Ayodhya ಜ.15ರಂದು ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಆರಂಭ
ಪ್ರತಿಷ್ಠಾಪನಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಆಹಾರ, ವಸತಿ
Team Udayavani, Aug 28, 2023, 7:52 PM IST
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಜ.15ರಿಂದ ಆರಂಭವಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
“ಪ್ರತಿಷ್ಠಾಪನಾ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ 2024ರ ಜ.15ರಿಂದ ಫೆ.15ರವರೆಗೆ ಉಚಿತವಾಗಿ ಅನ್ನಸಂತರ್ಪಣೆ ಹಾಗೂ ವಸತಿ ಏರ್ಪಡಿಸಲಾಗುವುದು. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಏರ್ಪಡಿಸಲಾಗುತ್ತಿದೆ. ಆ ಸಮಯದಲ್ಲಿ ಚಳಿಗಾಲ ಇರುವುದರಿಂದ ಭಕ್ತರಿಗೆ ಬೆಚ್ಚನೆ ಹೊದಿಕೆ ಒದಗಿಸಲಾಗುವುದು. ಜತೆಗೆ ಚಳಿ ಕಾಯಿಸಿಕೊಳ್ಳಲು ಅಲ್ಲಲ್ಲಿ ಬೆಂಕಿ ಉರಿಸಲಾಗುವುದು’ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.
“ರಾಮ ಮಂದಿರದ ಬಾಕಿ ಉಳಿದಿರುವ ನಿರ್ಮಾಣ ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು. ಈ ಸಂಬಂಧ ಶನಿವಾರ ಮತ್ತು ಭಾನುವಾರ ಸರಣಿ ಸಭೆಗಳು ನಡೆದವು’ ಎಂದು ಚಂಪತ್ ರೈ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.