Tragic: ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ – ಮಗ ನೀರುಪಾಲು
Team Udayavani, Aug 24, 2023, 10:21 AM IST
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಮಾರಾಟಕ್ಕೆಂದು ತಾವರೆ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ – ಮಗ ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ತಾಲೂಕಿನ ಭೂಚನಹಳ್ಳಿ ಕೆರೆಯಲ್ಲಿ ಬುಧವಾರ ಸಂಜೆ ನಡೆದಿದೆ.
ಮೃತರ ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು (45), ಕೇಶವ (15) ಎಂದು ಗುರುತಿಸಲಾಗಿದೆ.
ತಾವರೆ ಹೂ ಕೀಳಲು ತಂದೆ ಮತ್ತು ಮಗ ಬಂದಿದ್ದರೆನ್ನಲಾಗಿದೆ. ಬಟ್ಟೆ, ಮೊಬೈಲ್ ಮತ್ತು ಚಪ್ಪಲಿ ದಡದಲ್ಲಿ ಇಟ್ಟು, ತಾವರೆ ಹೂ ಕೀಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಬಂದ ಮತ್ತೋರ್ವ ಮಾರಾಟಗಾರ ಮೊಬೈಲ್ ರಿಂಗ್ ಕೇಳಿ ಕರೆ ಸ್ವೀಕರಿಸಿದಾಗ ಮೃತನ ತಾಯಿ ತಾವರೆ ಹೂ ಕೀಳಲು ತಂದೆ ಮಗ ಬಂದಿದ್ದರು ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹರೀಶ್, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ದ್ದು. ಕತ್ತಲಾದ ಕಾರಣ ಶವ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಗುರುವಾರ ಬೆಳಗ್ಗೆ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.