ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಕಾರ್ಮಿಕ ಇಲಾಖೆಯಿಂದ ವಿನೂತನವಾಗಿ ಜಾಗೃತಿ
Team Udayavani, Aug 26, 2023, 2:20 PM IST
ಬೆಂಗಳೂರು: ಎಳೆಯ ಮಕ್ಕಳ ಉಜ್ವಲ ಭವಿಷ್ಯಕ್ಕೆ ಕುತ್ತು ಈ ಬಾಲಕಾರ್ಮಿಕ ಪದ್ಧತಿ ಇದನ್ನು ವಿರೋಧಿಸುವ ಕುರಿತು ಕಾರ್ಮಿಕ ಇಲಾಖೆಯ ಮೂಲಕ ಬಿತ್ತಿಚಿತ್ರವನ್ನು ಪ್ರದರ್ಶಿಸಿ, ಜಾಗೃತಿಯನ್ನು ಮೂಡಿಸುವ ವಿಶಿಷ್ಟ ಪ್ರಯತ್ನ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಜಂಟಿ ಕಾರ್ಯದರ್ಶಿ ಡಾ.ಜಿ ಮಂಜುನಾಥ್ ಹೇಳಿದರು.
ಬೆಂಗಳೂರಿನ ವಿಠ್ಠಲ್ ಮಲ್ಯ ವೃತ್ತದಲ್ಲಿ ಇಲಾಖೆಯ ವತಿಯಿಂದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಭಿತ್ತಿಚಿತ್ರ ಪ್ರದರ್ಶನ ಮೂಲಕ ಜಾಗೃತಿ ನಡೆಸಲಾಯಿತು.
ಬಾಲ ಕಾರ್ಮಿಕರನ್ನು ಯಾರೇ ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 1092 ಹಾಗೂ 112ಗೆ ಕರೆ ಮಾಡಿ ತಿಳಿಸಿ ಈ ಮೂಲಕ ನಾವು ಅಗತ್ಯ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಪರ ಕಾರ್ಮಿಕ ಆಯುಕ್ತರು ಹಾಗೂ ಮಂಡಳಿಯ ಜಂಟಿ ಕಾರ್ಯದರ್ಶಿ ಡಾ. ಜಿ ಮಂಜುನಾಥ್ ಹಾಗೂ ಖ್ಯಾತ ಕನ್ನಡ ಚಿತ್ರರಂಗದ ನಿರ್ದೇಶಕ ಹಾಗೂ ನಟ ಹೇಮಂತ್ ಹೆಗಡೆ ಹಾಗೂ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.