Cauvery ವಿಚಾರದಲ್ಲಿ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಿ: ಬೊಮ್ಮಾಯಿ
Team Udayavani, Aug 31, 2023, 1:16 PM IST
ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದರೂ, ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯೂಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:Jawan; ಆ್ಯಕ್ಷನ್ ಪ್ಯಾಕೇಜ್ ನಲ್ಲಿ ಭಾವನಾತ್ಮಕ ಪಯಣ…: ಬಂತು ಶಾರುಖ್ ‘ಜವಾನ್’ ಟ್ರೇಲರ್
ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು. ಅದು ಕೂಡ ಮಾಡಿಲ್ಲ. ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.