![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 29, 2023, 1:41 PM IST
ಬೆಂಗಳೂರು: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.
ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ(ಆ.29 ರಂದು) ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: Aamir Khan: 2 ವರ್ಷದ ಬಳಿಕ ಮತ್ತೆ ಬಣ್ಣದ ಲೋಕಕ್ಕೆ ಆಮಿರ್ ಖಾನ್; ಯಾವ ಸಿನಿಮಾ?
ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.