Congress ನಾಯಕತ್ವಕ್ಕೆ ಹೊಸ ತಂಡ: ಲೋಕ ಚುನಾವಣೆ ಹಿನ್ನೆಲೆ ಹೊಸಬರಿಗೆ ಅವಕಾಶಕ್ಕೆ ಚಿಂತನೆ
Team Udayavani, Aug 28, 2023, 1:00 AM IST
ಬೆಂಗಳೂರು: ಕಾಂಗ್ರೆಸ್ ಪಕ್ಷ ಬಹುಮತ ದೊಂದಿಗೆ ಸುಭದ್ರ ಸರಕಾರ ರಚಿಸಿ, ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ. ಇನ್ನೇನಿದ್ದರೂ ಲೋಕಸಭಾ ಚುನಾವಣೆ ಮೇಲೆ ಕಣ್ಣು. ಇದಕ್ಕಾಗಿ ಹೊಸ ತಂಡವನ್ನೇ ಸಜ್ಜುಗೊಳಿಸುತ್ತಿದ್ದು, ಬರುವ ತಿಂಗಳು ಅದು ಅಸ್ತಿತ್ವಕ್ಕೆ ಬರಲಿದೆ.
ಪಕ್ಷದ ಕಾರ್ಯಾಧ್ಯಕ್ಷರಿಂದ ಹಿಡಿದು ಜಿಲ್ಲಾಧ್ಯಕ್ಷರ ಹಂತದವರೆಗೆ ಇಡೀ ಸಮಿತಿಯನ್ನು ಪುನಾರಚನೆ ಮಾಡಲು ಕಾಂಗ್ರೆಸ್ ಉದ್ದೇಶಿಸಿದೆ. ಈ ಪ್ರಕ್ರಿಯೆಯಲ್ಲಿ ಹೊಸಮುಖ ಅಥವಾ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಹುರುಪು ತುಂಬಲಾಗುತ್ತಿದೆ. ಈಗಾಗಲೇ ಈ ನಿಟ್ಟಿನಲ್ಲಿ ಪೂರ್ವಸಿದ್ಧತೆಗಳು ಆರಂಭಗೊಂಡಿವೆ.
ಈಗಿನ ಸಮಿತಿಯ ಪದಾಧಿಕಾರಿಗಳ ಪೈಕಿ ಕೆಲವರು ಸಚಿವರು, ಶಾಸಕರಾಗಿದ್ದಾರೆ. ಅಂತಹವರು ಎರಡೂ ಕಡೆಗೆ ಗಮನ ಹರಿಸಲು ಆಗುವುದಿಲ್ಲ. ಮತ್ತೂಂದೆಡೆ ಕೆಲವರಿಂದ ನಿರೀಕ್ಷಿತ ಮಟ್ಟದಲ್ಲಿ ಆಸಕ್ತಿ ಕಂಡುಬರುತ್ತಿಲ್ಲ. ಅಂತಹವರ ಬದಲಾವಣೆ ಮಾಡುವ ಮೂಲಕ ಪಕ್ಷಕ್ಕೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ. ಹೀಗೆ ಸಮಿತಿ ಪುನಾರಚನೆ ವೇಳೆ ಎಲ್ಲ ಸಮುದಾಯಗಳಿಗೆ ಆದ್ಯತೆ ನೀಡಲಾಗುತ್ತದೆ. ಜತೆಗೆ ಸಾಧ್ಯವಾದಷ್ಟು ಆಯಾ ಪ್ರದೇಶಗಳಿಂದಲೇ ರಾಜ್ಯ ಪದಾಧಿಕಾರಿಗಳನ್ನು ನೇಮಕ ಮಾಡುವ ಚಿಂತನೆ ಇದೆ.
ಕಾರ್ಯಾಧ್ಯಕ್ಷರ ಬದಲಾವಣೆ
ವಿಶೇಷವಾಗಿ ಈಗಿರುವ ಕಾರ್ಯಾಧ್ಯಕ್ಷರಲ್ಲಿ ವೀರಶೈವ ಲಿಂಗಾಯತ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾಕ, ರೆಡ್ಡಿ ಸಮುದಾಯಗಳ ತಲಾ ಒಬ್ಬರಿದ್ದಾರೆ. ಅದೇ ಸಮುದಾಯದ ನಾಯಕರನ್ನು ಆಯಾ ಹುದ್ದೆಗಳಿಗೆ ನೇಮಕ ಮಾಡಲು ಉದ್ದೇಶಿಸಲಾಗಿದೆ. ಅದೇ ಜಿಲ್ಲೆಗಳಿಂದಲೇ ಆಯ್ಕೆ ಅನುಮಾನವಾದರೂ ಆಯಾ ಪ್ರದೇಶದಿಂದ ಆಯ್ದು ಕಾರ್ಯಾಧ್ಯಕ್ಷ ಸ್ಥಾನ ನೀಡುವ ಚಿಂತನೆ ಇದೆ. ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಸ್ಥಾನಕ್ಕೆ ಕಳೆದ ಎಪ್ರಿಲ್‌ನಲ್ಲಷ್ಟೇ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಹಾಗಾಗಿ ಅವರು ಎಂದಿನಂತೆ ಮುಂದುವರಿಯಲಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿಯಲ್ಲಿ ಒಟ್ಟು 180ಕ್ಕೂ ಅಧಿಕ ಪದಾಧಿಕಾರಿಗಳು ಇದ್ದಾರೆ. ಅವರಲ್ಲಿ ಬಹುತೇಕರನ್ನು ಬದಲಾವಣೆ ಮಾಡುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ ಎಂದು ಮೂಲಗಳು ತಿಳಿಸಿವೆ.
ನನ್ನ ಸಹಿತ ಕೆಪಿಸಿಸಿ ಪದಾಧಿಕಾರಿಗಳಲ್ಲಿ ಹಲವರು ಸಚಿವರಾಗಿದ್ದಾರೆ, ಹಲವರು ಶಾಸಕರಾಗಿದ್ದಾರೆ. ಎರಡೂ ಕಡೆ ಗಮನ ಹರಿಸಲು ಕಷ್ಟ. ಚುನಾವಣೆ ದೃಷ್ಟಿಯಲ್ಲಿ ಪಕ್ಷದ ಸಂಘಟನೆಗಾಗಿ ಸಮಿತಿ ಪುನಾರಚನೆ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ತಿಂಗಳು ಸ್ಪಷ್ಟ ಚಿತ್ರಣ ಸಿಗಲಿದೆ.
-ಸಲೀಂ ಅಹಮ್ಮದ್, ಕೆಪಿಸಿಸಿ ಕಾರ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು
Vitla: ರಿಕ್ಷಾ- ಬೈಕ್ ಢಿಕ್ಕಿ; ಮೂವರಿಗೆ ಗಾಯ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.