Cauvery : ಜಲ ವಿವಾದಗಳ ಕುರಿತು ಸರ್ವ ಪಕ್ಷ ಸಭೆ; ಪ್ರಧಾನಿ ಭೇಟಿಗೆ ತೀರ್ಮಾನ

ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು...

Team Udayavani, Aug 23, 2023, 5:24 PM IST

1-sadsad

ಬೆಂಗಳೂರು: ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ನಡೆಯಿತು.

ಸಭೆಯಲ್ಲಿ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, , ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ, , ಜಗದೀಶ ಶೆಟ್ಟರ್, ಡಿ.ವಿ.ಸದಾನಂದ ಗೌಡ,ವೀರಪ್ಪ ಮೊಯ್ಲಿ, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಚಲುವರಾಯಸ್ವಾಮಿ, ಕೆ.ಜೆ.ಜಾರ್ಜ್, ಕೃಷ್ಣ ಭೈರೇ ಗೌಡ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರು ಸಂಸದರು, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲ ಮೋಹನ್‌ ಕಾತರಕಿ, ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸರ್ವಪಕ್ಷಗಳ ನಿಯೋಗದ ಮೂಲಕ ತೆರಳಿ ಪ್ರಧಾನಿಯನ್ನು ಭೇಟಿಯಾಗೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಬೇಕು. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ಬೆಂಬಲ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯ ಬಳಿಕ ಟ್ವೀಟ್ ಮಾಡಿದ್ದಾರೆ.

ಕಾವೇರಿ ವಿವಾದ ಬಹಳ ಹಳೆಯದು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಕಾವೇರಿ ಪ್ರಾಧಿಕಾರವು 22 ಸಭೆ ಹಾಗೂ ನಿಯಂತ್ರಣ ಸಮಿತಿಯು 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ ಎಂದು ಸಿಎಂ ಟ್ವೀಟ್ ನಲ್ಲಿ ಹೇಳಿದ್ದಾರೆ.

ಟಾಪ್ ನ್ಯೂಸ್

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.