Sowjanya: ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ: ಸರಕಾರಕ್ಕೆ ಹೈಕೋರ್ಟ್‌ ಸೂಚನೆ


Team Udayavani, Aug 31, 2023, 11:46 PM IST

soujanya case …

ಬೆಂಗಳೂರು: ಸೌಜನ್ಯಾ ಕೊಲೆ ಪ್ರಕರಣ ಮುಂದಿಟ್ಟು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರ ವಿರುದ್ಧ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸರಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ ಮತ್ತು ನಂದೀಶ್‌ ಕುಮಾರ್‌ ಜೈನ್‌ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲ ಎಸ್‌. ರಾಜಶೇಖರ್‌ ವಾದ ಮಂಡಿಸಿದರು.

ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ದಕ್ಷಿಣ ಕನ್ನಡ ಎಸ್ಪಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್‌ ಠಾಣಾಧಿಕಾರಿಗಳು, ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ನೋಟಿಸ್‌ ಜಾರಿಗೊಳಿಸಿತು. ಅಲ್ಲದೆ, ಅಧೀನ ನ್ಯಾಯಾಲಯದ ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ನಿರ್ದೇಶನ ನೀಡಿತು. ಕೋರ್ಟ್‌ ಆದೇಶ ಉಲ್ಲಂ ಸಿ ಯಾವುದೇ ಹೇಳಿಕೆ ನೀಡಬಾರದು ಎಂದು ಮಹೇಶ್‌ ಶೆಟ್ಟಿ ಅವರಿಗೆ ಮೌಖೀಕ ಎಚ್ಚರಿಕೆಯನ್ನೂ ನೀಡಿದೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ತನಿಖೆಯನ್ನಾದರೂ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕು. ನ್ಯಾಯಾಂಗ ಮತ್ತು ಧರ್ಮಸ್ಥಳದ ಮಂಜುನಾಥ ದೇವಾಲಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡುತ್ತಿರುವ ಮಹೇಶ್‌ ಶೆಟ್ಟಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯ ಮತ್ತು ಅದಕ್ಕೆ ಸೇರಿದ ಸಂಸ್ಥೆಗಳು, ಟ್ರಸ್ಟ್‌ ವಿರುದ್ಧ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ಧಾರೆ. ನ್ಯಾಯಾಂಗ ಮತ್ತು ನ್ಯಾಯಾಧೀಶರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡುತ್ತಿ¨ªಾರೆ. ಪೊಲೀಸ್‌ ಇಲಾಖೆಯ ಬಗ್ಗೆಯೂ ಸಾರ್ವಜನಿಕವಾಗಿ ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಜತೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.