Cauvery: ತಮಿಳುನಾಡಿಗೆ ನೀರು: ಭುಗಿಲೆದ್ದ ರೈತರ ಆಕ್ರೋಶ

Team Udayavani, Aug 29, 2023, 11:43 PM IST

RIVER

ಮೈಸೂರು/ಮಂಡ್ಯ: ತಮಿಳುನಾಡಿಗೆ ಐದು ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶಗಳಾದ ಮೈಸೂರು, ಮಂಡ್ಯ, ರಾಮನಗರದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ರೈತ ಸಂಘಟನೆ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ರೈತರು ಹೆದ್ದಾರಿ ತಡೆದು, ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿ ತೀರ್ಮಾನ ವಿರೋಧಿಸಿ ಮೈಸೂರಿನಲ್ಲಿ ಮಂಗಳವಾರ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಯಿತು. ಕಾಡಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರೈತ ಹೋರಾಟಗಾರರು, ತಮಿಳುನಾಡಿಗೆ ನೀರು ಹರಿಸದಿರುವ ತೀರ್ಮಾನ ಕೈಗೊಂಡು ಕಾನೂನು ಹೋರಾಟಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಹೆದ್ದಾರಿ ತಡೆ ಮೂಲಕ ಪ್ರತಿಭಟನೆ ನಡೆಸಿದರು. ಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಜಮಾಯಿಸಿದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರೊಂದಿಗೆ ಕೈ ಜೋಡಿಸಿದ ವಿವಿಧ ಕನ್ನಡ ಪರ, ಪ್ರಗತಿಪರ ಸಂಘಟನೆಗಳ ಮುಖಂಡರು ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ತಮಿಳುನಾಡಿಗೆ ನೀರು ಬಿಡದಂತೆ ಸರಕಾರವನ್ನು ಒತ್ತಾಯಿಸಿದರು. ಅರ್ಧ ಗಂಟೆಗೂ ಅಧಿಕ ಸಮಯ ಹೆದ್ದಾರಿ ತಡೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಕೆಆರ್‌ಎಸ್‌ ಜಲಾಶಯದ ಬಳಿ ನೂರಾರು ರೈತರು ಕಣ್ಣಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ಮದ್ದೂರು ತಾ|ನ ಭಾರತೀನಗರದ ಹಲಗೂರು ವೃತ್ತದ ಬಳಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

ಮಳೆ ಬಂದಿದ್ದರೆ ನಾವು ಕೇಳುವ ಹಾಗೇ ಇಲ್ಲ. ಕಾವೇರಿ ನೀರು ಅದೇ ಹರಿದು ಹೋಗುತ್ತದೆ. ಮಳೆ ಇಲ್ಲದ ಸಂದರ್ಭದಲ್ಲಿ ನೀರು ಬಿಡೋಕಾಗಲ್ಲ ಎಂದು ಮಾನಿಟರಿಂಗ್‌ ಕಮಿಟಿಗೆ ಹೇಳಬೇಕಾಗುತ್ತದೆ. ಈ ಮಾನಿಟರಿಂಗ್‌ ಕಮಿಟಿ ಮಾಡಿದ್ಯಾರು? ಕೋರ್ಟ್‌ ಆದೇಶದ ಮೇಲೆ ಕೇಂದ್ರ ಸರಕಾರ ಮಾನಿಟರಿಂಗ್‌ ಕಮಿಟಿ ಮಾಡಿದೆ. ಏನು ಮಾಡೋದು?

– ರಾಮಲಿಂಗಾ ರೆಡ್ಡಿ,  ಸಾರಿಗೆ ಸಚಿವ

ನಮ್ಮ ವಕೀಲರು ಪ್ರಬಲ ವಾದ ಮಂಡಿಸಿದ್ದಾರೆ. ತಮಿಳುನಾಡಿನವರು 24 ಸಾವಿರ ಕ್ಯುಸೆಕ್‌ ನೀರು ಕೇಳಿದ್ದರು. ಅದನ್ನು ನಮ್ಮ ವಕೀಲರು ಐದು ಸಾವಿರಕ್ಕೆ ಇಳಿಸಿದ್ದಾರೆ. ನಾವು ರೈತರ ಹಿತ ಕಾಪಾಡಬೇಕಿದೆ. ಕಾನೂನನ್ನೂ ಗೌರವಿಸಬೇಕಿದೆ. ಸುಪ್ರೀಂ ಕೋರ್ಟ್‌ನಲ್ಲಿ ಬೈಸಿಕೊಳ್ಳಲು ನಮಗೆ ಇಷ್ಟವಿಲ್ಲ, ನಿಮಗೆ ಇಷ್ಟ ಇದೆಯಾ?

-ಡಿ.ಕೆ. ಶಿವಕುಮಾರ್‌,  ಡಿಸಿಎಂ

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.