![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 22, 2023, 12:25 PM IST
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ಅವರಿಗಿಂದು ಹುಟ್ಟು ಹಬ್ಬದ ಸಂಭ್ರಮ. ಸಿನಿಮಾರಂಗದ ಕಲಾವಿದರು ಹಾಗೂ ಅಭಿಮಾನಿಗಳು ಮೆಚ್ಚಿನ ನಟನಿಗೆ ಬರ್ತ್ ಡೇ ವಿಶ್ ಮಾಡುತ್ತಿದ್ದಾರೆ. ಅಭಿಮಾನಿಗಳಿಗೆ ಮೆಗಾ ಸ್ಟಾರ್ ಅವರ ಹೊಸ ಚಿತ್ರದ ಪೋಸ್ಟರ್ ಬರ್ತ್ ಡೇ ಗಿಫ್ಟ್ ಆಗಿ ಸಿಕ್ಕಿದೆ.
ಕಳೆದ ಕೆಲ ಸಮಯದಿಂದ ಒಂದು ಬಿಗ್ ಹಿಟ್ ನೀಡಲು ಚಿರಂಜೀವಿ ವಿಫಲರಾಗಿದ್ದಾರೆ. ಈ ಬಾರಿ ಫ್ಯಾಂಟಸಿ ಎಂಟರ್ಟೈನರ್ ಎಂದು ಹೇಳಲಾಗುತ್ತಿರುವ ಸಿನಿಮಾವೊಂದನ್ನು ಅನೌನ್ಸ್ ಆಗಿದೆ. ಚಿರಂಜೀವಿ ಅವರ ʼವಾಲ್ಟೇರ್ ವೀರಯ್ಯʼ, ‘ಭೋಲಾ ಶಂಕರ್’ ಬಾಕ್ಸ್ ಆಫೀಸ್ ನಲ್ಲಿ ಅಷ್ಟಾಗಿ ಸದ್ದು ಮಾಡಿಲ್ಲ. ಇದಲ್ಲದೇ ಚಿರಂಜೀವಿ ಸತತ ರಿಮೇಕ್ ಚಿತ್ರಗಳನ್ನೇ ನೀಡುತ್ತಿರುವುದರಿಂದ ಅವರ ಕೆಲ ಅಭಿಮಾನಿಗಳು ಬೇಸರಗೊಂಡಿದ್ದಾರೆ.
ಚಿರಂಜೀವಿ ಹುಟ್ಟುಹಬ್ಬಕ್ಕೆ ಅವರ 157ನೇ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ವಸಿಷ್ಠ ನಿರ್ದೆಶನದ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಈ ಸಿನಿಮಾದ ಅಪ್ಡೇಟ್ ಗಾಗಿ ಅವರ ಅಭಿಮಾನಿಗಳು ಕಾಯುತ್ತಿದ್ದರು. ಅದರಂತೆ ಇಂದು ಈ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.
ಪೋಸ್ಟರ್ ನಲ್ಲಿ ಪ್ರಕೃತಿಯ 5 ಅಂಶಗಳಾದ ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶದಂತಹ ಪಂಚಭೂತಗಳನ್ನು ತೋರಿಸಲಾಗಿದೆ. ಇದೊಂದು ಫ್ಯಾಂಟಸಿ ಎಂಟರ್ಟೈನರ್ ಸಿನಿಮಾವೆಂದು ಹೇಳಲಾಗುತ್ತಿದೆ. ಪೋಸ್ಟರ್ ರಿಲೀಸ್ ಮಾಡಿ ಮೆಗಾ ಸ್ಟಾರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದೆ.
ಯುವಿ ಕ್ರಿಯೇಷನ್ಸ್‌ನ ಬ್ಯಾನರ್ ಅಡಿಯಲ್ಲಿ ವಿ ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪತಿ ಮತ್ತು ವಿಕ್ರಮ್ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿರಂಜೀವಿ ಅವರ ವೃತ್ತಿಜೀವನದಲ್ಲಿ ಈ ಸಿನಿಮಾ ಅತ್ಯಂತ ದುಬಾರಿಯಾಗಲಿದೆ ಎಂದು ವರದಿ ತಿಳಿಸಿದೆ.
ಸದ್ಯಕ್ಕೆ ಪೋಸ್ಟರ್ ಮಾತ್ರ ರಿಲೀಸ್ ಆಗಿದ್ದು, ಇದರ ಟೈಟಲ್ ಹಾಗೂ ಪಾತ್ರವರ್ಗಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ.
#Mega157 🔮
This time, its MEGA MASS BEYOND UNIVERSE ♾️
The five elements will unite for the ELEMENTAL FORCE called MEGASTAR ❤️🔥
Happy Birthday to MEGASTAR @KChiruTweets Garu ❤️@DirVassishta @UV_Creations#HBDMegastarChiranjeevi pic.twitter.com/llJcU6naqX
— UV Creations (@UV_Creations) August 22, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.