NEP ರದ್ದು ವಿರುದ್ಧ ಜನ ಜಾಗೃತಿ
Team Udayavani, Aug 22, 2023, 11:19 PM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಹಿಂಪಡೆದು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಜನ ಜಾಗೃತಿ ರೂಪಿಸಲು ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಶನ್ ತೀರ್ಮಾನಿಸಿದೆ.ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಮಂಗ ಳ ವಾರ ನಡೆದ ಶಿಕ್ಷಣ ತಜ್ಞರ ಸಭೆಯಲ್ಲಿ ಪಾಲ್ಗೊಂಡಿದ್ದ ವಿಶ್ರಾಂತ ಕುಲಪತಿಗಳು, ಕುಲಸಚಿವರು, ಶಿಕ್ಷಣ ತಜ್ಞರು, ಬಿಜೆಪಿಯ ಮಾಜಿ ಶಿಕ್ಷಣ ಸಚಿವರು, ವಿಧಾನ ಪರಿಷತ್‌ನ ಪದವೀಧರ ಮತ್ತು ಶಿಕ್ಷಣ ಕ್ಷೇತ್ರದ ಬಿಜೆಪಿ ಬೆಂಬಲಿತ ಶಾಸಕರು ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಸರಕಾರದ ನಡೆಯನ್ನು ಖಂಡಿಸಿ ಹೋರಾಟ ನಡೆಸುವ ನಿಲುವು ಪ್ರಕಟಿಸಿದರು.
ಕಾಂಗ್ರೆಸ್ ಸರಕಾರದ ನಡೆಯು ರಾಜ್ಯವನ್ನು ಹಿಂದಕ್ಕೆ ತಳ್ಳುತ್ತಿದೆ. ಸಾರಾಸಗಟಾಗಿ ಎನ್‌ಇಪಿಯನ್ನು ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಅವನತಿಯತ್ತ ಕೊಂಡೊಯ್ಯುತ್ತಿದೆ. ರಾಜಕೀಯ ಉದ್ದೇಶಕ್ಕಾಗಿ ಮಕ್ಕಳ ಶಿಕ್ಷಣದಲ್ಲಿ ಆಟವಾಡುವುದು ಸಲ್ಲದು. ಒಂದು ವೇಳೆ ಎನ್‌ಇಪಿಯಲ್ಲಿ ಲೋಪದೋಷಗಳಿದ್ದರೆ ಅದರಲ್ಲಿ ಪರಿಷ್ಕರಣೆ ಮಾಡಿ ಸುಧಾರಣೆ ತರಬೇಕೇ ವಿನಾ ನೀತಿಯನ್ನು ಕೈ ಬಿಡುತ್ತೇವೆ ಎಂಬ ಸರಕಾರದ ಹಠಮಾರಿ ಧೋರಣೆ ಒಳ್ಳೆಯದಲ್ಲ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ರಾಜ್ಯದ ನಡೆಯನ್ನು ಖಂಡಿಸಿ ಮತ್ತು ಎನ್‌ಇಪಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಜನಾಂದೋಲನ ರೂಪಿಸಲು ಪೂರಕವಾಗಿ ಶೀಘ್ರದಲ್ಲೇ ಪ್ರತೀ ಜಿಲ್ಲೆಗೂ ತೆರಳಿ ಶಿಕ್ಷಣ ತಜ್ಞರ ಸಭೆ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಸೆ. 28ರಿಂದ ಬಿಜೆಪಿ ನಡೆಸುವ ಪ್ರತಿಭಟನೆಗಳಲ್ಲಿಯೂ ಎನ್‌ಇಪಿ ಹಿಂದೆಗೆದುಕೊಳ್ಳುವುದು ಮತ್ತು ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್‌ಆರ್)ಯಡಿ ಶಾಲೆಗಳ ನಿರ್ವಹಣೆಯನ್ನು ಖಾಸಗಿಗೆ ನೀಡುವ ಸರಕಾರದ ಚಿಂತನೆಯ ವಿರುದ್ಧ ಧ್ವನಿ ಎತ್ತುವ ನಿರ್ಧಾರಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.