Cauvery: ಕಾವೇರಿ ವಿವಾದ ಇತ್ಯರ್ಥಕ್ಕೆ ಸಂಕಷ್ಟ ಸೂತ್ರವೊಂದೇ ಪರಿಹಾರ


Team Udayavani, Aug 30, 2023, 12:57 AM IST

dam

ತಮಿಳುನಾಡು ಮತ್ತು ಕರ್ನಾಟಕದ ನಡುವೆ ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಹಲವಾರು ದಶಕಗಳ ಇತಿಹಾಸವಿದೆ. ಪ್ರತೀ ಬಾರಿಯ ಮಳೆಗಾಲದಲ್ಲೂ ಕಾವೇರಿ ನದಿ ನೀರಿಗಾಗಿ ತಮಿಳುನಾಡು, ಕರ್ನಾಟಕದ ಜತೆಗೆ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್‌ ಮತ್ತು ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಬಾಗಿಲು ಬಡಿಯುವುದು ಮುಂದುವರಿದಿದೆ. ಕಾವೇರಿ ನ್ಯಾಯ ಮಂಡಳಿಯ ಐ ತೀರ್ಪಿನ ಅನಂತರವೂ ತಮಿಳುನಾಡು ಒಂದಿಲ್ಲೊಂದು ಕಾರಣ ಮುಂದಿಟ್ಟುಕೊಂಡು ಕರ್ನಾಟಕಕ್ಕೆ ಕಿರಿಕ್‌ ಮಾಡುತ್ತಲೇ ಇದೆ.

ಪ್ರಸಕ್ತ ವರ್ಷದಲ್ಲಿ ಕಾವೇರಿ ನದಿಗೆ ನೀರು ಹರಿದು ಬರುವ ಭಾಗಗಳಲ್ಲಿ ಸರಿಯಾಗಿ ಮಳೆಯೇ ಆಗಿಲ್ಲ. ಅತ್ತ ತಮಿಳುನಾಡು ನೀರಿಗಾಗಿ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಮುಂದೆ ಹಠ ಮತ್ತು ಸುಪ್ರೀಂ ಕೋರ್ಟ್‌ ಮುಂದೆ ಅರ್ಜಿ ಸಲ್ಲಿಸಿಕೊಂಡು ಕುಳಿತಿದೆ. ಇದರ ನಡುವೆಯೇ, ಮಂಗಳವಾರ ನಡೆದ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತೀ ದಿನವೂ 5 ಸಾವಿರ ಕ್ಯುಸೆಕ್‌ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ಒಂದು ರೀತಿಯಲ್ಲಿ ಇದು ಕರ್ನಾಟಕಕ್ಕೆ ಹಿನ್ನಡೆಯಾದರೂ, ತಮಿಳುನಾಡು ಕೇಳಿದ 24 ಸಾವಿರ ಕ್ಯುಸೆಕ್‌ ನೀರು ಬಿಡುತ್ತಿಲ್ಲ ಎಂಬುದೇ ಸಮಾಧಾನ.

ಆದರೆ ಕರ್ನಾಟಕ ಸರಕಾರ ಪ್ರಾಧಿಕಾರದ ಆದೇಶ ಪಾಲಿಸುವ ಸ್ಥಿತಿಯಲ್ಲಿ ಇಲ್ಲ. ಇದು ಮಳೆ ಕೊರತೆ ವರ್ಷವಾಗಿದ್ದು, ಈಗಲೂ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನಂತೆ ನೀರು ಬಿಡುಗಡೆ ಮಾಡಲಾಗದು ಎಂದು ರಾಜ್ಯ ಸರಕಾರ ಪಟ್ಟು ಹಿಡಿದಿದೆ. ಈ ಸಂಬಂಧ ಸುಪ್ರೀಂ ಕೋರ್ಟ್‌ ಮುಂದೆಯೂ ಪ್ರಮಾಣ ಪತ್ರ ಸಲ್ಲಿಕೆ ಮಾಡಲಾಗಿದ್ದು, ನೀರು ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಹೇಳಿದೆ. ಇದನ್ನು ಅರಿತೇ ತಮಿಳುನಾಡಿನ ಮಧ್ಯಾಂತರ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಣೆ ಹಾಕದೇ, ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿಕೆ ಮಾಡಿದೆ. ಕಾವೇರಿ ವಿಚಾರದಲ್ಲಿ ಪ್ರತೀ ವರ್ಷವೂ ತಮಿಳುನಾಡಿನ ಕಿರಿಕಿರಿಯನ್ನು ಅನುಭವಿಸಿಕೊಂಡು ಬರುತ್ತಿರುವ ಕರ್ನಾಟಕ, ಸಂಕಷ್ಟ ಸೂತ್ರಕ್ಕೆ ಸುಪ್ರೀಂ ಕೋರ್ಟ್‌ ಮತ್ತು ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಮುಂದೆ ಅಹವಾಲು ಸಲ್ಲಿಸುತ್ತಲೇ ಇದೆ. ಸ್ವಾತಂತ್ರ್ಯ ಬರುವುದಕ್ಕಿಂತ ಮುನ್ನವೇ ಈ ವಿಚಾರದಲ್ಲಿ ವಿವಾದ ಶುರುವಾಗಿದ್ದು, ಇದುವರೆಗೆ ಯಾವುದೇ ಪರಿಹಾರ ಕೈಗೊಳ್ಳಲಾಗಿಲ್ಲ. ಸುಪ್ರೀಂ ಕೋರ್ಟ್‌ ಕೂಡ ಆಗಾಗ್ಗೆ ತೀರ್ಪು ನೀಡಿದೆಯಾದರೂ, ಸಂಕಷ್ಟ ಸೂತ್ರದ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ.

ಮಳೆ ಬರದ ವರ್ಷಗಳಲ್ಲಿ ಕರ್ನಾಟಕ ಕಾವೇರಿ ನದಿಯಿಂದ ನೀರನ್ನು ತಮಿಳುನಾಡಿಗೆ ಹರಿಸಬೇಕೇ ಅಥವಾ ಬೇಡವೇ ಎಂಬ ಜಿಜ್ಞಾಸೆ ಇದೆ. ಒಂದು ವೇಳೆ, ನೀರು ಬಿಟ್ಟರೆ, ರಾಜ್ಯದ ರೈತರ ಹಿತಾಸಕ್ತಿ ಅವಗಣಿಸಿದಂತಾಗುತ್ತದೆ. ಬೆಂಗಳೂರು, ಮೈಸೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ತೊಂದರೆಯುಂಟಾಗುತ್ತದೆ. ಇದಕ್ಕೆ ಬದಲಾಗಿ, ನೀರು ಬಿಡದಿದ್ದರೆ, ಕೋರ್ಟ್‌, ಪ್ರಾಧಿಕಾರದ ಸಭೆಗಳಿಗೆ ಸುತ್ತಾಡಬೇಕಾಗುತ್ತದೆ.

ಹೀಗಾಗಿ ಸುಪ್ರೀಂ ಕೋರ್ಟ್‌ ಮುಂದೆ ರಾಜ್ಯ ಸರಕಾರ ಸಂಕಷ್ಟ ಸೂತ್ರದ ಬಗ್ಗೆ ಸಮರ್ಥವಾಗಿ ವಾದ ಮಂಡನೆ ಮಾಡಬೇಕು. ಎಂಥದ್ದೇ ಸನ್ನಿವೇಶದಲ್ಲೂ ಕರ್ನಾಟಕದಿಂದ ನೀರು ಪಡೆದೇ ತೀರುತ್ತೇವೆ ಎಂಬ ತಮಿಳುನಾಡಿನ ವರಸೆಯನ್ನೂ ಬದಲಿಸಬೇಕಾಗಿದೆ. ಇದಕ್ಕೆ ಇರುವ ಒಂದೇ ಮಾರ್ಗ ಸಂಕಷ್ಟ ಸೂತ್ರ ಎಂಬುದನ್ನು ಎಲ್ಲರಿಗೂ ಮನಗಾಣಿಸಬೇಕಾಗಿದೆ.

 

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.