Belagavi: ಉಪ ನೋಂದಣಿ ಕಚೇರಿಗೆ ಲೋಕಾಯುಕ್ತರ ಭೇಟಿ
ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ
Team Udayavani, Aug 31, 2023, 11:00 AM IST
ಬೆಳಗಾವಿ: ಬೆಳಗಾವಿ ದಕ್ಷಿಣ ಭಾಗದಲ್ಲಿರುವ ಉಪ ನೋಂದಣಿ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿದ ಲೋಕಾಯುಕ್ತ
ಅಧಿಕಾರಿಗಳು ಕಾಗದ ಪತ್ರಗಳನ್ನು ಹಾಗೂ ಕಂಪ್ಯೂಟರ್‌ನಲ್ಲಿ ಕೆಲ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು.
ಉಪ ನೋಂದಣಿ ಕಚೇರಿಯಲ್ಲಿಯ ಕೆಲ ವಿಷಯಗಳ ಬಗ್ಗೆ ಸಾರ್ವಜನಿಕರಿಂದ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ
ದಿಢೀರ್ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಸದ್ಯ ಬೆಳಗಾವಿ ದಕ್ಷಿಣ ಭಾಗದಲ್ಲಿಯ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮುದ್ರಾಂಕ ವಿಭಾಗ, ಉಪನೋಂದಣಿ
ಹಾಗೂ ವಿವಾಹ ನೋಂದಣಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ಲೋಕಾಯುಕ್ತ ಎಸ್‌ಪಿ ಹನುಮಂತರಾಯ, ಇನ್ಸಪೆಕ್ಟರ್ ನಿರಂಜನ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೂರು ಬಂದ ನೋಂದಣಿಯಾದ ಆಸ್ತಿಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ದೂರು ಬಂದ ಪ್ರಕಾರ ಕೆಲವು ಆಸ್ತಿಗಳು ಬೇರೆ ಬೇರೆ ಹೆಸರಿನಲ್ಲಿ ನೋಂದಣಿ ಆಗಿವೆಯೋ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕಿದರು. ಕೆಲ ವಿಷಯಗಳ ಬಗ್ಗೆ ಉತ್ತರ ಹೇಳಲು ಉಪನೋಂದಣಿ ಕಚೇರಿ ಅಧಿಕಾರಿಗಳು ತಡಬಡಿಸಿದಾಗ ಲೋಕಾಯುಕ್ತ ಅಧಿಕಾರಿಗಳು ಗರಂ ಆದರು.
ಉಪನೋಂದಣಿ ಕಚೇರಿಯಲ್ಲಿ ಕೆಲ ಆಸ್ತಿಗಳನ್ನು ಬೇನಾಮಿ ಹೆಸರಿನಲ್ಲಿ ನೋಂದಣಿ ಮಾಡಲಾಗುತ್ತಿದೆ. ಹಣ ಪಡೆದು ಬೇರೆಯವರ ಹೆಸರಿನಲ್ಲಿ ನೋಂದಣಿ ಮಾಡುತ್ತಿರುವುದು. ಲಂಚ ಪಡೆದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲಾಗುತ್ತಿದೆ. ರಿಯಲ್ ಎಸ್ಟೇಟ್ ಹಾವಳಿ ಅತಿ ಹೆಚ್ಚಾಗಿದ್ದು, ದಲ್ಲಾಳಿಗಳೇ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಅಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಎಂಬುದು ಸೇರಿದಂತೆ ಅನೇಕ ದೂರುಗಳನ್ನು ಸಾರ್ವಜನಿಕರು ಲೋಕಾಯುಕ್ತ ಠಾಣೆಗೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.