ICC ಕಿವುಡರ ಟಿ20 ವಿಶ್ವಕಪ್: ಭಾರತ ತಂಡದಲ್ಲಿ ಕುಂದಾಪುರದ ಪೃಥ್ವಿರಾಜ್ ಶೆಟ್ಟಿ
Team Udayavani, Aug 27, 2023, 11:41 PM IST
ಕುಂದಾಪುರ: ಕತಾರ್‌ನಲ್ಲಿ ವರ್ಷಾಂತ್ಯ ನಡೆಯಲಿರುವ ಅಂತಾ ರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿ ಸಲಾಗಿದ್ದು, ಕುಂದಾಪುರ ಮೂಲದ ಪೃಥ್ವಿರಾಜ್ ಶೆಟ್ಟಿ ಹುಂಚನಿ ಸ್ಥಾನ ಪಡೆದಿದ್ದಾರೆ. ಇವರು ಈ ತಂಡದ ಲ್ಲಿರುವ ಕರ್ನಾಟಕದ ಏಕೈಕ ಆಟಗಾರ.
ಪೃಥ್ವಿರಾಜ್ ಶೆಟ್ಟಿ ಅವರು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಹುಂಚನಿಯ ದಿ| ಸುಭಾಶ್ಚಂದ್ರ ಶೆಟ್ಟಿ ಹಾಗೂ ಶೀಲಾವತಿ ದಂಪತಿಯ ಪುತ್ರ. ಹುಟ್ಟು ಕಿವುಡರಾಗಿದ್ದರೂ ಈ ವೈಕಲ್ಯ ಕ್ರಿಕೆಟ್ ಸಾಧನೆಯ ಕನಸಿಗೆ ಅಡ್ಡಿಯಾ ಗಲೇ ಇಲ್ಲ. ಈ ಅಡೆತಡೆ ಯನ್ನೇ ಮೆಟ್ಟಿ ನಿಂತು, ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿ ರುವುದು ಅವರ ಪರಿಶ್ರಮಕ್ಕೆ ಸಾಕ್ಷಿ.
ಅಂಪಾರು ಮೂಡುಬಗೆಯ ವಾಗೊjàತಿ ವಿಶೇಷ ಮಕ್ಕಳ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಕುಂದಾ ಪುರದ ಟಾರ್ಪ ಡೋಸ್ ತಂಡದ ಆಟಗಾರನಾಗಿ, ಚಕ್ರವರ್ತಿ ತಂಡದ ಅರೆ ಕಾಲಿಕ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ಮೂಗರ ಕ್ರಿಕೆಟ್ ತಂಡದ ಆಟಗಾರನಾಗಿ, ಕರ್ನಾಟಕ ತಂಡದ ನಾಯಕನಾಗಿದ್ದಾರೆ. 32 ವರ್ಷದ ಪೃಥ್ವಿರಾಜ್ ಭಾರತದ ಕಿವುಡರ ಕ್ರಿಕೆಟ್ ತಂಡದ ಪ್ರಧಾನ ವೇಗಿ ಹಾಗೂ ಕೆಳ ಕ್ರಮಾಂಕದ ಬ್ಯಾಟರ್ ಆಗಿದ್ದಾರೆ. ಇತ್ತೀಚೆಗೆ ನಡೆದ ತ್ರಿಕೋನ ಏಕದಿನ ಸರಣಿ, ಅದಕ್ಕೂ ಮೊದಲು ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.
ಡಿ. 1ರಿಂದ ಡಿ. 12ರ ವರೆಗೆ ಕತಾರ್‌ನ ದೋಹಾದಲ್ಲಿ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ವೀರೇಂದ್ರ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದು, ಆಲ್‌ರೌಂಡರ್ ಸಾಯ್ ಆಕಾಶ್ ಉಪನಾಯಕನಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.