Gentleman 2; ಸೆಟ್ಟೇರಿತು ಪ್ಯಾನ್ ಇಂಡಿಯಾ ಚಿತ್ರ ‘ಜಂಟಲ್ ಮ್ಯಾನ್-2’
Team Udayavani, Aug 29, 2023, 10:40 AM IST
ತಮಿಳಿನಲ್ಲಿ “ಜಂಟಲ್ ಮ್ಯಾನ್’,”ಕಾದಲನ್’, “ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ “ಜಂಟಲ್ ಮ್ಯಾನ್ 2′ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ.
ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ ಹಸ್ತಾಂತರಿಸುವ ಮೂಲಕ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಚಾಲನೆ ಸಿಕ್ಕಿದೆ.ಎಂ.ಎಂ. ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.
“ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಜಂಟಲ್ ಮ್ಯಾನ್ಗಳಾಗಿರಬೇಕು ಎಂಬುದು ಈ ಚಿತ್ರದ ಆಶಯ. ನಾನು ಇದುವರೆಗೂ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. 200ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದ್ದೇನೆ. ನನಗೆ ಪ್ರೇಕ್ಷಕರ ನಾಡಿಮಿಡಿತ ಗೊತ್ತಿದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುತ್ತಿದ್ದೇವೆ. ನನಗೆ ಪ್ರೇಕ್ಷಕರು ಗುರುಸಮಾನರು. ಅವರು ಚಿತ್ರ ನೋಡಿ ಆಶೀರ್ವಾದ ಮಾಡಿದರಷ್ಟೇ ನಾವು ಗೆಲ್ಲುವುದಕ್ಕೆ ಸಾಧ್ಯ. ಹಾಗಾಗಿ, ಅವರಿಗೆ ಇಷ್ಟವಾಗುವಂತಹ ಚಿತ್ರ ಮಾಡುವುದು ನನ್ನ ಮೊದಲ ಆದ್ಯತೆ’ ಎನ್ನುವುದು ನಿರ್ಮಾಪಕರ ಮಾತು.
“ಜಂಟಲ್ ಮ್ಯಾನ್ 2′ ಚಿತ್ರದಲ್ಲಿ ನಾಯಕನಾಗಿ ಚೇತನ್ ಚೀನು ಅಭಿನಯಿಸುತ್ತಿದ್ದು, ಅವರಿಗೆ ನಾಯಕಿಯರಾಗಿ ನಯನತಾರಾ ಚಕ್ರವರ್ತಿ ಹಾಗೂ ಪ್ರಿಯಾ ಲಾಲ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ಕನ್ನಡ ನಟಿ ಸುಧಾರಾಣಿ, ಸಿತಾರಾ, ಸುಮನ್, ಸತ್ಯಪ್ರಿಯಾ ಸೇರಿದಂತೆ ಬೇರೆಬೇರೆ ಭಾಷೆಗಳ ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.