Panaji: ಅಡುಗೆ ಅನಿಲ ಸಬ್ಸಿಡಿ ಘೋಷಿಸಿದ್ದಕ್ಕೆ ಧನ್ಯವಾದ: ಮುಖ್ಯಮಂತ್ರಿ ಸಾವಂತ್ ಟ್ವೀಟ್
Team Udayavani, Aug 31, 2023, 2:29 PM IST
ಪಣಜಿ: ಅಡುಗೆ ಅನಿಲ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಸರಕಾರ ಪ್ರತಿ ಗ್ಯಾಸ್ ಸಿಲಿಂಡರ್ ಗೆ 200 ರೂ. ಸಹಾಯಧನ ಮಂಜೂರು ಮಾಡಿದೆ. ಈ ನಿರ್ಧಾರಕ್ಕೆ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೇಂದ್ರ ಸರ್ಕಾರ ಅಡುಗೆ ಅನಿಲ ಸಬ್ಸಿಡಿ ಘೋಷಿಸಿದ್ದಕ್ಕೆ ಪ್ರಧಾನಿಗೆ ಧನ್ಯವಾದ ಹೇಳಿದ್ದಾರೆ. ಎಲ್ಪಿಜಿ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ಮಂಜೂರು ಮಾಡುವ ಕೇಂದ್ರದ ನಿರ್ಧಾರದ ನಂತರ ಮುಖ್ಯಮಂತ್ರಿ ಸಾವಂತ್ ಟ್ವೀಟ್ ಮಾಡಿದ್ದಾರೆ.
ಎಲ್ಪಿಜಿ ಬೆಲೆಯನ್ನು ರೂ. 200 ಕಡಿಮೆ ಮಾಡುವ ನಿರ್ಧಾರಕ್ಕೆ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು.
ಎಲ್ಪಿಜಿ ಸಿಲಿಂಡರ್ ರಿಫಿಲ್ಗಾಗಿ ಮುಖ್ಯಮಂತ್ರಿಗಳ ಆರ್ಥಿಕ ನೆರವು ಯೋಜನೆಯಡಿ ರಾಜ್ಯದ ಅಂತ್ಯೋದಯ ಅನ್ನ ಯೋಜನೆ ಕುಟುಂಬದ ಫಲಾನುಭವಿಗಳಿಗೆ ಗೋವಾ ಸರ್ಕಾರ ಮೂರು ಎಲ್ಪಿಜಿ ಸಿಲಿಂಡರ್ ಗಳಿಗೆ ವಾರ್ಷಿಕ 275 ರೂ. ನೀಡಲಿದೆ. ಈ ನಿರ್ಧಾರವು ಹಬ್ಬದ ಋತುವಿನಲ್ಲಿ ಗೋವಾ ಮತ್ತು ಭಾರತದಾದ್ಯಂತ ಗ್ರಾಹಕರಿಗೆ ಹೆಚ್ಚಿನ ಸೌಕರ್ಯವನ್ನು ನೀಡುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.