Soujanya ತಾಯಿ ಮುಂದೆ ಅಣ್ಣಪ್ಪ ಬೆಟ್ಟದ ಕೆಳಗೆ ಪ್ರಮಾಣ ಮಾಡಿದ ಧೀರಜ್‌,ಮಲ್ಲಿಕ್,ಉದಯ್ ಜೈನ್

Team Udayavani, Aug 27, 2023, 11:40 AM IST

5-belthangady1

ಬೆಳ್ತಂಗಡಿ: 11 ವರ್ಷಗಳ ಹಿಂದೆ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಪ್ರಕರಣದಲ್ಲಿ ತಮ್ಮ‌ಹೆಸರು ಬರುತ್ತಿರುವ ಹಿನ್ನೆಲೆ ಸೌಜನ್ಯ ಅವರ ತಾಯಿ ಮುಂದೆಯೇ ಇಂದು (ಆ.27) ರಂದು ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಪಾದದಲ್ಲಿ ಧೀರಜ್‌ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಆಣೆ ಪ್ರಮಾಣ ಮಾಡಿರುವ ಘಟನೆ ನಡೆಯಿತು.

ಸೌಜನ್ಯ ನ್ಯಾಯಕ್ಕಾಗಿ ವಿಶ್ವ ಹಿಂದು ಪರಿಷತ್ ಭಜರಂಗ ದಳದ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಹಮ್ಮಿಕೊಂಡ ನೇತ್ರಾವತಿಯಿಂದ ಅಣ್ಣಪ್ಪ ಸ್ವಾಮಿ‌ ಬೆಟ್ಟದವರೆಗಿನ ಪಾದಯಾತ್ರೆ ಬಳಿಕ ಪ್ರಮಾಣ ಕೈಗೊಳ್ಳಲಾಯಿತು.

ಬಳಿಕ ಮಾತನಾಡಿದ ಧೀರಜ್‌ ಕೆಲ್ಲ, ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರ ಮುಂದೆಯೇ ನಾವು ಪ್ರಮಾಣ ಕೈಗೊಂಡಿದ್ದೇವೆ. ನಾವು ನಿರ್ದೋಷಿಗಳೆಂದು ಸಾಬೀತಾಗಿದೆ‌. ನಮಗೂ ಕುಟುಂಬ, ಬಂಧುವರ್ಗವಿದೆ. ಆದರೆ ವಿನಾಕಾರಣ ನಮ್ಮ‌ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ. ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು. ನಾವು ಈ ಹಿಂದೆ ಕಾನತ್ತೂರಿಗೂ ತೆರಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಹೇಳಿದರು.

ಆಣೆ ಪ್ರಮಾಣಕ್ಕೂ ಮುನ್ನ ಧರ್ಮಸ್ಥಳದಲ್ಲಿ ಜನಸ್ತೋಮ ಜಮಾಯಿಸಿದ್ದರು. ಪೊಲೀಸರು ಎಲ್ಲರನ್ನು ಶಾಂತಗೊಳಸಿ ಪರಿಸ್ಥಿತಿ ತಿಳಿಗೊಳಿಸಿದರು. ವಿಹಿಂಪ ಸಂಘಟನೆಯ 200 ಕ್ಕೂ ಅಧಿಕ ಮಂದಿ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ದ್ವಾರದವರೆಗೆ ಶಿವ ಪಂಚಾಕ್ಷರಿ ಪಠಣದೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ಬಂದರು‌.

ದ.ಕ. ಎಸ್.ಪಿ. ರಿಷ್ವಂತ್ ಅವರು ಪ್ರತಿಭಟನೆಗಾರರನ್ನು ಧರ್ಮಸ್ಥಳ ದ್ವಾರದ ಬಳಿ ತಡೆದು, ಸೌಜನ್ಯ ಕುಟುಂಬಸ್ಥರು ಹಾಗೂ ವಿಹಿಂಪದ ಪ್ರಮುಖರನ್ನಷ್ಟೆ ದ್ವಾರದ ಒಳ ಪ್ರವೇಶಕ್ಕೆ ಅನುಮತಿ ಮಾಡಿಕೊಟ್ಟರು. ಮಲ್ಲಿಕ್ ಜೈನ್, ಧೀರಜ್ ಕೆಲ್ಲ, ಉದಯ್ ಜೈನ್ ಪ್ರಮಾಣ ಮಾಡುತ್ತಲೆ ಸೌಜನ್ಯ ತಾಯಿ ಕಣ್ಣೀರಿಡುತ್ತಾ ಯಾವುದೇ ಪ್ರತಿಕ್ರಿಯೆ ನೀಡದೆ ಹಿಂದಿರುಗಿದರು.

ಸೌಜನ್ಯ ತಾಯಿ ಕುಸುಮಾವತಿ ಹಾಗೂ ವಿಹಿಂಪ ಪ್ರಮುಖರು ಸೌಜನ್ಯ ಕೊಲೆ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಅಣ್ಣಪ್ಪ ಸ್ವಾಮಿ ಮೆಟ್ಟಿಲಲ್ಲಿ ಪ್ರಾರ್ಥನೆ ಮಾಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.