Road Mishap: ಕುಡಿದು ಲಾರಿ ಓಡಿಸಿದ್ದಕ್ಕೆ 1 ಸಾವು, 8 ವಾಹನ ಜಖಂ 

Team Udayavani, Aug 27, 2023, 10:51 AM IST

Road Mishap: ಕುಡಿದು ಲಾರಿ ಓಡಿಸಿದ್ದಕ್ಕೆ 1 ಸಾವು, 8 ವಾಹನ ಜಖಂ 

ಬೆಂಗಳೂರು: ಮದ್ಯದ ಅಮಲಿನಲ್ಲಿ ಲಾರಿ ಚಾಲಕ ನಿಯಂತ್ರಣ ತಪ್ಪಿ ಕಾರು, ಲಾರಿ, ಬೈಕ್‌ ಸೇರಿ 8 ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಎಸಗಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯ ಕಲ್ಯಾಣನಗರದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಯಲಹಂಕ ನಿವಾಸಿ ನೇಮಿರಾಜ್‌(35) ಮೃತ ದುರ್ದೈವಿ. ಕೃತ್ಯ ಎಸಗಿದ ಲಾರಿ ಚಾಲಕ ಹಿಂದೂಪುರ ಮೂಲದ ಚಂದ್ರಶೇಖರ್‌(37) ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಹಾಸನ ಮೂಲದ ನೇಮಿರಾಜ್‌, ಅಮೆಜಾನ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೇಳು ತಿಂಗಳ ಹಿಂದೆ ಕಸ್ತೂರಿನಗರ ನಿವಾಸಿ ಯುವತಿಯನ್ನು ಮದುವೆಯಾಗಿದ್ದು, ದಂಪತಿ ಯಲಹಂಕದಲ್ಲಿ ವಾಸವಾಗಿದ್ದರು. ಶುಕ್ರವಾರ ವರಮಹಾಲಕ್ಷ್ಮೀ ಹಬ್ಬ ಹಿನ್ನೆಲೆಯಲ್ಲಿ ನೇಮಿರಾಜ್‌ ಪತ್ನಿ ಕಸ್ತೂರಿ ನಗರದಲ್ಲಿರುವ ತವರು ಮನೆಗೆ ಹೋಗಿದ್ದರು. ಹೀಗಾಗಿ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ತಡರಾತ್ರಿ 12 ಗಂಟೆ ಸುಮಾರಿಗೆ ಪತ್ನಿಯ ತವರು ಮನೆಗೆ ಹೋಗುತ್ತಿದ್ದರು.

ಇದೇ ವೇಳೆ ಆರೋಪಿ ಚಂದ್ರಶೇಖರ್‌ ಮದ್ಯದ ಅಮಲಿನಲ್ಲಿ ಕಬ್ಬಿಣದ ಸರಳು ತುಂಬಿದ್ದ ಲಾರಿಯನ್ನು ಹಿಂದೂಪುರದಿಂದ ರಾಮಮೂರ್ತಿನಗರದಲ್ಲಿರುವ ಗೋಡನ್‌ಗೆ ಕೊಂಡೊಯ್ಯುತ್ತಿದ್ದ. ಕಲ್ಯಾಣನಗರದಲ್ಲಿ ಅತೀ ವೇಗವಾಗಿ ಬಂದು ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರ ನೇಮಿರಾಜ್‌, ಎದುರು ಹೋಗುತ್ತಿದ್ದ ಮತ್ತೂಂದು ಲಾರಿಗೆ ಡಿಕ್ಕಿ ಹೊಡೆದುಕೊಂಡಿದ್ದಾರೆ. ಅದೇ ರೀತಿ ಲಾರಿ ಕಾರು, ಮತ್ತೂಂದು ಬೈಕ್‌ ಸೇರಿ 8 ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆ ವೇಳೆ ಲಾರಿ ಮತ್ತು ಕಾರಿನ ಮಧ್ಯೆ ಸಿಲುಕಿದ ನೇಮಿರಾಜ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎಂಟು ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ಕೈದು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡಿದ್ದಾರೆ  ಎಂದು ಸಂಚಾರ ಪೊಲೀಸರು ಹೇಳಿದರು. ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡು ರಸ್ತೆಯಲ್ಲಿ 8 ವಾಹನಗಳು ಜಖಂ:

ಸರಣಿ ಅಪಘಾತ  ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ನಡು ರಸ್ತೆಯಲ್ಲಿ ಜಖಂಗೊಂಡು ನಿಂತಿದ್ದ ವಾಹನಗಳನ್ನು ಕೆಲ ಹೊತ್ತಿನಲ್ಲೇ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಿದರು. ಬಳಿಕ ಲಾರಿ ಚಾಲಕ ಚಂದ್ರಶೇಖರ್‌ನನ್ನು ಶನಿವಾರ ಕೋರ್ಟ್‌ಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆತನ ವಿರುದ್ಧ ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

12-cancer

Breast Cancer: ಸ್ತನಗಳ ಕ್ಯಾನ್ಸರ್‌ ನಿಗಾ ಇರಿಸಬೇಕಾದ ಆರಂಭಿಕ ಲಕ್ಷಣಗಳು

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ

11-knee-1

Osteoarthritis, Knee Osteoarthritis: ಮೂಳೆ ಸವೆತ ಹಾಗೂ ಮಂಡಿ ಸವೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bbmp

Bengaluru: ಅಡಮಾನ ಆಸ್ತಿ ಮಾರಾಟ ಮಾಡಲು ಶೀಘ್ರದಲ್ಲೇ ಇ-ಖಾತೆ

7-bng

Metro: ನಾನ್‌ ಪೀಕ್‌ ಅವರ್‌: ಮೆಟ್ರೋ ಶೇ.5 ಅಗ್ಗ ?

6-bng

Bengaluru: 40 ಲಕ್ಷ ರೂ. ನಕಲಿ ಸಿಗರೆಟ್‌ ಜಪ್ತಿ: ಕೇರಳದ ಇಬ್ಬರು ಆರೋಪಿಗಳ ಸೆರೆ

5-bng

Bengaluru: ಐಶ್ವರ್ಯ ಗೌಡಳಿಂದ ಇನ್ನೊಂದು ಬೆಂಜ್‌ ಕಾರು ಜಪ್ತಿ

4-bng

Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Congress: DK Shivakumar will become Chief Minister during this period: MLA Shivaganga

Congress: ಇದೇ ಅವಧಿಯಲ್ಲಿ ಡಿ.ಕೆ.‌ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

Chhattisgarh: ಮೂವರು ನಕ್ಸಲರ ಎನ್‌ಕೌಂಟರ್‌… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್

6

Ajekar: ಎಷ್ಟು ದಿನ ಟವರ್‌ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್‌ ಕೊಡಿ ಸ್ವಾಮಿ!

Champions Trophy: Bangladesh squad announced; two senior players not included

Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ

5

Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.