Water: ಕಲುಷಿತ ನೀರು ಸೇವನೆ ಪ್ರಕರಣ: ರಾಜ್ಯದಲ್ಲಿ ನೈರ್ಮಲ್ಯ ಅಭಿಯಾನಕ್ಕೆ ಸೂಚನೆ
-15 ದಿನದಲ್ಲಿ ಅಭಿಯಾನ ಪೂರ್ಣಗೊಳಿಸಿ ವರದಿ ಸಲ್ಲಿಸಿ: ಸಿಎಂ
Team Udayavani, Aug 22, 2023, 9:44 PM IST
ಬೆಂಗಳೂರು: ರಾಜ್ಯದ ಕೆಲವೆಡೆ ಕಲುಷಿತ ನೀರು ಸೇವನೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ತಡವಾಗಿಯಾದರೂ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ, ನೈರ್ಮಲ್ಯ ಅಭಿಯಾನ ನಡೆಸಲು ಮುಂದಾಗಿದೆ. 15 ದಿನಗಳಲ್ಲಿ ಅಭಿಯಾನ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳೆಗೇರಿಗಳಲ್ಲಿ ಕುಡಿಯುವ ನೀರು ಮತ್ತು ಚರಂಡಿ ನೀರಿನ ಕೊಳವೆ ಮಾರ್ಗಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಇದಕ್ಕಾಗಿ ನೈರ್ಮಲ್ಯ ಅಭಿಯಾನ ಕೈಗೊಂಡು ಎಲ್ಲೆಲ್ಲಿ ಪ್ರತ್ಯೇಕ ಕೊಳವೆಮಾರ್ಗ ಇಲ್ಲ ಎಂಬುದನ್ನು ಪತ್ತೆ ಹೆಚ್ಚಿ 15 ದಿನದಲ್ಲಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.
ಜಿ.ಪಂ. ಸಿಇಒ ಹೊಣೆ
ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿ¨ªಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ. ಮಳೆ ಕೊರತೆಯಿಂದ ಕುಡಿಯುವ ನೀರಿಗೂ ತತ್ವಾರ ಬರುವ ಮುನ್ಸೂಚನೆಗಳಿದ್ದು, ಇಂತಹ ಸಂದರ್ಭದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳು ಹೆಚ್ಚಾದರೆ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ. ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ನಗರಸಭೆಗಳ ಆಯುಕ್ತರ ಮೇಲೆ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇಲಾಖೆಗಳ ನಡುವೆ ಸಮನ್ವಯ ಅಗತ್ಯ
ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹಾಸ್ಟೆಲ್‌ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ. ನೀರಿನ ಸ್ವತ್ಛತೆ ಬಗ್ಗೆ ಆದ್ಯತೆ ವಹಿಸಿ, ಸ್ವತ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಿಎಂ ಸೂಚಿಸಿದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ| ರಜನೀಶ್ ಗೋಯಲ… ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಾಮಾನ್ಯವಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ರಸ್ತೆ ಇನ್ನಿತರ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆ. ನೈರ್ಮಲ್ಯ ಮತ್ತು ಸ್ವತ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ರಾಜ್ಯದ 39 ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.