Covid: ಕೋವಿಡ್‌ ಅಕ್ರಮಕ್ಕೆ ತಾರ್ಕಿಕ ಅಂತ್ಯ: ಗುಂಡೂರಾವ್‌

ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ

Team Udayavani, Aug 27, 2023, 11:33 PM IST

dinesh gunduroa

ಗದಗ: ಕೋವಿಡ್‌ ಸಂದರ್ಭ ನಡೆದ ಅಕ್ರಮವನ್ನು ತಾರ್ಕಿಕ ಅಂತ್ಯಗೊಳಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸರಕಾರ ಆದೇಶ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆಗೆ ಆದೇಶ ಮಾಡದಿದ್ದರೆ ಸುಮ್ಮನೆ ಆರೋಪ ಮಾಡಿದರು ಅಂತ ಬಿಜೆಪಿಯವರು ದೂರುತ್ತಾರೆ. ತನಿಖೆ ಮಾಡಿಸಿದರೆ, ಇದು ದ್ವೇಷದ ರಾಜಕಾರಣ ಎನ್ನುತ್ತಾರೆ. ನಾವು ವಿಪಕ್ಷದಲ್ಲಿದ್ದಾಗ ಸ್ಪಷ್ಟವಾಗಿ ಆರೋಪ ಮಾಡಿದ್ದೆವು. ಬೇರೆ ಬೇರೆ ದೂರು, ಮಾಹಿತಿಯಾಧಾರದ ಮೇಲೆ ಪಾರದರ್ಶಕವಾಗಿ ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದೇವೆ ಎಂದರು.

ತನಿಖೆಗೆ ಬಿಜೆಪಿಯವರಿಗೆ ಭಯ ಯಾಕೆ, ಅದನ್ನು ಸ್ವೀಕಾರ ಮಾಡಬೇಕು. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ಆಗಬೇಕು ಅಲ್ವಾ? ಎಂದರು. ಆಡಳಿತಕ್ಕೆ ಬಂದ ಮೇಲೆ ಏನೂ ಮಾಡೋದಿಲ್ಲ ಅನ್ನೋದು ಸರಿಯಲ್ಲ. ನಾವು ಹೇಳಿದ್ದನ್ನೇ ಮಾಡಬೇಕು, ಮಾಡುತ್ತಿದ್ದೇವೆ. ಕೋವಿಡ್‌ ಅಕ್ರಮ ತನಿಖೆಯೊಂದೇ ಅಲ್ಲ, ಶೇ. 40 ಕಮಿಷನ್‌ ವಿಚಾರ, ಬಿಬಿಎಂಪಿಯಲ್ಲಿ ಆಗಿರುವ ಅವ್ಯವಹಾರ ಬಗ್ಗೆಯೂ ತನಿಖೆ ಮಾಡಲಾಗುತ್ತಿದೆ ಎಂದರು.

ತಿರುಗಿಯೂ ನೋಡದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೋ ಭೇಟಿ ವೇಳೆ ರಸ್ತೆ ಬದಿ ನಿಂತಿದ್ದ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ ಸಚಿವ ದಿನೇಶ್‌, ಮೋದಿ ಅವರು ನೋಡಲಿ ಅಂತಾ ಬಿಜೆಪಿ ರಾಜ್ಯಾಧ್ಯಕ್ಷರು ಬೀದಿಯಲ್ಲಿ ನಿಂತಿದ್ದರು. ಆದರೆ ಮೋದಿ ಅವರನ್ನು ತಿರುಗಿಯೂ ನೋಡಲಿಲ್ಲ. ಬಿಜೆಪಿ ರಾಜ್ಯ ಮುಖಂಡರನ್ನು ನೋಡೋಕೆ ಅವರಿಗೆ ಅಸಡ್ಡೆ ಎಂದರು.
ಚುನಾವಣೆ ಪ್ರಚಾರಕ್ಕೆ ಮೋದಿಯವರನ್ನು ಕರೆಯಿಸಿ ಬೀದಿ ಬೀದಿ ಓಡಾಡಿಸಿ ಅವರ ಮಾನ, ಮರ್ಯಾದೆ ತೆಗೆದರು. ಅವರ ಹೆಸರಿನಲ್ಲಿ ವೋಟ್‌ ಕೇಳಿದರು. ಆದರೆ ಬಂದಿದ್ದು 60 ಸೀಟ್‌ ಮಾತ್ರ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ವ್ಯಂಗ್ಯ ವಾ ಡಿದರು.

ಹಗರಣದ ತನಿಖೆ ಖಚಿತ: ಜಾರಕಿಹೊಳಿ
ಬೆಳಗಾವಿ: ಈ ಹಿಂದಿನ ಬಿಜೆಪಿ ಸರಕಾರದ ಅವ ಧಿಯ ಕೋವಿಡ್‌ ಹಾಗೂ 40 ಪರ್ಸೆಂಟ್‌ ಕಮಿಷನ್‌ ಹಗರಣವನ್ನು ತನಿಖೆಗೆ ಒಳಪಡಿಸುವುದು ಸೂಕ್ತ. ಇದರಲ್ಲಿ ಸಂಬಂ ಧಿಸಿದ ಸಚಿವರು ಹಾಗೂ ಅ ಧಿಕಾರಿಗಳು ಭಾಗಿಯಾಗಿದ್ದಾರೆ. ತನಿಖೆ ಆಗುವುದಂತೂ ಖಚಿತ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 40 ಪರ್ಸೆಂಟ್‌ ಕಮಿಷನ್‌, ಕೊರೊನಾ ವೇಳೆ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ, ನೀರಾವರಿ ಕಾಮಗಾರಿಗಳಲ್ಲಿ ಹಗರಣದ ಬಗ್ಗೆ ನಾವೇ ಆಗ ಆರೋಪ ಮಾಡಿದ್ದೇವೆ. ಈಗ ನಮ್ಮ ಸರಕಾರ ಬಂದಿರುವುದರಿಂದ ತನಿಖೆ ನಡೆಸಲಾಗುವುದು. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿದಾಗ ಎಲ್ಲವೂ ಬಹಿರಂಗವಾಗಲಿದೆ ಎಂದರು. ಬಿಜೆಪಿ ಆಡಳಿತದಲ್ಲಿಯ ಆರೋಗ್ಯ ಸಚಿವರು ಕಾಂಗ್ರೆಸ್‌ ಸೇರ್ಪಡೆ ಆಗುತ್ತಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸತೀ ಶ, ಈಗ ಅವರು ಬರುವುದು, ಬಿಡುವುದು ಎರಡನೇ ಮಾತು. ಆದರೆ ಕೋವಿಡ್‌ ಹಗರಣ ಕುರಿತು ಸಂಪೂರ್ಣ ಪರಿಶೀಲನೆ ನಡೆಸಲಾಗುವುದು. ಈಗ ಅವರು ಮಾಜಿಯಾಗಿದ್ದಾರೆ. ಅವರಿಗೆ ಏನೂ ಕೆಲಸವಿಲ್ಲ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರ ಇದೆ. ಕೋವಿಡ್‌ ಹಗರಣ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.