KKRDB ಅನುದಾನ ಬಳಕೆ: ಕಲ್ಯಾಣದ ಶಾಸಕರ ಕಾರ್ಯ ಮೌಲ್ಯಮಾಪನ: ಅಜಯ್ ಸಿಂಗ್
Team Udayavani, Aug 22, 2023, 3:22 PM IST
ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಶೀಘ್ರವೇ ಕಲ್ಯಾಣ ಕರ್ನಾಟಕ ಶಾಸಕರ ಕಾರ್ಯಗಳ ಮೌಲ್ಯಮಾಪನ ಮಾಡಲಾಗುವುದು ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಅಜಯ್ ಸಿಂಗ್ ಹೇಳಿದರು.
ಅವರು ಮಂಗಳವಾರ ಮಧ್ಯಾಹ್ನ ಕಲ್ಯಾಣ ಕರ್ನಾಟಕ ಅನುದಾನದಡಿ ಕೈಗೆತ್ತಿಕೊಳ್ಳಲಾಗಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಂಡಳಿಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿರುವ ಶೈಕ್ಷಣಿಕ, ಆರ್ಥಿಕ ಮತ್ತು ಭೌಗೋಳಿಕವಾಗಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಈ ಮೌಲ್ಯಮಾಪನ ನೆರವಾಗಲಿದೆ ಎಂದರು. ಶಾಸಕರು ಈವರೆಗೆ ಮಂಡಳಿಯ ಹಲವು ಯೋಜನೆಗಳ ಅಂತರ್ಗತ ಪಡೆದ ಅನುದಾನದ ಬಳಕೆ ಹಾಗೂ ಒಟ್ಟರೆ ಅನುದಾನ ಬಳಕೆ ಮಾಡದೇ ಇರುವ ಕುರಿತು, ಮೌಲ್ಯಮಾಪನ ಮಾಡಲಾಗುವುದು ಎಂದರು.
ಈ ಮೌಲ್ಯಮಾಪನದ ಮುಖೇನ ಶಾಸಕರಲ್ಲಿ ಅನುದಾನ ಬಳಕೆಯ ಕುರಿತು ಇರುವ ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸುವುದು ಮತ್ತು ಹಲವಾರು ಯೋಜನೆಗಳ ಅಡಿಯಲ್ಲಿ ತಮ್ಮ ಕ್ಷೇತ್ರ ಅಭಿವೃದ್ಧಿಗೆ ಮಂಡಳಿಯಿಂದ ದೊರಕಬಹುದಾದ ಅನುದಾನಗಳ ಕುರಿತು ಶಾಸಕರಿಗೆ ತಿಳುವಳಿಕೆ ನೀಡಲಾಗುವುದು ಎಂದರು.
ಇದನ್ನೂ ಓದಿ:POCSO Act: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕಾಯ್ದೆಯಡಿ ದೂರು ದಾಖಲು
ಪಸಕ್ತ ಆರ್ಥಿಕ ವರ್ಷದಲ್ಲಿ ಮಂಡಳಿ ಅನುದಾನ ಬಳಕೆ ಮಾಡಲು ಡಿಸೆಂಬರ್ ವರೆಗೂ ಕಾಲಾವಕಾಶವಿದೆ. ಅದರೊಳಗೆ ತಮ್ಮ ಕ್ಷೇತ್ರದಲ್ಲಿ ಕೈಗೊಳ್ಳುವ ಕಾಮಗಾರಿಗಳ ಕುರಿತು ಕ್ರಿಯಾಯೋಜನೆಯನ್ನು ಬೇಗನೆ ಶಾಸಕರು ಸಲ್ಲಿಸಿದರೆ ಅನುದಾನ ನೀಡಲು ಅನುಕೂಲವಾಗುವುದು ಎಂದ ಅವರು, ಈ ಬಾರಿ 5 ಸಾವಿರ ಕೋಟಿ ರೂಪಾಯಿ ಅನುದಾನ ಇದ್ದು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಈ ಭಾಗದ ಕಲ್ಯಾಣ ಮಾಡಬೇಕಾಗಿದೆ ಎಂದರು.
ಡಿಸೆಂಬರ್ ನಲ್ಲಿ ಜಯದೇವ ಲೋಕಾರ್ಪಣೆ: ಕಲ್ಯಾಣ ಕರ್ನಾಟಕದಲ್ಲಿ ಬಾರಿ ನಿರೀಕ್ಷೆ ಉಂಟು ಮಾಡಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಡಿಸೆಂಬರ್ ಅಂತ್ಯದ ವೇಳೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳು ಅವರೊಂದಿಗೆ ಚರ್ಚಿಸಿ ದಿನಾಂಕವನ್ನು ನಿಗದಿ ಮಾಡಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಾಗುವುದು ಎಂದರು.
ಈಗಾಗಲೇ ಶೇಕಡ 75 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮಂಡಳಿಯಿಂದ ಒಟ್ಟು 1045 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಅನುದಾನದ ಸಮರ್ಪಕ ಬಳಕೆ ಹಾಗೂ ತ್ವರಿತ ಕಾಮಗಾರಿ ಮಾಡುವ ನಿಟ್ಟಿನಲ್ಲಿ ತಾವೆಂದು ಭೇಟಿ ನೀಡಿ ವೀಕ್ಷಣೆ ಮಾಡಿದ್ದಾಗಿ ಹೇಳಿದರು. ಅದಲ್ಲದೆ ಶೀಘ್ರವೇ ಮಂಡಳಿಯಿಂದ ಗ್ರಾಮೀಣ ಮಟ್ಟದ ಜನರು ಹೃದ್ರೊಗಕ್ಕೆ ತುತ್ತಾದ ತಕ್ಷಣವೇ ಗೋಲ್ಡನ್ ಹವರ್ ನಲ್ಲಿ ಸ್ಥಳೀಯವಾಗಿ ಚಿಕಿತ್ಸೆ ನೀಡಿ ಅವರನ್ನು ಆಂಬುಲೆನ್ಸ್ ಮೂಲಕ ಜಯದೇವ ಆಸ್ಪತ್ರೆಗೆ ಕರೆತರುವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂದರು.
ಶೀಘ್ರ ನೇಮಕಾತಿ: ಮಂಡಳಿಯ ಕೆಲಸ ಕಾರ್ಯಗಳು ಸಮರ್ಪಕವಾಗಿ ಕಾರ್ಯಗಳು ನಡೆಯುವ ನಿಟ್ಟಿನಲ್ಲಿ ಇಂಜಿನಿಯರ್ ಗಳ ನೇಮಕಾತಿ ಅವಶ್ಯಕತೆ ಇದೆ. ಶೀಘ್ರವೇ ಸಚಿವರು ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಭೇಟಿ ಮಾಡಿ ಚರ್ಚಿಸಿ 273 ಇಂಜಿನಿಯರ್ ಗಳ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿಕೊಡಲಾಗುವುದು. ಸದ್ಯ ಈಗ 60 ಇಂಜಿನಿಯರ್ ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಈ ವೇಳೆಯಲ್ಲಿ ಮಂಡಳಿ ಕಾರ್ಯದರ್ಶಿ ಅನಿರುದ್ಧ ಶ್ರವಣ್, ಜಯದೇವ ಆಸ್ಪತ್ರೆಯ ಬಾಬುರಾವ್ ಹುಡುಗಿಕರ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.