Arrest ಆಗಿರುವ ಕಾರವಾರ ಸೀಬರ್ಡ್ ಭೂಸ್ವಾಧೀನ ಅಧಿಕಾರಿ ಸಸ್ಪೆಂಡ್
Team Udayavani, Aug 25, 2023, 8:40 PM IST
ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣದಲ್ಲಿ ಬಂಧನವಾಗಿರುವ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶಿಸಿದ್ದಾರೆ.
ಇತ್ತೀಚೆಗೆ ವರ್ಗಾವಣೆಗೊಂಡು ಕಾರವಾರ ಸೀಬರ್ಡ್ ಭೂಸ್ವಾಧೀನ ಅಧಿಕಾರಿಯಾಗಿದ್ದ ಜೆ.ಉಮೇಶ್ ಅವರ ಮೇಲೆ ಅಕ್ರಮ ಭೂ ಮಂಜೂರಾತಿ ಸಂಬಂಧ ತರೀಕೆರೆ ಉಪವಿಭಾಗಾಧಿಕಾರಿ ಡಾ|ಕಾಂತರಾಜ್ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಾಗುತ್ತಿದ್ದಂತೆ ತಹಶೀಲ್ದಾರ್ ಜೆ.ಉಮೇಶ್ ಬಂಧನ ಭೀತಿಯಿಂದ ಕಣ್ಮರೆಯಾಗಿದ್ದರು. ಕಡೂರು ಪೊಲೀಸರು ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಜೆ.ಉಮೇಶ್ ಅವರನ್ನು ಬಂಧಿಸಿದ್ದಾರೆ. ಕಡೂರು ತಾಲೂಕಿನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಉಳ್ಳಿನಾಗರು ಸರ್ಕಾರಿ ಬೀಳು ಸರ್ವೇ ನಂ 43ರಲ್ಲಿನ 5.04 ಎಕರೆ ಜಮೀನು ಅಕ್ರಮ ಭೂ ಮಂಜೂರಾತಿ ಮಾಡಿರುವ ಆರೋಪ ಈತನ ಮೇಲಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸರ್ಕಾರಿ ಅಧಿಕಾರಿ ಗಂಭೀರ ಕರ್ತವ್ಯಲೋಪ ಮತ್ತು ಸರ್ಕಾರಕ್ಕೆ ತೀವ್ರ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಅಧಿಕಾರಿಯ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇದ್ದು, ಈ ಕಾರಣದಿಂದ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.