Abaya Dress; ಹಿಜಾಬ್ ಬಳಿಕ ಇದೀಗ ಬುರ್ಖಾ ನಿಷೇಧ: ಶಾಲೆಗಳಲ್ಲಿ ಹೊಸ ನಿಯಮ ತಂದ ಫ್ರಾನ್ಸ್
Team Udayavani, Aug 28, 2023, 12:05 PM IST
ಪ್ಯಾರಿಸ್: ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿನಿಯರು ಅಬಯಾ ಡ್ರೆಸ್ (ಬುರ್ಖಾ) ಗಳನ್ನು ಅವಕಾಶವಿಲ್ಲ ಎಂದು ಫ್ರೆಂಚ್ ಶಿಕ್ಷಣ ಸಚಿವ ಹೇಳಿದ್ದಾರೆ. ಇದಕ್ಕಾಗಿ ದೇಶದಲ್ಲಿ ನಿಯಮವನ್ನು ರೂಪಿಸುವುದಾಗಿ ಹೇಳಿದ್ದಾರೆ. ಈ ಉಡುಪು ಫ್ರಾನ್ಸ್‌ನ ಶಿಕ್ಷಣದಲ್ಲಿ ಕಟ್ಟುನಿಟ್ಟಾದ ಜಾತ್ಯತೀತ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ವಾದಿಸಿದರು.
“ಶಾಲೆಗಳಲ್ಲಿ ಅಬಯಾ ಉಡುಪುಗಳನ್ನು ಧರಿಸುವುದು ಇನ್ನು ಸಾಧ್ಯವಿಲ್ಲ. ಸೆಪ್ಟೆಂಬರ್ 4ರಿಂದ ಶಾಲೆಗಳು ಪುನಾರಾರಂಭಗೊಳ್ಳುವ ಕಾರಣ ರಾಷ್ಟ್ರೀಯ ಮಟ್ಟದಲ್ಲಿ ಶಾಲಾ ಮುಖ್ಯಸ್ಥರಿಗೆ ಇದರ ಬಗ್ಗೆ ಸೂಚನೆ ನೀಡಲಾಗುವುದು” ಎಂದು ಸಚಿವ ಗ್ಯಾಬ್ರಿಯಲ್ ಅಟ್ಟಲ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:Kanakapura ಹಾಡಹಗಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ಕೇಸ್: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ
ಮಹಿಳೆಯರು ಇಸ್ಲಾಮಿಕ್ ಶಿರವಸ್ತ್ರವನ್ನು ಧರಿಸುವುದನ್ನು ನಿಷೇಧಿಸಿರುವ ಫ್ರೆಂಚ್ ಶಾಲೆಗಳಲ್ಲಿ ಅಬಾಯಾಗಳನ್ನು ಧರಿಸುವುದರ ಕುರಿತ ದೀರ್ಘಕಾಲದ ಚರ್ಚೆಯ ನಂತರ ಈ ಕ್ರಮವು ಬಂದಿದೆ.
ಬಲಪಂಥೀಯರು ನಿಷೇಧಕ್ಕೆ ಒತ್ತಾಯಿಸಿದ್ದರು, ಆದರೆ ಎಡಪಂಥೀಯರು ಇದು ನಾಗರಿಕ ಸ್ವಾತಂತ್ರ್ಯವನ್ನು ಅತಿಕ್ರಮಿಸುತ್ತದೆ ಎಂದು ವಾದಿಸಿದ್ದಾರೆ.
“ವಿದ್ಯಾರ್ಥಿಗಳು ತರಗತಿಗೆ ಪ್ರವೇಶಿಸಿದಾಗ, ಅವರನ್ನು ನೋಡಿ ಅವರ ಧರ್ಮವನ್ನು ಗುರುತಿಸಲು ನಿಮಗೆ ಸಾಧ್ಯವಾಗಬಾರದು” ಎಂದು ಅಟ್ಟಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.