![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2023, 9:51 AM IST
ಅಸ್ಸಾಂ: ಶನಿವಾರ ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ಕ್ಯಾಚಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಸುಬ್ರತಾ ಸೇನ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಬಾಲಕನ ತಾಯಿ ಬಿಜೆಪಿ ನಾಯಕನ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಮನೆಗೆಲಸ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದ್ದು ಅವರು ಮೂಲತಃ ಧೋಲೈ ಪ್ರದೇಶದವರು ಎಂದು ಎಎಸ್ಪಿ ಹೇಳಿದ್ದಾರೆ.
ರಾಜ್‌ದೀಪ್ ರಾಯ್ ಅವರ ಹೇಳಿಕೆ ಪ್ರಕಾರ, ಮನೆಕೆಲಸದಾಕೆಯ ಮಗ ನೇಣು ಬಿಗಿದುಕೊಂಡಿರುವ ಕುರಿತು ಕರೆ ಬಂದಿತ್ತು ಕೂಡಲೇ ಮನೆಗೆ ಬಂದು ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಮನೆಕೆಲಸದ ಕುಟುಂಬ ಸಂಸದರ ಮನೆಯ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು ಅಲ್ಲದೆ ಒಳ್ಳೆಯ ಸಂಸ್ಕಾರವನ್ನು ಹೊಂದಿದ ಕುಟುಂಬ ಎಂದು ಸಂಸದ ರಾಜದೀಪ್ ರಾಯ್ ಹೇಳಿದ್ದಾರೆ. ಅಷ್ಟು ಮಾತ್ರವಲ್ಲದೆ ಬಾಲಕನೂ ಉತ್ತಮ ನಡತೆ ಹೊಂದಿದ್ದ ಎಂದು ಹೇಳಿದ್ದರು.
ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದಿದ್ದು, ಮೊದಲು ಬಾಲಕ ವಿಡಿಯೋ ಗೇಮ್ ಆಡಲು ತಾಯಿ ಬಳಿ ಮೊಬೈಲ್ ಕೇಳಿದ್ದ ಎನ್ನಲಾಗಿದೆ ಇದಕ್ಕೆ ತಾಯಿ ಮೊಬೈಲ್ ಕೊಡದಿದ್ದಾಗ ಕೋಪಗೊಂಡಿದ್ದನಂತೆ. ಇದಾದ ಬಳಿಕ ತಾಯಿ ತನ್ನ ಸಹೋದರಿಯ ಜೊತೆ ಮಾರುಕಟ್ಟೆಗೆ ಹೋಗಿ ಬರುವಷ್ಟರಲ್ಲಿ ಬಾಲಕ ನೇಣು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪೊಲೀಸ್ ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ರವಾನೆ ಮಾಡಿದ್ದಾರೆ.
ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: 2024 Lok Sabha polls: ಕಾಂಗ್ರೆಸ್ ನಿಂದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್: ಗೆಹ್ಲೋಟ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.