Ayushman Bharat- ಆರೋಗ್ಯ ಕರ್ನಾಟಕ ಯೋಜನೆ: ಕರಾವಳಿಯಲ್ಲಿ ಸೌಲಭ್ಯ ಪಡೆಯುವವರು ಕಡಿಮೆ!
Team Udayavani, Aug 28, 2023, 1:13 AM IST
ಉಡುಪಿ: ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವವರ ಸಂಖ್ಯೆ ತೀರಾ ಕಡಿಮೆಯಿದೆ. ಇತರ ಆರೋಗ್ಯ ವಿಮಾ ಸೌಲಭ್ಯಗಳು, ಸರಕಾರಿ ಆಸ್ಪತ್ರೆಗೆ ದಾಖಲಾಗಲು ಹಿಂದೇಟು ಇದಕ್ಕೆ ಮುಖ್ಯ ಕಾರಣ.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಎರಡು ವರ್ಷಗಳಲ್ಲಿ ಉಡುಪಿಯ 54 ಸಾವಿರ ಹಾಗೂ ದಕ್ಷಿಣ ಕನ್ನಡದ 87 ಸಾವಿರ ರೋಗಿಗಳ ಸಹಿತ ರಾಜ್ಯದಲ್ಲಿ ಒಟ್ಟು 34.89 ಲಕ್ಷ ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ.
ಎಲ್ಲೆಲ್ಲಿ ಎಷ್ಟು?
ರಾಜ್ಯದಲ್ಲಿ 2021-22ರಲ್ಲಿ 13,01,232 ಮತ್ತು 2022-23ರಲ್ಲಿ 21,97,665 ರೋಗಿಗಳು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ.ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ, ಜಿಲ್ಲಾ ಸರ್ಜನ್ ಶಿಫಾರಸಿನಂತೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದರೆ ಯೋಜನೆಯಡಿ ಸುಲಭವಾಗಿ ಚಿಕಿತ್ಸೆ ದೊರೆಯುತ್ತದೆ. ಬಿಪಿಎಲ್ ಕಾರ್ಡ್‌ದಾರರಿಗೆ 5 ಲಕ್ಷ ರೂ.ವರೆಗೆ ಹಾಗೂ ಎಪಿಎಲ್ ಕಾರ್ಡ್ ದಾರರಿಗೆ ಚಿಕಿತ್ಸೆ ವೆಚ್ಚದ ಶೇ. 30ರಷ್ಟು ಈ ಯೋಜನೆಯಡಿ ಸೌಲಭ್ಯ ದೊರೆಯಲಿದೆ. ಸರಕಾರಿ ವೈದ್ಯರ ಶಿಫಾರಸಿನ ಬಳಿಕ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದರೂ ಬೇರೆ ಆರೋಗ್ಯ ವಿಮಾ ಸೌಲಭ್ಯ ಪಡೆದರೆ ಆಯುಷ್ಮಾನ್ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ.
ಉಡುಪಿ ಜಿಲ್ಲೆಯಲ್ಲಿ ಕ್ರಮವಾಗಿ 16,999 ಮತ್ತು 37,293 ರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. ದ.ಕ. ಜಿಲ್ಲೆಯಲ್ಲಿ ಈ ಸಂಖ್ಯೆ ಕ್ರಮವಾಗಿ 33,049 ಹಾಗೂ 53,953. ಮಂಡ್ಯದಲ್ಲಿ 2.55 ಲಕ್ಷ, ಹಾಸನದಲ್ಲಿ 22.27 ಲಕ್ಷ, ಬಳ್ಳಾರಿ, ಬೆಂಗಳೂರು ನಗರ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ತಲಾ 1 ಲಕ್ಷಕ್ಕೂ ಅಧಿಕ ರೋಗಿಗಳು ಈ ಯೋಜನೆಯ ಫಲ ಪಡೆದಿದ್ದಾರೆ.
ಉಡುಪಿ, ದ.ಕ.: ಕಡಿಮೆ ಯಾಕೆ?
ಎರಡು ವರ್ಷಗಳಲ್ಲಿ ಉಡುಪಿಯಲ್ಲಿ 54,292, ಕೊಡಗಿನಲ್ಲಿ 45,633, ದ.ಕ.ದಲ್ಲಿ 87,002 ರೋಗಿಗಳು ಚಿಕಿತ್ಸೆ ಪಡೆದಿದ್ದು, ಇದು ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಅತೀ ಕಡಿಮೆ. ಇದಕ್ಕೆ ಹಲವು ಕಾರಣಗಳಿವೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಸುರಕ್ಷೆ ಸಹಿತ ವಿವಿಧ ಖಾಸಗಿ ಆರೋಗ್ಯ ವಿಮಾ ಸೌಲಭ್ಯ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಿದೆ. ಅಲ್ಲದೆ ಬಹುತೇಕರು ಖಾಸಗಿ ಆಸ್ಪತ್ರೆಗೆ ದಾಖಲಾದ ಬಳಿಕ ಆಯುಷ್ಮಾನ್ ಯೋಜನೆಯಡಿ ಸೌಲಭ್ಯ ಪಡೆಯುವ ಯೋಚನೆ ಮಾಡುತ್ತಾರೆ ಅಥವಾ ತಮ್ಮ ಖಾಸಗಿ ಆರೋಗ್ಯ ವಿಮೆ ಅಡಿಯಲ್ಲೇ ಚಿಕಿತ್ಸೆ ಪಡೆಯುತ್ತಾರೆ. ಮೊದಲು ಸರಕಾರಿ ಆಸ್ಪತ್ರೆಗೆ ದಾಖಲಾಗುವುದಿಲ್ಲ. ಎಪಿಎಲ್ ಕಾರ್ಡ್‌ದಾರರು ಈ ಯೋಜನೆಯ ಫಲ ಪಡೆಯಲು ಮುಂದೆ ಬರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಯೋಜನೆಯ ಲಾಭ ಪಡೆಯುವುದು ಹೇಗೆ?
ಗಂಭೀರ ಆರೋಗ್ಯ ಸಮಸ್ಯೆ ಎದುರಾದ ಸಂದರ್ಭದಲ್ಲಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಅಲ್ಲಿಂದ ಶಿಫಾರಸು ಪತ್ರದೊಂದಿಗೆ ಖಾಸಗಿ ಆಸ್ಪತ್ರೆಗೆ ಹೋದಾಗ ಯೋಜನೆಯಡಿ ಯಾವುದೇ ಸಮಸ್ಯೆ ಇಲ್ಲದೆ ಚಿಕಿತ್ಸೆ ಸಿಗುತ್ತದೆ. ಬಿಪಿಎಲ್ ಕಾರ್ಡ್‌ದಾರರು ಆಧಾರ್ ಕಾರ್ಡ್ ಹೊಂದಿದ್ದಲ್ಲಿ 5 ಲಕ್ಷ ರೂ. ವರೆಗೆ ಚಿಕಿತ್ಸೆಯ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಎಪಿಎಲ್ ಕಾರ್ಡ್‌ದಾರರಿಗೆ ಚಿಕಿತ್ಸೆ ವೆಚ್ಚದ ಶೇ. 30ರಷ್ಟು ಸರಕಾರ ಭರಿಸುತ್ತದೆ. ಸರಕಾರಿ ಆಸ್ಪತ್ರೆಯ ವೈದ್ಯರ ಶಿಫಾರಸು ಪತ್ರ ಇಲ್ಲದೆ ಈ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲ.
ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸರಕಾರಿ ಆಸ್ಪತ್ರೆಯಲ್ಲಿ ಮೊದಲು ದಾಖಲಾಗಿ ಶಿಫಾರಸಿನ ಮೇಲೆ ಖಾಸಗಿ ಆಸ್ಪತ್ರೆಗೆ ಹೋಗಬೇಕಾಗುತ್ತದೆ. ಯೋಜನೆಯಡಿ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ತಾಂತ್ರಿಕ ಸಮಸ್ಯೆಯಿಲ್ಲ. ಬೇರೆ ಆರೋಗ್ಯ ವಿಮಾ ಸೌಲಭ್ಯ ಬಳಸಿದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸೌಲಭ್ಯ ಪಡೆಯಲು ಅವಕಾಶ ಇಲ್ಲ.
– ಡಾ| ಎಚ್. ನಾಗಭೂಷಣ ಉಡುಪ, ಡಿಎಚ್‌ಒ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.