Karnataka: ಸರಕಾರಕ್ಕೆ ಶತ ಸಂಭ್ರಮ- ಸಿದ್ದರಾಮಯ್ಯ ನೇತೃತ್ವದ ಆಡಳಿತಕ್ಕೆ ಗ್ಯಾರಂಟಿಯೇ ಶಕ್ತಿ


Team Udayavani, Aug 28, 2023, 12:57 AM IST

SIDDU DKS

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿವೆ. ಮೇ 20ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯ ಚುನಾವಣ ಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಪ್ಪಿಗೆಯ ಮುದ್ರೆ ಒತ್ತಿದ್ದರು.

ಅಂದಿನಿಂದಲೇ ಗ್ಯಾರಂಟಿಗಳ ಜಾರಿಗೆ ಸಂಪನ್ಮೂಲ ಕ್ರೋಡೀಕರಣ, ಫ‌ಲಾನುಭವಿ ಗಳ ಆಯ್ಕೆ ಇತ್ಯಾದಿ ಕಸರತ್ತು ಆರಂಭಿಸಿದ ಸರಕಾರವು ಐದರಲ್ಲಿ ಮೂರು ಗ್ಯಾರಂಟಿಗಳನ್ನು ಷರತ್ತುಬದ್ಧವಾಗಿ ಜಾರಿಗೊಳಿಸಿದ್ದು, ಇನ್ನುಳಿದ ಎರಡರ ಅನುಷ್ಠಾನಕ್ಕಾಗಿ ದಿನ ಗಣನೆ ಆರಂಭವಾಗಿದೆ.

ಷರತ್ತಿಲ್ಲದ ಶಕ್ತಿ
ಷರತ್ತುಗಳಿಲ್ಲದೆ ಜಾರಿಯಾದ ಏಕೈಕ ಮತ್ತು ಪ್ರಪ್ರಥಮ ಯೋಜನೆ ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ “ಶಕ್ತಿ’. ಜೂ. 11ರಂದು ಆರಂಭಗೊಂಡ “ಶಕ್ತಿ’ಯ ಪ್ರಯೋಜನ ವನ್ನು ಇದುವರೆಗೆ 46.80 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಪಡೆದುಕೊಂಡಿದ್ದು, ಇದಕ್ಕಾಗಿ 1,084 ಕೋಟಿ ರೂ. ಮೌಲ್ಯದ ಶೂನ್ಯದರ ಟಿಕೆಟ್‌ಗಳನ್ನು ವಿತರಿಸ ಲಾಗಿದೆ. ಜೂ. 11ರಿಂದ 30ರ ವರೆಗೆ 259.96 ಕೋಟಿ ರೂ. ಮೌಲ್ಯದ ಟಿಕೆಟ್‌ ವಿತರಣೆ ಯಾಗಿತ್ತು. ಜೂ. 11ರಿಂದ ಜು. 30ರ ವರೆಗೆ 687.49 ಕೋಟಿ ರೂ. ಮೌಲ್ಯದ ಟಿಕೆಟ್‌ ಬಿಕರಿ ಯಾಗಿತ್ತು. ಹಾಲಿ ತಿಂಗಳಲ್ಲಿ ಮೊದಲ ಕಂತಿನ ಸಹಾಯಾನುದಾನವಾಗಿ 125.48 ಕೋಟಿ ರೂ., ಎರಡನೇ ಕಂತಿನಲ್ಲಿ ಮರುಪಾವತಿಗಾಗಿ 294.74 ಕೋಟಿ ರೂ. ಸೇರಿ ಒಟ್ಟು 420.22 ಕೋಟಿ ರೂ. ಬಿಡುಗಡೆ ಆಗಿದೆ. ಇನ್ನೂ 664.34 ಕೋಟಿ ರೂ.ಗಳನ್ನು ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಬೇಕಿದೆ.

ಅನ್ನಭಾಗ್ಯದೊಂದಿಗೆ ನಗದು ಭಾಗ್ಯ
ಅನ್ನಭಾಗ್ಯ ಯೋಜನೆಯಡಿ ಆಹಾರ ಭದ್ರತ ಕಾಯ್ದೆಯಡಿ ಕೇಂದ್ರ ಸರಕಾರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನು ಬಿಪಿಎಲ್‌, ಅಂತ್ಯೋದಯ ಅನ್ನ ಕಾರ್ಡುದಾರರಿಗೆ ಎಂದಿನಂತೆ ವಿತರಿಸಲಾಗುತ್ತಿದ್ದು, ಇನ್ನುಳಿದ 5 ಕೆ.ಜಿ. ಅಕ್ಕಿಯ ಬದಲಿಗೆ ನೇರ ನಗದು ಪಾವತಿ ಮಾಡಲಾಗುತ್ತಿದೆ. ಆಹಾರ ಇಲಾಖೆಯ ಅಂದಾಜಿನ ಪ್ರಕಾರ ತಿಂಗಳಿಗೆ 2.40 ಲಕ್ಷ ಟನ್‌ನಷ್ಟು ಹೆಚ್ಚುವರಿ ಅಕ್ಕಿ ಬೇಕಾಗಿದ್ದು, ಭಾರತೀಯ ಆಹಾರ ನಿಗಮದಿಂದ ಅಕ್ಕಿ ಸಿಗದೆ ಇರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಸಹಿತ ವಿವಿಧ ರಾಜ್ಯಗಳ ಮೊರೆ ಹೋಗಿದೆ.

ಹಿನ್ನಡೆ ಉಂಟು ಮಾಡಿದ ಘಟನೆಗಳು
ಕೆಎಸ್ಸಾರ್ಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆಗೆ ಯತ್ನಿಸಿದಾಗ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮುಗಿಬಿದ್ದಿದ್ದರು. ವರ್ಗಾವಣೆಯ ದಂಧೆಯ ಆರೋಪಗಳೂ ಎರಗಿದವು. ಈ ಘಟನೆ ಮಾಸುವ ಮುನ್ನವೇ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ಪತ್ರ ಬರೆದ ಪ್ರಕರಣ ಮತ್ತಷ್ಟು ಮುಜುಗರ ಉಂಟು ಮಾಡಿತ್ತು. ಬಿಬಿಎಂಪಿ ಗುತ್ತಿಗೆದಾರರು ಡಿಸಿಎಂ ಡಿ.ಸಿ. ಶಿವಕುಮಾರ್‌ ವಿರುದ್ಧ ಬಾಕಿ ಬಿಲ್‌ ಪಾವತಿಗೆ ಲಂಚ ಸ್ವೀಕಾರದ ಆರೋಪ ಹೊರಿಸಿ ರಾಜಭವನದ ಬಾಗಿಲು ತಟ್ಟಿದ್ದರು. ಎರಡೇ ತಿಂಗಳಿಗೆ ಸಚಿವರು-ಶಾಸಕರ ನಡುವೆ ಸಮನ್ವಯದ ಕೊರತೆ ಸೃಷ್ಟಿಯಾಗಿತ್ತು. ಈ ಅಸಮಾಧಾನ ತಣಿಸಲು ಸಿಎಂ ಸರಣಿ ಸಭೆಗಳನ್ನು ನಡೆಸಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಬಿಡುಗಡೆ ಮಾಡಿದ್ದರು. ಈಗ ಮಳೆ ಮಾಯವಾಗಿ ಬರಗಾಲದ ಛಾಯೆ ಆವರಿಸಿದೆಯಲ್ಲದೆ, ಕಾವೇರಿ ಜಲ ವಿವಾದಕ್ಕೆ ಮರುಜೀವ ಬಂದಿದೆ.

ನಮ್ಮ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿವೆ.
ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.  -ಸಿದ್ದರಾಮಯ್ಯ, ಮುಖ್ಯಮಂತ್ರಿ

ಸರಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ.
ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆÇÉೆಡೆ ಉಚಿತವಾಗಿ
ಬಸ್‌ ಪ್ರಯಾಣ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ
ಯಾವ ಸರಕಾರ ಇಷ್ಟು ಕೆಲಸ ಮಾಡಿದೆ?-ಡಿ.ಕೆ. ಶಿವಕುಮಾರ್‌, ಡಿಸಿಎಂ

 

ಟಾಪ್ ನ್ಯೂಸ್

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

ಲಾಕಪ್‌ಡೆತ್‌: ಹೆಡ್‌ ಕಾನ್‌ಸ್ಟೆಬಲ್‌ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Flight

Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್‌ ಕರೆ ಬಂದಿದೆ: ಸರಕಾರ

Dansuh-aiswarya

Chennai: ಐಶ್ವರ್ಯ ರಜನಿಕಾಂತ್‌, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್‌

IT-Appoint

information Technology Appointment: ಬೆಂಗಳೂರ‌ಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.