Madhya Pradesh ಮೂರೇ ತಿಂಗಳಿರುವಾಗ ಸಂಪುಟ ವಿಸ್ತರಣೆ: ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ 

ಒಬಿಸಿ ಸಮುದಾಯ ಸೆಳೆಯುವುದೇ ಆದ್ಯತೆ

Team Udayavani, Aug 26, 2023, 9:44 PM IST

Madhya Pradesh ಮೂರೇ ತಿಂಗಳಿರುವಾಗ ಸಂಪುಟ ವಿಸ್ತರಣೆ: ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ 

ಭೋಪಾಲ:ಯಾವುದೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ಅಥವಾ ಒಂದೂವರೆ ವರ್ಷಗಳು ಬಾಕಿ ಉಳಿದಿವೆ ಎಂದಾದರೆ ಅಲ್ಲಿ ಸಚಿವ ಸಂಪುಟ ವಿಸ್ತರಣೆಯೋ, ನಿಗಮ-ಮಂಡಳಿಗೆಗಳಿಗೆ ನೇಮಕವನ್ನೊ ಮಾಡಲಾಗುತ್ತದೆ. ಆದರೆ, ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಶನಿವಾರ ಕೈಗೊಂಡ ನಿರ್ಧಾರ ಅಚ್ಚರಿ ತಂದಿದೆ. ಇನ್ನೇನು ಅಲ್ಲಿ ಮೂರು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿದೆ. ಇದರ ಹೊರತಾಗಿಯೂ ಕೂಡ ಮೂವರು ಶಾಸಕರನ್ನು ಸಚಿವರನ್ನಾಗಿ ನೇಮಿಸಿಕೊಂಡಿದ್ದಾರೆ.

ಶನಿವಾರ ಸಚಿವ ಸಂಪುಟಕ್ಕೆ ಸೇರಿದ ಹಿರಿಯ ಶಾಸಕರಾದ ಗೌರಿಶಂಕರ್‌ ಬಿಸೇನ್‌ ಮತ್ತು ರಾಹುಲ್‌ ಲೋಧಿ ಅವರು ಮಧ್ಯಪ್ರದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.45 ಇರುವ ಇತರ ಹಿಂದುಳಿದ ವರ್ಗಗಳನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್‌ ಮತ್ತು ಬಿಜೆಪಿಗೆ ಆ ಸಮುದಾಯವನ್ನು ನಿರ್ಲಕ್ಷಿಸಲು ಸಾಧ್ಯವೇ ಇಲ್ಲ. ಬಿಜೆಪಿ ವರಿಷ್ಠರು ಕೂಡ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆಯನ್ನು ಗಂಭೀರವಾಗಿಯೇ ಪರಿಗಣಿಸಿದ್ದಾರೆ. ಅದಕ್ಕೆ ಅನುಸಾರವಾಗಿ ಈ ವಿಸ್ತರಣೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಹಲವು ಪ್ರಮುಖ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಥ ನಿರ್ಧಾರಕ್ಕೆ ಮುಖ್ಯಮಂತ್ರಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರ ಬಲಗೈ ಬಂಟ ಎಂಬ ಹೇಳಿಕೆಗೆ ಪಾತ್ರರಾಗಿದ್ದ ಸಮಂದರ್‌ ಪಟೇಲ್‌ ಅವರು 1,200 ಕಾರುಗಳಲ್ಲಿ ಬೆಂಬಲಿಗರ ಜತೆಗೆ ಬಂದು ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಇದು ಒಂದು ಉದಾಹರಣೆ ಮಾತ್ರ. ಅಂಥ ಪಕ್ಷ ಸೇರ್ಪಡೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲೇಬೇಕಾಗಿದೆ. ಇದರ ಜತೆಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಘೋಷಣೆ ಮಾಡಿದಂತೆ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್‌, 100 ಯುನಿಟ್‌ ಉಚಿತ ವಿದ್ಯುತ್‌, ಪ್ರತಿ ಮಹಿಳೆಗೆ 1,500 ರೂ. ಸಾಲ ಮನ್ನಾ, ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ ವಾಗ್ಧಾನಗಳು ಬಿಜೆಪಿಗೆ ಸವಾಲಿನ ದಿನಗಳನ್ನು ತರಲಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಪ್ರಸಕ್ತ ಸಾಲಿನ ವಿಧಾನಸಭೆ ಚುನಾವಣೆ ಬಿಜೆಪಿಗೆ ಸವಾಲಿನ ಸ್ಥಿತಿ ತರಲಿದೆ ಎಂಬ ಮಾತುಗಳಿವೆ.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.