Uppinangady ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
Team Udayavani, Aug 26, 2023, 1:02 AM IST
ಉಪ್ಪಿನಂಗಡಿ: ಹದಿನೈದು ದಿನಗಳ ಹಿಂದೆ ಮರದಿಂದ ಬಿದ್ದು ಗಾಯಗೊಂಡಿದ್ದ ಇಚ್ಲಂಪಾಡಿ ನಿವಾಸಿ ಸೋಮನಾಥ (47) ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಮೊಂಟೆತಡ್ಕ ನಿವಾಸಿಯಾಗಿರುವ ಸೋಮನಾಥ ಅಗಸ್ಟ್ 7 ರಂದು ಗ್ರಾಮದ ಮಾನಡ್ಕ ಎಂಬಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದ ವೇಳೆ ಮರದಗೆಲ್ಲು ಕಡಿಯುವಾಗ ಅಯತಪ್ಪಿ ಬಿದ್ದು ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 22ರಂದು ನಿಧನರಾಗಿದ್ದಾರೆ.
ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.