DK Shivakumar: ಡಿಕೆಶಿ ಬಿಜೆಪಿಯ ದಿಲ್ಲಿ ನಾಯಕರನ್ನು ಖರೀದಿಸಿದರೂ ಅಚ್ಚರಿ ಇಲ್ಲ: ಎಚ್ಡಿಕೆ
Team Udayavani, Aug 22, 2023, 11:23 PM IST
ಬೆಂಗಳೂರು: ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗಿದೆ. ಬಿಜೆಪಿಯ ದಿಲ್ಲಿಯ ನಾಯಕರನ್ನೇ ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿ, ಅವರು ಯಾರಿಗೂ ಹೆದರಲ್ಲ. ದೇವೇಗೌಡರ ಕುಟುಂಬವನ್ನು ಬಿಟ್ಟು ಅವರು ಯಾರನ್ನು ಬೇಕಾದರೂ ಖರೀದಿ ಮಾಡುತ್ತಾರೆ. ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಅವರಿಗಿಲ್ಲ. ಆದರೆ, ಬಿಜೆಪಿಯ ದಿಲ್ಲಿಯ ನಾಯಕರನ್ನೇ ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ. ಯಾರನ್ನು ಬೇಕಾದರೂ ಅವರು ಖರೀದಿ ಮಾಡಬಹುದು, ಅವರಿಗೆ ಆ ಶಕ್ತಿ ಇದೆ ಎಂದು ಮಾರ್ಮಿಕವಾಗಿ ಹೇಳಿದರು.
ನೈಸ್ ಅಕ್ರಮ-ಶೀಘ್ರ ಬಿಡುಗಡೆ
ನೈಸ್ ಅಕ್ರಮಗಳ ದಾಖಲೆ ಶೀಘ್ರವೇ ಬಿಡುಗಡೆ ಮಾಡುತ್ತೇನೆ. ಸಿಎಂ ಅವರು ರೈತರ ಪರವಾಗಿ ಇದ್ದರೆ, ತತ್ಕ್ಷಣ ನೈಸ್ ಹೆಚ್ಚುವರಿ ಜಮೀನು ವಾಪಸ್ ಪಡೆದು ಮೂಲ ರೈತರಿಗೆ ನೀಡಿ ಎಂದರು.
ಕಾಂಗ್ರೆಸ್ನ 30 ಶಾಸಕರು ಪಕ್ಷ ಬಿಡುವರು: ಎಚಿxಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ನವರು ಆಪರೇಷನ್ ಹಸ್ತದ ಗುಲ್ಲು ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ನಮ್ಮ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ ಎಂದರು.
ಸರ್ವಪಕ್ಷ ಸಭೆಗೆ ಹೋಗುವೆ
ಕಾವೇರಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಕರೆಯಲಾಗುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವೆ. ಅಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಹೇಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.