Mangaluru university; ಸರಕಾರಿ ಕಾಲೇಜು ಪದವಿ ತರಗತಿಗೆ ಅತಿಥಿಗಳಿಲ್ಲ !

ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಕಾಲೇಜು ಆರಂಭವಾದರೂ ಪಾಠ ಕಷ್ಟ

Team Udayavani, Aug 29, 2023, 7:00 AM IST

Mangaluru university; ಸರಕಾರಿ ಕಾಲೇಜು ಪದವಿ ತರಗತಿಗೆ ಅತಿಥಿಗಳಿಲ್ಲ !

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಪ್ರಸ್ತುತ ಸಾಲಿನ ಪದವಿ ತರಗತಿಗಳು ಆ. 23ರಿಂದ ಆರಂಭವಾದರೂ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ಬೋಧನೆಗೆ ಸಮಸ್ಯೆಯಾಗಿದೆ.

ವಿ.ವಿ. ವ್ಯಾಪ್ತಿಯಲ್ಲಿ 35 ಸರಕಾರಿ ಕಾಲೇಜು ಇವೆ. ಸುಮಾರು 600 ರಷ್ಟು ಅತಿಥಿ ಉಪನ್ಯಾಸಕ ಹುದ್ದೆಗಳಿವೆ. ಕರಾವಳಿಯ ಸರಕಾರಿ ಕಾಲೇಜಿನಲ್ಲಿ ಖಾಯಂ ಉಪ ನ್ಯಾಸಕರ ಕೊರತೆ ಶೇ. 50ಕ್ಕೂ ಅಧಿಕ ಇದ್ದು, ಅತಿಥಿ ಉಪನ್ಯಾಸಕರು ಅನಿವಾರ್ಯ. ಕಾಲೇಜು ಆರಂಭವಾಗಿ ವಾರ ಕಳೆದರೂ ಅತಿಥಿ ಉಪನ್ಯಾಸಕರು ಬಂದಿಲ್ಲ.

ಸೆ. 16ರ ಬಳಿಕ ಆಗಮನ!
2023-24ನೇ ಸಾಲಿನಲ್ಲಿ ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಅನಂತರ ಉಳಿದ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್‌ ಕೌನ್ಸೆಲಿಂಗ್‌ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಸರಕಾರ ತಿಳಿಸಿದೆ. ಆ. 25ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಸೆ. 2ರ ವರೆಗೆ ನಡೆಯಲಿದೆ. ಸೆ. 4ರಂದು ರಾಜ್ಯವ್ಯಾಪಿ ಮೆರಿಟ್‌ ಪಟ್ಟಿ ಪ್ರಕಟಿಸಲಾಗುತ್ತದೆ. ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಸೆ. 8ರಂದು ಪ್ರಕಟಿಸಲಾಗುತ್ತದೆ. ಸೆ. 11ರಿಂದ 15ರ ವರೆಗೆ ಮೆರಿಟ್‌ ಪಟ್ಟಿಯನ್ವಯ ಕಾಲೇಜು ಆಯ್ಕೆ ಕೌನ್ಸೆಲಿಂಗ್‌ ನಡೆಯಲಿದೆ. ಸೆ. 16ರಂದು ಕೌನ್ಸೆಲಿಂಗ್‌ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಬಳಿಕವಷ್ಟೇ ಅತಿಥಿ ಉಪನ್ಯಾಸಕರು ಕಾಲೇಜಿಗೆ ಆಗಮಿಸಲಿದ್ದಾರೆ. ಒಂದು ವೇಳೆ 2ನೇ ಹಂತದ ಕೌನ್ಸೆಲಿಂಗ್‌ ನಡೆಯಲಿದ್ದರೆ ಅತಿಥಿ ಉಪನ್ಯಾಸಕರಿಗಾಗಿ ಸೆಪ್ಟಂಬರ್‌ ಕೊನೆಯವರೆಗೂ ಕಾಯಬೇಕು!

ಈ ಮಧ್ಯೆ ಮಂಗಳೂರಿನ ನಾಲ್ಕು ಕಾಲೇಜುಗಳಲ್ಲಿ ಮೌಲ್ಯಮಾಪನ ನಡೆಯುತ್ತಿರುವ ಕಾರಣ ಅಲ್ಲಿ ತರಗತಿ ಆರಂಭ ಕಷ್ಟವಾಗಿದೆ. ಜತೆಗೆ ಮಂಗಳೂರು ವಿ.ವಿ. ಅಡಿಯಲ್ಲಿರುವ 6 ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ ಮಾಡಲಾಗಿದೆಯಾದರೂ ಇದರ ನೇಮಕಾತಿಯನ್ನು ವಿ.ವಿ. ಅಂತಿಮ ಮಾಡಿಲ್ಲ.

ಕರ್ತವ್ಯ ಬಿಡುಗಡೆ ಬೇಗ!
ಅತಿಥಿ ಉಪನ್ಯಾಸಕರನ್ನು 2023-24ನೇ ಶೈಕ್ಷಣಿಕ ಸಾಲಿನ ಮುಕ್ತಾಯದವರೆಗೆ ಅಥವಾ 10 ತಿಂಗಳಿಗೆ ಮಾತ್ರ “ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ’ ಮುಂದುವರಿಸಿ ಬಳಿಕ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಸರಕಾರ ಸೂಚಿಸಿದೆ. ಇದರಿಂದ ಮಂಗಳೂರು ವ್ಯಾಪ್ತಿಯ ಅತಿಥಿ ಉಪನ್ಯಾಸಕರಿಗೆ ನಷ್ಟವಾಗುತ್ತಿದೆ ಎಂಬುದು ಉಪನ್ಯಾಸಕರ ಅಳಲು.

ಮಂಗಳೂರು ವ್ಯಾಪ್ತಿಯಲ್ಲಿ ಇತರವಿ.ವಿ.ಗಳ ವೇಳಾಪಟ್ಟಿಗಿಂತ ಸುಮಾರು 2 ತಿಂಗಳ ಮೊದಲೇ (ಜು. 13) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಇದರ ಬದಲು ರಾಜ್ಯದ ಎಲ್ಲ ವಿ.ವಿ.ಗಳ ವ್ಯಾಪ್ತಿಯ ಅತಿಥಿ ಉಪನ್ಯಾಸಕರನ್ನು ಒಂದೇ ದಿನಾಂಕದಂದು ಬಿಡುಗಡೆಗೊಳಿಸಬೇಕು’ ಎನ್ನುತ್ತಾರೆ ಅತಿಥಿ ಉಪನ್ಯಾಸಕರ ಸಂಘದ
ಅಧ್ಯಕ್ಷ ಧೀರಜ್‌ ಕುಮಾರ್‌.

ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಆರಂಭಿಸಲಾಗಿದೆ. ರಾಜ್ಯದ ಇತರ ವಿ.ವಿ.ಗಳ ವ್ಯಾಪ್ತಿಯಲ್ಲಿ ಕಾಲೇಜು ಆರಂಭ ತಡವಾಗಿದೆ. ಆದರೆ ಮಂಗಳೂರು ವ್ಯಾಪ್ತಿಯಲ್ಲಿ ಆ. 23ರಿಂದ ಆರಂಭವಾದ ಕಾರಣ ಕೌನ್ಸೆಲಿಂಗ್‌ ಬೇಗನೆ ಆರಂಭಿಸಲಾಗಿದ್ದು, ಒಂದೆರಡು ವಾರದಲ್ಲಿ ಇದು ಅಂತಿಮವಾಗಲಿದೆ.
-ರಾಮೇಗೌಡ,
ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ
ಪ್ರಾದೇಶಿಕ ಕಚೇರಿ-ಮಂಗಳೂರು

-ದಿನೇಶ್‌ ಇರಾ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.