Shakti Scheme: ಕೋಟಿ ವನಿತೆಯರಿಂದ ಉಚಿತ ಪ್ರಯಾಣ!


Team Udayavani, Aug 26, 2023, 3:19 PM IST

tdy-11

ಚಾಮರಾಜನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಚಾಮರಾಜನಗರ ವಿಭಾಗದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಉಚಿತವಾಗಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ 1 ಕೋಟಿಯ ಮೈಲುಗಲ್ಲು ದಾಟಿದೆ!

ಶಕ್ತಿ ಯೋಜನೆ ಆರಂಭವಾದ ಜೂ.11ರಿಂದ ಇದುವರೆಗೆ ಜಿಲ್ಲೆಯಲ್ಲಿ 1,05,76,930 ಮಹಿಳೆಯರು ಉಚಿತ ಪ್ರಯಾಣದ ಟಿಕೆಟ್‌ಗಳನ್ನು ಪಡೆದಿದ್ದಾರೆ! ರಾಜ್ಯ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲಿಗೆ ಅನುಷ್ಠಾನಗೊಂಡಿತು. ಆರಂಭದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಉದ್ಯೋಗಕ್ಕಾಗಿ ದೂರದ ನಗರ, ಪಟ್ಟಣಗಳಿಗೆ ತೆರಳುವ ಮಹಿಳೆಯರಿಗೆ, ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಯೋಜನೆಯಿಂದ ಅನುಕೂಲವಾಗಿದೆ.

ಹೆಣ್ಣು ಮಕ್ಕಳು ಉದ್ಯೋಗಕ್ಕೆ, ಪ್ರವಾಸಿ ತಾಣ, ದೇವಾಲಯ, ಶಾಲಾ ಕಾಲೇಜು ಮತ್ತಿತರ ಕಾರ್ಯಗಳಿಗೆ ಹೋಗಿ ಬರಲು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರುವುದರಿಂದ ಸಾಕಷ್ಟು ಅನುಕೂಲವಾಗಿದೆ.

1.05 ಕೋಟಿಗೇರಿದ ಫ್ರೀ ಟಿಕೆಟ್‌: ಜೂ.11ರಂದು ಶಕ್ತಿ ಯೋಜನೆ ಚಾಮರಾಜನಗರ ಜಿಲ್ಲೆಯಲ್ಲೂ ಆರಂಭಗೊಂಡಿತು. ಜೂನ್‌ ಅಂತ್ಯದವರೆಗೆ ಒಟ್ಟಾರೆ 41,93,946 ಪ್ರಯಾಣಿಕರು ನಿಗಮದ ಬಸ್‌ಗಳಲ್ಲಿ ಸಂಚರಿಸಿದ್ದಾರೆ. ಈ ಪೈಕಿ 24,10,918 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಮಾಣ ಶೇ.57.49ರಷ್ಟಿದೆ. ಜುಲೈ ತಿಂಗಳಿನಲ್ಲಿ ಒಟ್ಟು 79,05,964 ಪ್ರಯಾಣಿಕರು ಸಂಚರಿಸಿದ್ದಾರೆ. ಈ ಪೈಕಿ 54,76,569 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಮಾಣ ಶೇ.69.27ರಷ್ಟಿದೆ. ಆಗಸ್ಟ್‌ ತಿಂಗಳ 17ರವರೆಗೆ ಒಟ್ಟು 42,44,889 ಪ್ರಯಾಣಿಕರು ಸಂಚರಿಸಿದ್ದಾರೆ. ಈ ಪೈಕಿ 26,89,443 ಮಹಿಳೆಯರು ಪ್ರಯಾಣಿಸಿದ್ದು, ಇವರ ಪ್ರಮಾಣ ಶೇ.63.36ರಷ್ಟಿದೆ.

ಒಟ್ಟಾರೆ ಯೋಜನೆ ಆರಂಭಗೊಂಡ ದಿನದಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 1,63,44,799 ಪ್ರಯಾಣಿಕರು ನಿಗಮದ ಬಸ್‌ಗಳಲ್ಲಿ ಸಂಚರಿಸಿದ್ದು, ಇವರಲ್ಲಿ 1,05,76,930 ಮಹಿಳಾ ಪ್ರಯಾಣಿಕರು ಇದ್ದು ಶೇ.64.71 ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದು, ಯೋಜನೆ ಸೌಲಭ್ಯ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 507 ಬಸ್‌: ಚಾಮರಾಜನಗರ ವಿಭಾಗವು ಒಟ್ಟು 4 ಕೆಎಸ್‌ಆರ್‌ಟಿಸಿ ಘಟಕಗಳನ್ನು ಹೊಂದಿದ್ದು, 507 ಬಸ್‌ ಹೊಂದಿದೆ. ಮಹಿಳಾ ಸಬಲೀಕರಣದ ಭಾಗವಾಗಿ ಶಕ್ತಿ ಯೋಜನೆ ಯಶಸ್ವಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿನಿಯರು ನಗರಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆಯಲ್ಲಿ ಅವಕಾಶವಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದರಿಂದ ಕೆಲಸ ಕಾರ್ಯದ ನಿಮಿತ್ತ ಜಿಲ್ಲಾ, ತಾಲೂಕು ಕೇಂದ್ರಕ್ಕೆ ಹೋಗಿ ಬರಲು ಭರಿಸುತ್ತಿದ್ದ ಪ್ರಯಾಣದ ಖರ್ಚು ಉಳಿತಾಯವಾಗುತ್ತಿದೆ. ಬಡ ಕುಟುಂಬದ ನಮಗೆ ಬಸ್‌ ಚಾರ್ಜ್‌ಗೆ ಖರ್ಚಾಗುತ್ತಿದ್ದ ಹಣ ಅಗತ್ಯ ವಸ್ತುಗಳ ಖರೀದಿಗೆ ಬಳಸಲು ಸಹಾಯಕವಾಗಿದೆ.-ನಾಗಮ್ಮ, ಭೀಮನಬೀಡು, ಗುಂಡ್ಲುಪೇಟೆ ತಾಲೂಕು.

ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಿದೆ. ವಾರಾಂತ್ಯದ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಬಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಅಗತ್ಯಕ್ಕೆ ತಕ್ಕಂತೆ ನಿಗಮವು ಬಸ್‌ಗಳ ಕಾರ್ಯಾಚರಣೆಗೆ ಕ್ರಮ ವಹಿಸುತ್ತಿದೆ.-ಅಶೋಕ್‌ಕುಮಾರ್‌, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್‌ಆರ್‌ಟಿಸಿ, ಚಾ.ನಗರ ವಿಭಾಗ.

ತಿ.ನರಸೀಪುರ ತಾಲೂಕಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ಉದ್ಯೋಗಕ್ಕಾಗಿ ಬರುತ್ತಿದ್ದೇನೆ. ನನಗೆ ಬರುವ ಸ್ವಲ್ಪ ತಿಂಗಳ ವೇತನದಲ್ಲಿ ಬಸ್‌ ದರಕ್ಕೆ ಶೇ.25 ಖರ್ಚು ಆಗುತ್ತಿತ್ತು. ಉಚಿತ ಪ್ರಯಾಣದಿಂದ ನನಗೆ ಹಣ ಉಳಿತಾಯ ಆಗಿದೆ. ಇನ್ನಿತರ ಖರ್ಚು ಸರಿದೂಗಿಸಿಕೊಳ್ಳಲು ಅನುಕೂಲವಾಗಿದೆ.-ಪದ್ಮಾ, ಖಾಸಗಿ ಸಂಸ್ಥೆ ಉದ್ಯೋಗಿ. ಚಾ.ನಗರ.  

– ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.