Sugar: ಅ.1ರಿಂದ ದೇಶದಿಂದ ಸಕ್ಕರೆ ರಫ್ತಿಗೆ ನಿಷೇಧ?: ಏಳು ವರ್ಷಗಳ ಬಳಿಕ ಇಂಥ ನಿರ್ಧಾರ
Team Udayavani, Aug 23, 2023, 8:35 PM IST
ನವದೆಹಲಿ: ಪ್ರಸಕ್ತ ವರ್ಷದ ಅ.1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಸಕ್ಕರೆ ರಫ್ತು ಮಾಡುವುದನ್ನು ನಿಷೇಧಿಸಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಏಳು ವರ್ಷಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಇಂಥ ತೀರ್ಮಾನ ಕೈಗೊಂಡಿದೆ. ಹೀಗಾಗಿ, ನ್ಯೂಯಾರ್ಕ್, ಲಂಡನ್ ಸೇರಿದಂತೆ ಜಗತ್ತಿನ ಮಾರುಕಟ್ಟೆಗಳಲ್ಲಿ ದೇಶದಿಂದ ರಫ್ತಾಗುವ ಸಕ್ಕರೆ ಲಭ್ಯವಾಗದು. ಈಗಾಗಲೇ ದೇಶದಿಂದ ಅಕ್ಕಿ, ಈರುಳ್ಳಿ ರಫ್ತು ಮಾಡುವುದರ ಮೇಲೆ ನಿಷೇಧವಿದೆ.
ಮೊದಲು ನಮ್ಮ ದೇಶದ ಅಗತ್ಯವನ್ನು ಪೂರೈಸಬೇಕಾಗಿದೆ. ಇದರ ಜತೆಗೆ ಸಾಕಷ್ಟು ಪ್ರಮಾಣದಲ್ಲಿ ಇಥೆನಾಲ್ ಅನ್ನೂ ಉತ್ಪಾದನೆ ಮಾಡಬೇಕಾಗಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮುಂದಿನ ತಿಂಗಳ ಅಂತ್ಯದ ವರೆಗೆ ದೇಶದಲ್ಲಿ ಇರುವ ಸಕ್ಕರೆ ಕಾರ್ಖಾನೆಗಳಿಗೆ 6.1 ಮಿಲಿಯನ ಟನ್ ಸಕ್ಕರೆ ರಫ್ತು ಮಾಡಲು ಸರ್ಕಾರದ ಅನುಮತಿ ನೀಡಿದೆ. ಕಳೆದ ವರ್ಷ ಕಾರ್ಖಾನೆಗಳಿಗೆ 11.1 ಮಿಲಿಯ ಟನ್ ಸಕ್ಕರೆ ಮಾರಾಟಕ್ಕೆ ಅನುಮತಿ ನೀಡಲಾಗಿತ್ತು. 2016ರಲ್ಲಿ ಸಕ್ಕರೆ ರಫ್ತು ಮಾಡುವುದರ ಮೇಲೆ ಶೇ.20 ತೆರಿಗೆ ವಿಧಿಸಲಾಗಿತ್ತು. ಪ್ರಸಕ್ತ ವರ್ಷ ದೇಶದ ಉತ್ಪಾದನೆ ಶೇ.3.3 ಅಂದರೆ 31.7 ಮಿಲಿಯ ಟನ್ಗಳಿಗೆ ಕುಸಿಯುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.