Puttur; ನಕಲಿ ದಾಖಲೆ ತಯಾರಿಸುತ್ತಿದ್ದ ಆರೋಪಿಗೆ ಜಾಮೀನು ಮಂಜೂರು
Team Udayavani, Aug 22, 2023, 9:57 PM IST
ಪುತ್ತೂರು: ಗ್ರಾ. ಪಂ.ಗಳು ಮತ್ತು ನಗರಸಭೆಯ ನಕಲಿ ಸೀಲುಗಳು, ರಬ್ಬರ್ ಸ್ಟಾಂಪ್, ದಾಖಲೆ ಪತ್ರಗಳನ್ನು ತಯಾರಿಸಿದ್ದ ಪ್ರಕರಣದ ಆರೋಪಿ ವಿಶ್ವನಾಥ್ ಬಿ.ವಿ.ಗೆ ಜಿಲ್ಲಾ ನ್ಯಾಯಾಲಯ ಶರ್ತಬದ್ಧ ಜಾಮೀನು ಮಂಜೂರು ನೀಡಿದೆ.
ತಾ.ಪಂ. ಕಾರ್ಯನಿರ್ವಾಹಕಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್. ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಜು. 11ರಂದು ಪುತ್ತೂರು ನಗರ ಠಾಣಾ ಪೊಲೀಸರು ಪಡೀಲ್ನ ಬಿ.ಬಿ.ಎಲೆಕ್ಟ್ರಿಕಲ್ಸ್ ಆ್ಯಂಡ್ ಪ್ಲಂಬ್ಲಿìಸ್ ಕಚೇರಿಗೆ ದಾಳಿ ನಡೆಸಿದ್ದರು. ಆ ವೇಳೆ ಅಲ್ಲಿ, ವಿವಿಧ ಗ್ರಾ. ಪಂ.ಗಳು ಮತ್ತು ನಗರಸಭೆಗೆ ಸಂಬಂಧಿಸಿದ ನಕಲಿ ಸೀಲುಗಳು, ರಬ್ಬರ್ ಸ್ಟಾಂಪ್ ಹಾಗೂ ನಕಲಿ ದಾಖಲೆ ಪತ್ರಗಳು ಇರುವುದು ಬೆಳಕಿಗೆ ಬಂದಿತ್ತು. ವಿಶ್ವನಾಥ ಅವರು ನಕಲಿ ದಾಖಲೆ ಸೃಷ್ಟಿಸಿ ಸಾರ್ವಜನಿಕರಿಗೆ ನೀಡುತ್ತಿರುವ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.