UP: ಎಸ್‌ಪಿ ನಾಯಕನ ನಾಲಿಗೆ ಕತ್ತರಿಸಲು 10 ಲಕ್ಷ ಬಹುಮಾನ ಘೋಷಣೆ ಮಾಡಿದ ಕಾಂಗ್ರೆಸ್ ನಾಯಕ
ಹಿಂದೂ ಧರ್ಮವನ್ನು ಅವಮಾನಿಸಿದ ಹಿನ್ನೆಲೆ
Team Udayavani, Aug 30, 2023, 3:57 PM IST
ಲಕ್ನೋ: ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಂಗ್ರೆಸ್ ನಾಯಕರೊಬ್ಬರು ಇತ್ತೀಚೆಗೆ “ಹಿಂದೂ ಧರ್ಮ ಒಂದು ನೆಪ” ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ.
ಮೊರಾದಾಬಾದ್‌ನ ಕಾಂಗ್ರೆಸ್‌ನ ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷ ಪಂಡಿತ್ ಗಂಗಾ ರಾಮ್ ಶರ್ಮಾ, ಎಸ್‌ಪಿ ನಾಯಕ ಹಿಂದೂ ಧರ್ಮವನ್ನು ಅವಮಾನಿಸಿದ್ದಾರೆ ಮತ್ತು ಧಾರ್ಮಿಕ ಪುಸ್ತಕ ರಾಮಚರಿತಮಾನಸ್ ಅನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಹುಮಾನ ಘೋಷಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೌರ್ಯ ಅವರು ಟ್ವಿಟರ್ ಪೋಸ್ಟ್‌ನಲ್ಲಿ ಹಿಂದೂ ಧರ್ಮವನ್ನು “ಮೋಸ” ಮತ್ತು “ವಂಚನೆ” ಎಂದು ಲೇವಡಿ ಮಾಡಿದ್ದಾರೆ. ಸಮಾಜದಲ್ಲಿನ ಎಲ್ಲಾ ಅಸಮಾನತೆಗಳಿಗೆ ಬ್ರಾಹ್ಮಣ ಧರ್ಮವೇ ಕಾರಣ ಎಂದು ಅವರು ಹೇಳಿದರು.
‘10 lakhs to cut his tongue’: UP Congress leader issues bounty against Samajwadi Party leader Swami Prasad Maurya over anti-Hindu remarks https://t.co/c3LbSnInOJ via @OpIndia_com
— Avinash K S🇮🇳 (@AvinashKS14) August 30, 2023
“ಬ್ರಾಹ್ಮಣ ಧರ್ಮದ ಬೇರುಗಳು ತುಂಬಾ ಆಳವಾಗಿವೆ ಮತ್ತು ಎಲ್ಲಾ ಅಸಮಾನತೆಗೆ ಬ್ರಾಹ್ಮಣತ್ವವೂ ಕಾರಣ. ಹಿಂದೂ ಎಂಬ ಯಾವುದೇ ಧರ್ಮವಿಲ್ಲ; ಹಿಂದೂ ಧರ್ಮ ಕೇವಲ ನೆಪ ಮಾತ್ರ. ಈ ದೇಶದ ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜನರನ್ನು ಬಲೆಗೆ ಬೀಳಿಸುವ ಸಂಚು ನಡೆಯುತ್ತಿದೆ. ಅದೇ ಬ್ರಾಹ್ಮಣ ಧರ್ಮಕ್ಕೆ ಹಿಂದೂ ಧರ್ಮ ಎಂಬ ಹಣೆಪಟ್ಟಿ ಹಚ್ಚಿ, ಹಿಂದೂ ಧರ್ಮ ಇದ್ದಿದ್ದರೆ ಆದಿವಾಸಿಗಳನ್ನು ಗೌರವಿಸುತ್ತಿದ್ದರು, ದಲಿತರನ್ನು ಗೌರವಿಸುತ್ತಿದ್ದರು, ಹಿಂದುಳಿದವರನ್ನು ಗೌರವಿಸುತ್ತಿದ್ದರು, ಆದರೆ ಎಂತಹ ವಿಪರ್ಯಾಸ..ಎಂದು ಟ್ವಿಟರ್ ನಲ್ಲಿ ಬರೆದಿದ್ದಾರೆ.
ब्राह्मणवाद की जड़े बहुत गहरी है और सारी विषमता का कारण भी ब्राह्मणवाद ही है। हिंदू नाम का कोई धर्म है ही नहीं, हिंदू धर्म केवल धोखा है। सही मायने में जो ब्राह्मण धर्म है, उसी ब्राह्मण धर्म को हिंदू धर्म कहकर के इस देश के दलितों, आदिवासियों, पिछड़ों को अपने धर्म के मकड़जाल में… pic.twitter.com/351EJeSBlY
— Swami Prasad Maurya (@SwamiPMaurya) August 27, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.