Illegal Theater: ವಿನಾಯಕ ಚಿತ್ರಮಂದಿರದ ಮಾಲೀಕನ ವಿರುದ್ಧ ಸುಮೋಟೋ ಪ್ರಕರಣ ದಾಖಲು

ಅಧಿಕಾರಿಗಳ ವಿರುದ್ಧ ಕ್ರಮ ಇಲ್ವಾ?

Team Udayavani, Aug 26, 2023, 8:37 AM IST

3-theerthahalli

ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ವಿನಾಯಕ ಚಲನಚಿತ್ರ ಮಂದಿರದ ಮಾಲೀಕನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವೊಂದು ದಾಖಲಾಗಿದ್ದು, ಕಟ್ಟಡದ ಲೈಸೆನ್ಸ್ ಹಾಗೂ ಪ್ರದರ್ಶನದ ಲೈಸೆನ್ಸ್ ಇಲ್ಲದೆ ಚಿತ್ರಮಂದಿರ ನಡೆಸುತ್ತಿದ್ದ ಕಾರಣ ಎಫ್ಐಆರ್ ದಾಖಲಾಗಿದೆ.

ಘಟನೆ ಹಿನ್ನಲೆ ಏನು?

ವಿನಾಯಕ ಚಿತ್ರಮಂದಿರದ ಕಟ್ಟಡವು ಆ.22 ರ ರಾತ್ರಿ ಸುಮಾರು 09.30 ರ ಸಮಯದಲ್ಲಿ ರಜಿನಿಕಾಂತ್ ನಟನೆಯ ಜೈಲರ್ ಚಿತ್ರ ಪ್ರದರ್ಶನ ನಡೆಯುತ್ತಿದ್ದಾಗ ಮುಂಭಾಗದ ಕಟ್ಟಡ ಕುಸಿದು ಬಿದ್ದಿತ್ತು. ಚಿತ್ರ ಮಂದಿರದ ಮುಂಭಾಗ ನಿಲಿಸಿದ್ದ 5 ಕ್ಕೂ ಹೆಚ್ಚು ಬೈಕ್ ಗಳು ಜಖಂಗೊಂಡಿತ್ತು.

ಚಿತ್ರಮಂದಿರ ಮಾಲೀಕ ಕೆ.ರವೀಂದ್ರ ಕಾಮತ್‌ ಬಿನ್ ವೆಂಕಟರಾಯ ಕಾಮತ್ ತಮ್ಮ ವಿನಾಯಕ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನ ಮಾಡಲು ಸೂಕ್ತ ಪರವಾನಿಗೆಯನ್ನು ಪಡೆದುಕೊಳ್ಳದೇ ನಡೆಸುತ್ತಿರುವುದು ಈಗ ಬೆಳಕಿಗೆ ಬಂದಿದೆ.

ಸಾರ್ವಜನಿಕ ಸ್ಥಳವಾಗಿರುವ ವಿನಾಯಕ ಚಿತ್ರ ಮಂದಿರದ ಕಟ್ಟಡದ ಸದೃಢತೆ ಪ್ರಮಾಣ ಪತ್ರದ ಅವಧಿ ಈಗಾಗಲೇ ಮೀರಿ ಹೋಗಿದ್ದು, ಸೂಕ್ತ ಪ್ರಮಾಣ ಪತ್ರ ಪಡೆದುಕೊಳ್ಳದೇ ಮಾನವನ ಜೀವಕ್ಕೆ ಅಪಾಯವಾಗುವ ಸಾಧ್ಯತೆಯ ಬಗ್ಗೆ ಅರಿವಿದ್ದರೂ ಕೂಡ ಚಿತ್ರ ಮಂದಿರ ಮಾಲೀಕರು ಹಳೆಯ ಕಟ್ಟಡಕ್ಕೆ ಅಧಿಕೃತ ಪ್ರಾಧಿಕಾರದಿಂದ ಕಟ್ಟಡದ ಸದೃಢತೆ ಬಗ್ಗೆ ಪ್ರಮಾಣ ಪತ್ರವನ್ನು ಪಡೆದುಕೊಳ್ಳದೇ ಇರುವುದರಿಂದ ಚಲನಚಿತ್ರ ಮಂದಿರದಲ್ಲಿ ಸಾರ್ವಜನಿಕರನ್ನ‌ ಕೂರಿಸಿಕೊಂಡು ಸಿನಿಮಾ ಪ್ರದರ್ಶನ ನಡೆಸಿರುವ ಕಾರಣ ಸುಮೋಟೋ ಪ್ರಕರಣ ದಾಖಲಾಗಿದೆ.‌

ಅಧಿಕಾರಿಗಳ ವಿರುದ್ಧ ಕ್ರಮ ಇಲ್ವಾ?

ಈ ವಿಷಯದ ಬಗ್ಗೆ ಶುಕ್ರವಾರ ತೀರ್ಥಹಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈಗಾಗಲೇ ಕಟ್ಟಡದ ಬಗ್ಗೆ ಜಿಲ್ಲಾಧಿಕಾರಿ ಸೇರಿ ಎಲ್ಲಾ ಅಧಿಕಾರಿಗಳಿಗೂ ತಿಳಿಸಿದ್ದೆವು ಎಂದು ಹೇಳಿದ್ದರು. ಆದರೆ ಮಾಲೀಕನ ವಿರುದ್ಧ ಮಾತ್ರ ಎಫ್ಐಆರ್ ಆಗಿದ್ದು, ಕಾನೂನುಗಳೆಲ್ಲಾ ಸಣ್ಣಪುಟ್ಟ ಜನರಿಗೆ ವಿನಃ ಅಧಿಕಾರಿ, ರಾಜಕಾರಣಿಗಳ ವಿರುದ್ಧವಲ್ಲವೆಂಬುದು ಮತ್ತೊಮ್ಮೆ ಸಾಬೀತಾಗಿದೆ. ಹಾಗಾದರೆ ಈ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇಲ್ವಾ? ಅವರ ವಿರುದ್ಧ ಕ್ರಮವೇನು? ಎಂಬುದು ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.