Karnataka: ತಮಿಳುನಾಡಿಗೆ ನೀರು; ರೈತರ ಆಕ್ರೋಶ; ಹೆದ್ದಾರಿ ತಡೆಗೆ ಯತ್ನ
Team Udayavani, Aug 22, 2023, 11:10 PM IST
ಮಂಡ್ಯ/ಮೈಸೂರು: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ರೈತರ ಆಕ್ರೋಶ ಮುಂದು
ವರಿದಿದ್ದು, ಮಂಡ್ಯ, ಮೈಸೂರು ಸೇರಿ ಹಲವೆಡೆ ರೈತಸಂಘ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರವೂ ಪ್ರತಿಭಟನೆ ನಡೆದಿದೆ. ಮಂಡ್ಯದಲ್ಲಿ ಹೆದ್ದಾರಿ ತಡೆಯಲು ಯತ್ನಿಸಿದ ರೈತಸಂಘ (ಮೂಲ ಸಂಘಟನೆ)ದ ಕಾರ್ಯಕರ್ತರನ್ನು ಪೊಲೀಸರು ಬಂಧಿ ಸಿ ಅನಂತರ ಸಂಜೆ ವೇಳೆಗೆ ಬಿಡುಗಡೆ ಮಾಡಿದರು.
ವಿವಿಧೆಡೆಗಳಿಂದ ಆಗಮಿಸಿದ ರೈತ ಸಂಘದ ಕಾರ್ಯಕರ್ತರು ಮಂಡ್ಯ ತಾಲೂಕು ಇಂಡುವಾಳು ಗ್ರಾಮದ ಬಳಿ ಜಮಾಯಿಸಿ, ಸರ್ವೀಸ್ ರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿದರು. ಘೋಷಣೆ ಮೊಳಗಿಸುತ್ತ ರೈತರು ಎಕ್ಸ್‌ಪ್ರೆಸ್ ಹೈವೆಗೆ ನುಗ್ಗಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪರಸ್ಪರ ತಳ್ಳಾಟ-ನೂಕಾಟ ಉಂಟಾಗಿ ಪೊಲೀಸರು ಪ್ರತಿಭಟನನಿರತ ರೈತರನ್ನು ಬಲಪ್ರಯೋಗಿಸಿ ಬಂ ಧಿಸಿದರು. ಐದಾರು ರೈತರಿಗೆ ಸಣ್ಣಪುಟ್ಟ ಗಾಯಗಳಾದವು. ಇದರಿಂದ ಕುಪಿತಗೊಂಡ ರೈತರು ಪೊಲೀಸರ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ರೈತರು ಅಡ್ಡಿಪಡಿಸಿದರು. ಇದರಿಂದ ಅರ್ಧ ತಾಸಿಗೂ ಹೆಚ್ಚು ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಯಿತು.
ಮೈಸೂರಿನಲ್ಲೂ ಪ್ರತಿಭಟನೆ
ತಮಿಳುನಾಡು ಒತ್ತಡಕ್ಕೆ ಮಣಿದು ಕಾವೇರಿ ನೀರನ್ನು ಹರಿಯಲು ಬಿಡಲಾಗಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಇರುವ ರಾಜ್‌ಕುಮಾರ್ ಉದ್ಯಾನವನದ ಮುಂಭಾಗ ಪ್ರತಿಭಟನೆ ನಡೆಯಿತು.
ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅಂತಿಮವಾಗಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಜೆಡಿಎಸ್, ಬಿಜೆಪಿ ನಾಯಕರು ನೀರಿನ ಮೇಲೆ ರಾಜಕೀಯ ಮಾಡಬಾರದು. ತಮಿಳುನಾಡಿನ ಪರ ತೀರ್ಪು ಬಂದಿದ್ದರೆ 20 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗುತ್ತಿತ್ತು. ಹೀಗಾಗಿ 10 ಸಾವಿರ ಕ್ಯೂಸೆಕ್ ಅಷ್ಟೇ ನೀರು ಬಿಟ್ಟಿದ್ದೇವೆ.
– ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.