Jharkhand: ಜಾರ್ಖಂಡ್ ಸಿಎಂ ಸೊರೇನ್ಗೆ ತೀವ್ರ ಸಂಕಷ್ಟ
-ಹೇಮಂತ್ ಸೊರೇನ್ ವಿರುದ್ಧ ಜಮೀನು ಲಪಟಾಯಿಸಿದ ಆರೋಪ: ಇಡಿ ತನಿಖೆ
Team Udayavani, Aug 29, 2023, 8:24 PM IST
ರಾಂಚಿ: ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ಇದೀಗ ಮತ್ತೂಂದು ಗಂಭೀರ ಆರೋಪ ಕೇಳಿಬಂದಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಹಗರಣದಲ್ಲಿ ಸೊರೇನ್ ಹೆಸರು ಪ್ರತಿಧ್ವನಿಸಿದೆ. ಈ ಸಂಬಂಧ ಆರೋಪಗಳನ್ನು ಪತ್ತೆ ಮಾಡಿರುವ ಇಡಿ (ಜಾರಿ ನಿರ್ದೇಶನಾಲಯ) ತೀವ್ರ ವಿಚಾರಣೆಗೆ ಸಿದ್ಧವಾಗಿದೆ.
ಇದು ಕೇಂದ್ರ ಸರ್ಕಾರ ಮತ್ತು ಐ.ಎನ್.ಡಿ.ಐ.ಎ. ಒಕ್ಕೂಟದ ಭಾಗವಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷದ ನಡುವೆ ಮತ್ತೂಂದು ಸುತ್ತಿನ ಮಾತಿನ ಸಮರಕ್ಕೆ ಕಾರಣವಾಗಿದೆ. ಸರ್ಕಾರಕ್ಕೆ ಸೇರಿದ ಕನಿಷ್ಠ 35 ಆಸ್ತಿಗಳನ್ನು ಅಕ್ರಮವಾಗಿ ಸೊರೇನ್ ಸುಪರ್ದಿಗೆ ತೆಗೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮೇನಲ್ಲಿ ಜಾರ್ಖಂಡ್ ಕೇಡರ್ನ 2011ರ ಬ್ಯಾಚ್ನ ಐಎಎಸ್ ಅಧಿಕಾರಿ ಛವಿ ರಂಜನ್ ಅವರನ್ನು ಬಂಧಿಸಿದ್ದರು.
ಆಗಿನ ಬಂಗಾಳ ಪ್ರಾಂತ್ಯದಲ್ಲಿದ್ದ ರಾಂಚಿಯ ಜಮೀನುಗಳು ರಕ್ಷಣಾ ಇಲಾಖೆ ಮತ್ತು ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ 1931ರಲ್ಲೇ ಡೀಡ್ ಆಗಿದೆ. ಈ ದಾಖಲೆಗಳನ್ನು ತಿದ್ದುಪಡಿ ಮಾಡಿರುವ ಜೆಎಂಎಂ ಸಚಿವರು, ಹಿರಿಯ ಅಧಿಕಾರಿಗಳು, ಸ್ಥಳೀಯ ಉದ್ಯಮಿಗಳು ಹಾಗೂ ಏಜೆಂಟ್ಗಳು ಅವುಗಳನ್ನು ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಈ ಜಮೀನಿನ ಮಾರುಕಟ್ಟೆ ಮೌಲ್ಯವು ಕೋಟ್ಯಂತರ ರೂಪಾಯಿಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.