Bhatkal: ವಂಶವೃಕ್ಷ ಪಡೆಯುವ ಪದ್ಧತಿ ಸರಳೀಕರಣಗೊಳಿಸಿ
ಹಲವು ಕುಟುಂಬಗಳಲ್ಲಿ ತಮ್ಮ ಹಿರಿಯರ ಮರಣ ದಾಖಲೆಗಳೇ ಇಲ್ಲ
Team Udayavani, Aug 31, 2023, 6:05 PM IST
ಭಟ್ಕಳ: ಕುಟುಂಬದ ವಂಶವೃಕ್ಷ ಪಡೆಯಲು ಮೃತರ ಮರಣ ದಾಖಲೆ ಕೇಳುತ್ತಿರುವುದರಿಂದ ಅನೇಕ ಕುಟುಂಬಗಳಿಗೆ ತೊಂದರೆಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಕೋರಿ ಉತ್ತರ ಕನ್ನಡ ಜಿಲ್ಲಾ ದಿ. ಡಿ. ದೇವರಾಜು ಅರಸು ವಿಚಾರ ವೇದಿಕೆಯಿಂದ ಸಹಾಯಕ ಆಯುಕ್ತೆ ಡಾ| ನಯನಾ ಎನ್.ಗೆ ಮನವಿ ಸಲ್ಲಿಸಲಾಯಿತು.
ಮನವಿಯನ್ನು ಕಂದಾಯ ಸಚಿವ ಕೃಷ್ಣ ಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಜಿಲ್ಲಾಧಿಕಾರಿಗಳಿಗೂ ಕಳುಹಿಸಲಾಗಿದ್ದು, ಮನವಿಯಲ್ಲಿ ಈ ಹಿಂದೆ ಗ್ರಾಮದಲ್ಲಿ ಯಾವುದೇ ಕುಟುಂಬಕ್ಕೆ ಜೀವಂತ ಸದಸ್ಯರ ಪ್ರಮಾಣ ಪತ್ರ ಅಥವಾ ವಂಶವೃಕ್ಷ ಅಗತ್ಯವಿದ್ದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪಂಚನಾಮೆ ತಯಾರಿಸಿ ಮಾಡಿಕೊಡುತ್ತಿದ್ದರು. ಆದರೆ ಗಣಕೀಕೃತ ಪದ್ಧತಿ ಜಾರಿಯಾದ ಮೇಲೆ ಈ ಪದ್ಧತಿ ನಿಂತು ಹೋಗಿದ್ದು, ಜನಸಾಮಾನ್ಯರು ಪರದಾಡುವಂತಾಗಿದೆ.
ಜಿಲ್ಲೆಯಲ್ಲಿ ಹಲವು ಕುಟುಂಬಗಳಲ್ಲಿ ತಮ್ಮ ಹಿರಿಯರ ಮರಣ ದಾಖಲೆಗಳೇ ಇಲ್ಲವಾಗಿದ್ದು, ಅವರೆಲ್ಲರೂ ವಂಶವೃಕ್ಷಕ್ಕಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಈ ಹಿಂದೆ ಮರಣ ಹೊಂದಿದವರ ಮರಣ ದಾಖಲೆ ಮಾಡಬೇಕೆನ್ನುವ ಪರಿಕಲ್ಪನೆ ಕೂಡಾ ಇಲ್ಲದ ಜನತೆ ಹಾಲಿ ತಮ್ಮ ಜಮೀನು ವಾರಸಾ ಮಾಡಲು, ಇತರೆ ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ ಉದ್ಭವಿಸಿದೆ ಎಂದು ಹೇಳಲಾಗಿದೆ.
ಈ ಹಿಂದಿನಂತೆಯೇ ಗ್ರಾಮ ಲೆಕ್ಕಾಧಿಕಾರಿಗಳು ಮರಣ ದಾಖಲೆ ಲಭ್ಯವಿಲ್ಲದ ಪ್ರಕರಣಗಳಲ್ಲಿ ಪಂಚರ ಅಭಿಪ್ರಾಯ ಪಡೆದು ಪ್ರಮಾಣ ಪತ್ರ ನೀಡುವಂತಾಗಬೇಕು ಎಂದೂ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ್, ಗಣಪತಿ ನಾಯ್ಕ ಜಾಲಿ, ವಿಷ್ಣು ದೇವಾಡಿಗ ಬೆಂಗ್ರೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.