Biligiriranganabetta: ಬಿಳಿಗಿರಿರಂಗನಬೆಟ್ಟಕ್ಕೆ ಹರಿದು ಬಂದ ಅಪಾರ ಭಕ್ತರು  


Team Udayavani, Aug 27, 2023, 4:05 PM IST

Biligiriranganabetta: ಬಿಳಿಗಿರಿರಂಗನಬೆಟ್ಟಕ್ಕೆ ಹರಿದು ಬಂದ ಅಪಾರ ಭಕ್ತರು   

ಯಳಂದೂರು: ಶ್ರಾವಣಮಾಸದ ಎರಡನೇ ಶನಿವಾರ ತಾಲೂಕಿನ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟದ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದರ್ಶನ ಪಡೆದರು.

ವಿಶೇಷ ಪೂಜೆ: ಶ್ರಾವಣಮಾಸದ ಶನಿವಾರ ಬೆಳಗ್ಗೆಯಿಂದಲೇ ಬಿಳಿಗಿರಿರಂಗನಾಥಸ್ವಾಮಿ ಹಾಗೂ ಅಲಮೇಲಮ್ಮನವರಿಗೆ ವಿವಿಧ ಅಭಿಷೇಕ ಮಾಡಿ, ತುಳಸಿ ಸೇರಿ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಆ ನಂತರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರಾವಣ ಮಾಸ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಜಿಲ್ಲೆ ಸೇರಿ ಹೊರಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಇದರಿಂದ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಕಂಡುಬಂದರು. ಬೆಟ್ಟಕ್ಕೆ ಹೋಗಲು ಯಳಂದೂರು ಪಟ್ಟಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.ಬೆಟ್ಟದ ದೇವಸ್ಥಾನ, ಕಮರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಕಂಡು ಬಂದರು. ಜತೆಗೆ ರಥದ ಬೀದಿಯಲ್ಲಿ ಹೆಚ್ಚಿನ ಸಂಖ್ಯೆಯ ವಾಹನ ಕಂಡು ಬಂದಿತು. ದೇಗುಲದ ಸಮೀಪ ಇರುವ ಅನ್ನ ದಾಸೋಹದಲ್ಲಿ ಸಾವಿರಾರು ಭಕ್ತರಿಗೆ ಮಧ್ಯಾಹ್ನ ಪ್ರಸಾದ ವಿತರಣೆ ವ್ಯವಸ್ಥೆಯನ್ನು ಮಾಡಲಾಯಿತು.

ಮಹಿಳೆಯರೇ ಅಧಿಕ: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿಎಲ್ಲಾ ಮಹಿಳೆಯರಿಗೆ ಉಚಿತ ಬಸ್‌ ವ್ಯವಸ್ಥೆ ಘೋಷಿಸಿರುವ ಕಾರಣ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಸೇರಿ ಇತರೆ ಜಿಲ್ಲೆಗಳಿಂದ ಸಾವಿರಾರು ಮಹಿಳಾ ಭಕ್ತರು ಆಗಮಿಸಿದ್ದು ವಿಶೇಷವಾಗಿತ್ತು. ಪಟ್ಟಣದಿಂದ ಬಿಳಿಗಿರಿ ರಂಗನಬೆಟ್ಟಕ್ಕೆ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚುವರಿ ಬಸ್‌ ಬಿಡಲಾಗಿತ್ತು. ಆದರೂ ಭಕ್ತರಿಂದ ಬಸ್‌ ತುಂಬಿ ತುಳುಕುತ್ತಿದ್ದವು. ಬೆಟ್ಟದ ದೇಗುಲದಲ್ಲಿ ದೇವರ ದರ್ಶನ ಪಡೆಯಲು ತಾತ್ಕಾಲಿಕವಾಗಿ ಮರದಿಂದ ಬ್ಯಾರಿಕ್ಯಾಡ್‌ ನಿರ್ಮಿಸಲಾಗಿತ್ತು. ದಾಸೋಹ ಭವನದಲ್ಲೂ ಭಕ್ತರ ಕ್ಯೂ ಕಂಡು ಬಂದಿತು. ದೇವರ ದರ್ಶನ ಪಡೆದ ಭಕ್ತರು, ನಂತರ ಗರುಡೋತ್ಸವ ಸೇರಿದಂತೆ ಇತರೆ ಸೇವೆಮಾಡಿಸುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂದಿತು. ದಾಸಂದಿರು ಕಡ್ಲೆಪುರಿ, ಬೆಲ್ಲ, ಅಕ್ಕಿ, ಸೇರಿ ಇತರೆ ದವಸಧಾನ್ಯಗಳೊಂದಿಗೆ ದೇಗುಲದ ಸುತ್ತ ಬ್ಯಾಟೆಮನೆ ಸೇವೆಯಲ್ಲಿ ತೊಡಗಿದ್ದರು.

 

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.