಾರ್ ಜೆ. ಎಲ್ಲಾ ಅಭ್ಯರ್ಥಿಗಳನ್ನು ಚುನಾಯಿತರೆಂದು ಫೋಷಿಸಿದ್ದಾರೆ.
111 ವರ್ಷಗಳ ಇತಿಹಾಸವಿರುವ, ಮಂಗಳೂರಿನ ಸಹಕಾರಿ ರಂಗದ ಮುಂಚೂಣಿಯ ಎಂಸಿಸಿ ಬ್ಯಾಂಕಿನ ಚುಕ್ಕಾಣಿ, ಮುಂದಿನ 5 ವರ್ಷಗಳ ಅವಧಿಗೆ, ಹಾಲಿ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ತಂಡದ ಪಾಲಾಗಿದೆ. 111 ವರ್ಷಗಳ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬ್ಯಾಂಕಿನ ನಿರ್ದೇಶಕ ಮಂಡಳಿಯ ಆಯ್ಕೆ ಅವಿರೋಧವಾಗಿ ನಡೆದಿದ್ದು, ವೆಲೆನ್ಸಿಯಾ ನಿವಾಸಿ ಅನಿಲ್ ಲೋಬೊ ನೇತೃತ್ವದ ತಂಡದಲ್ಲಿ ಜೆರಾಲ್ಡ್ ಪಿಂಟೋ, ಕಲ್ಯಾಣ್ಪುರ, ರೋಶನ್ ಡಿಸೋಜಾ, ಮುಡಿಪು, ಹೆರಾಲ್ಡ್ ಜೋನ್ ಮೊಂತೆರೊ, ಕೆಲರಾಯ್, ಜೋಸೆಫ್ ಎಂ.ಅನಿಲ್ ಪತ್ರಾವೊ, ದೆರೆಬೈಲ್, ಡೇವಿಡ್ ಡಿಸೋಜಾ ಬಜಪೆ, ಮೆಲ್ವಿನ್ ಅಕ್ವಿನಸ್ ವಾಸ್ ಮಂಗಳೂರು, ಜೆ.ಪಿ.ರೋಡ್ರಿಗಸ್ ಪುತ್ತೂರು, ಆಂಡ್ರು ಡಿಸೋಜಾ ಮೂಡಬಿದ್ರಿ, ಎಲ್ರೊ ಕಿರಣ್ ಕ್ರಾಸ್ಟೊ ಗಂಗೊಳ್ಳಿ, ಜೆರಾಲ್ಡ್ ಜೂಡ್ ಡಿ’ಸಿಲ್ವ ಕಾರ್ಕಳ, ವಿನ್ಸೆಂಟ್ ಅನಿಲ್ ಲಸ್ರಾದೊ ಬಂಟ್ವಾಳ, ಐರಿನ್ ರೆಬೆಲ್ಲೊ ಕುಲಶೇಖರ ಮತ್ತು ಫ್ರೀಡಾ ಫ್ಲಾವಿಯಾ ಡಿಸೋಜಾ ಬಳ್ಕುಂಜೆ ಇದ್ದಾರೆ.
ಹಾಲಿ ಬ್ಯಾಂಕಿನ ಆಡಳಿತ ಮಂಡಲಿಯ ಅವಧಿಯು ಆ 26 ರಂದು ಕೊನೆಗೊಳ್ಳಲಿದ್ದು, ನಂತರ ನೂತನ ಆಡಳಿತ ಮಂಡಲಿ ರಚನೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.