Govt Appointment ಅತಿ ಶೀಘ್ರದಲ್ಲಿ 13 ಸಾವಿರ ದಷ್ಟು ಹುದ್ದೆಗಳ ನೇಮಕ : ರಾಮಲಿಂಗಾರೆಡ್ಡಿ

ಕಾಂಗ್ರೆಸ್ ನಲ್ಲಿ ಫ್ರೀಬರ್ಡ್ ನಂತಿದ್ದವರಿಗೆ ಬಿಜೆಪಿಯಲ್ಲಿ ಉಸಿರು ಗಟ್ಟುತ್ತಿದೆ...

Team Udayavani, Aug 23, 2023, 2:48 PM IST

Ramalinga reddy 2

ದಾವಣಗೆರೆ: ಅತಿ ಶೀಘ್ರದಲ್ಲಿ 13 ಸಾವಿರ ದಷ್ಟು ಹುದ್ದೆಗಳ ನೇಮಕ ಮಾಡಿಕೊಳ್ಳ ಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, 13 ಸಾವಿರ ಹುದ್ದೆಗಳ ನೇಮಕಾತಿ ಜೊತೆಗೆ 5 ಸಾವಿರ ಹೊಸ ಬಸ್ ಖರೀದಿಸಲಾಗುವುದು. ಹುದ್ದೆಗಳ ನೇಮಕ, ಬಸ್ ಖರೀದಿ ನಂತರ ಕೊರೊನಾ ಕಾರಣಕ್ಕಾಗಿ ಗ್ರಾಮಾಂತರ ಭಾಗದಲ್ಲಿ ಸ್ಥಗಿತಗೊಳಿಸ ಲಾಗಿದ್ದ ಬಸ್ ಸಂಚಾರ ಪುನಾರಂಭಗೊಳಿಸಲಾಗುವುದು ಎಂದು ತಿಳಿಸಿದರು.

ಕೆಎಸ್ಸಾರ್ಟಿಸಿ, ಬಿಬಿಎಂಪಿ ಒಳಗೊಂಡಂತೆ ಎಲ್ಲ ವಿಭಾಗದಲ್ಲಿ ವಿದ್ಯುತ್ ಬಸ್ ಖರೀದಿ ಮಾಡಲಾಗುವುದು. ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ.‌ ಆದಷ್ಟು ಬೇಗ ವಿದ್ಯುತ್ ಬಸ್ ಖರೀದಿಸಿ ನಗರ ಸಾರಿಗೆ ವ್ಯವಸ್ಥೆಗೂ ಬಳಕೆ ಮಾಡಲಾಗುವುದು ಎಂದು ತಿಳಿಸಿದರು.

ಶಕ್ತಿ ಯೋಜನೆಯಿಂದ ಸಂಸ್ಥೆಗೆ ನಷ್ಟ ಆಗುವುದಿಲ್ಲ. ಯೋಜ‌ನೆ ಆರಂಭದ ನಂತರ 43 ಕೋಟಿಯಷ್ಟು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಮಹಿಳೆಯರಿಂ ದಲೇ ಶಕ್ತಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ನಾಲ್ಕೂ ವಿಭಾಗದಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ರಾಜ್ಯದಲ್ಲಿ ದಿನಕ್ಕೆ 1.56 ಲಕ್ಷದಷ್ಡು ಷೆಡ್ಯೂಲ್ ಇದೆ. ಅದರಲ್ಲಿ ಒಂದರೆಡು ಮಾರ್ಗದಲ್ಲಿ ಸಣ್ಣಪುಟ್ಟ ವ್ಯತ್ಯಾಸ ಆಗಿರ ಬಹುದು. ನಮ್ಮ ವಿರೋಧ ಪಕ್ಷಗಳು ಅದನ್ನೇ ದೊಡ್ಡದ್ದಾಗಿ ಮಾಡುವ ಮೂಲಕ ಶಕ್ತಿ ಯೋಜನೆಯನ್ನೇ ಮುರಿಯುವ ಕೆಲಸ ಮಾಡುತ್ತಿವೆ ಎಂದು ದೂರಿದರು.

ಶಕ್ತಿ ಯೋಜನೆಯಡಿ ಜೂನ್ ನಲ್ಲಿ ಶೇ. 80 ರಷ್ಟು ಹಣ ಸಂದಾಯವಾಗಿದೆ. ಜುಲೈನಲ್ಲಿ 293 ಕೋಟಿ ಬಂದಿದೆ. ಇನ್ನೂ ಹಣ ಬರಬೇಕಿದೆ. ನಾಲ್ಕು ವಿಭಾಗದಿಂದ ಡೇಟಾ ನೀಡಿದ ತಕ್ಷಣವೇ ಹಣ ಬಿಡುಗಡೆ ಆಗುತ್ತದೆ. ಶಕ್ತಿ ಯೋಜನೆಗಾಗಿಯೇ 500 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ದೇವಾಲಯಗಳ ಅರ್ಚಕರಿಗೆ ನೇರವಾಗಿ ಹಣ ಸಂದಾಯ ಮಾಡಲು ಕಂದಾಯ ಇಲಾಖೆಯವರಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವರೂ ಆಗಿರುವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಕಾಂಗ್ರೆಸ್ ನಲ್ಲಿ ಫ್ರೀಬರ್ಡ್ ನಂತಿದ್ದವರಿಗೆ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ಇರುವ ಕಾರಣಕ್ಕೆ ಮತ್ತೆ ಕಾಂಗ್ರೆಸ್ ಗೆ ಬರುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ನಮ್ಮ ಪಕ್ಷದಲ್ಲಿ ಫ್ರೀ ಬರ್ಡ್ ನಂತೆ ಓಡಾಡಿಕೊಂಡು ಇದ್ದವರಿಗೆ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇರುವ ಕಾರಣಕ್ಕೆ ಬಿಟ್ಟು ಬರುತ್ತಿದ್ದಾರೆ. ಅಲ್ಲಿ ಕೋಳಿಗಳನ್ನು ಕೆಜಿ ಗಟ್ಟಲೆ ತೂಕಕ್ಕೆ ಹಾಕುವಂತಹ ವಾತಾವರಣ ಇದೆ. ಹಾಗಾಗಿ ಮತ್ತೆ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿಯವರು ಹತಾಶರಾಗಿ ಏನಾದರೂ ಮಾಡಿ ಶಕ್ತಿ ಇತರೆ ಯೋಜನೆಗಳ ಮುರಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.