Shri Kesavananda Bharati Case: ಶ್ರೀ ಕೇಶವಾನಂದ ಭಾರತೀ ತೀರ್ಪಿನ 50ನೇ ವರ್ಷಾಚರಣೆ

ಸೆ. 2: ಸರಣಿ ಕಾರ್ಯಕ್ರಮ, ವಿಚಾರ ಸಂಕಿರಣ

Team Udayavani, Aug 31, 2023, 12:46 AM IST

keshavananda bharati case

ಮಂಗಳೂರು: ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ವರ್ಸಸ್‌ ಕೇರಳ ಸ್ಟೇಟ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಲ್ಯಾಂಡ್‌ಮಾರ್ಕ್‌ ತೀರ್ಪಿನ ಐವತ್ತನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವರ್ಷಪೂರ್ತಿ ನಡೆಯುವ ಸರಣಿ ಕಾರ್ಯಕ್ರಮ, ವಿಚಾರ ಸಂಕಿರಣದ ಉದ್ಘಾಟನೆ ಸೆ. 2ರಂದು ಬೆಳಗ್ಗೆ 9.30ಕ್ಕೆ ಕಾಸರಗೋಡಿನ ಎಡನೀರು ಮಠದಲ್ಲಿ ನಡೆಯಲಿದೆ ಎಂದು ಲ್ಯಾಂಡ್‌ಮಾರ್ಕ್‌ ತೀರ್ಪಿನ 50ನೇ ವರ್ಷಾಚರಣೆ ಸಮಿತಿ ಅಧ್ಯಕ್ಷ ಎಂ. ನಾರಾಯಣ ಭಟ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ನ್ಯಾ| ಸರಸ ವೆಂಕಟನಾರಾಯಣ ಭಟ್ಟಿ ಅವರು ವರ್ಷಪೂರ್ತಿ ಕಾರ್ಯ ಕ್ರಮಗಳನ್ನು ಉದ್ಘಾಟಿಸುವರು. ಕೇರಳ ಹೈಕೋರ್ಟ್‌ ನ್ಯಾಯಾಧೀಶ ನ್ಯಾ| ಎನ್‌. ನಗರೇಶ್‌ ದಿಕ್ಸೂಚಿ ಭಾಷಣ ಮಾಡುವರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು ಎಂದರು.

ಉದ್ಘಾಟನೆ ಬಳಿಕ “ಕೇಶವಾನಂದ ಭಾರತೀ ಸ್ವಾಮೀಜಿ ತೀರ್ಪಿನ ಪರಿಣಾಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ನಡೆಯಲಿದೆ. ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಉದಯ ಹೊಳ್ಳ, ಕೇರಳ ಹೈಕೋರ್ಟ್‌ನ ಹಿರಿಯ ವಕೀಲ ಅಸಫ್‌ ಆಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದರು.

1975ರಲ್ಲಿ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ವರ್ಸಸ್‌ ಕೇರಳ ಸ್ಟೇಟ್‌ ಪ್ರಕರಣದಲ್ಲಿ 13 ಮಂದಿ ನ್ಯಾಯಾಧೀಶರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ನ ಪೀಠ ಆಸ್ತಿ ಹಕ್ಕು, ಸಂವಿಧಾನಕ್ಕೆ ಸಂಬಂಧಿಸಿ ಮಹತ್ವದ ತೀರ್ಪು ನೀಡಿತ್ತು. ಈ ಲ್ಯಾಂಡ್‌ಮಾರ್ಕ್‌ ತೀರ್ಪಿನ 50ನೇ ವರ್ಷಾಚರಣೆ ನಡೆಸಲು ಸಮಿತಿ ರಚಿಸಿದ್ದು, ಕಾಸರಗೋಡು, ದ.ಕ., ಉಡುಪಿ ಜಿಲ್ಲೆಯ ಎಲ್ಲ ಕಾನೂನು ಕಾಲೇಜುಗಳು ಹಾಗೂ ವಕೀಲರ ಸಂಘಗಳನ್ನು ಸಮಿತಿಯಲ್ಲಿ ಸೇರ್ಪಡೆ ಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ವರ್ಷಪೂರ್ತಿ ಮೂರು ಜಿಲ್ಲೆಗಳು ಮಾತ್ರವಲ್ಲದೆ ರಾಜ್ಯದ ವಿವಿಧ ಕಡೆ, ಹೊಸದಿಲ್ಲಿಯಲ್ಲೂ ವಿಚಾರ ಸಂಕಿರಣ ಸಹಿತ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದರು.

ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ ರೈ, ಕಾಸರಗೋಡು ವಕೀಲರ ಸಂಘದ ಪ್ರದೀಪ್‌ ರಾವ್‌, ಕಾರ್ಯಕ್ರಮ ಸಮಿತಿಯ ಕೆ.ಆರ್‌. ಆಚಾರ್ಯ ಇದ್ದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.